ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೆಪಿಸಿಸಿ ಅಧ್ಯಕ್ಷರ ಘೋಷಣೆ ಮತ್ತಷ್ಟು ವಿಳಂಬ?

|
Google Oneindia Kannada News

ಬೆಂಗಳೂರು, ಜನವರಿ 17 : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಯಾರು?. ಕರ್ನಾಟಕದಲ್ಲಿ ಹಲವು ದಿನಗಳಿಂದ ಈ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಡಿ. ಕೆ. ಶಿವಕುಮಾರ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ. ಆದರೆ, ಎಐಸಿಸಿ ಅಧಿಕೃತ ಘೋಷಣೆ ಮಾಡಿಲ್ಲ.

15 ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶದ ಬಳಿಕ ದಿನೇಶ್ ಗುಂಡೂರಾವ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಮಧುಸೂದನ್ ಮಿಸ್ತ್ರಿ ನೇತೃತ್ವದ ನಿಯೋಗ ರಾಜ್ಯಕ್ಕೆ ಆಗಮಿಸಿ ಕೆಪಿಸಿಸಿ ಅಧ್ಯಕ್ಷರು ಯಾರಾಗಬೇಕು? ಎಂದು ವಿವಿಧ ನಾಯಕರ ಅಭಿಪ್ರಾಯ ಸಂಗ್ರಹಿದೆ.

ಕುತೂಹಲ ಮೂಡಿಸಿದ ಸಿದ್ದರಾಮಯ್ಯ, ಡಿ. ಕೆ. ಶಿವಕುಮಾರ್ ಭೇಟಿ! ಕುತೂಹಲ ಮೂಡಿಸಿದ ಸಿದ್ದರಾಮಯ್ಯ, ಡಿ. ಕೆ. ಶಿವಕುಮಾರ್ ಭೇಟಿ!

KPCC President

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಹ ದೆಹಲಿಗೆ ಹೋಗಿ ಬಂದಿದ್ದಾರೆ. ಆದರೆ, ಕೆಪಿಸಿಸಿ ಅಧ್ಯಕ್ಷರು ಯಾರು? ಎಂದು ಎಐಸಿಸಿ ಇನ್ನೂ ಘೋಷಣೆ ಮಾಡಿಲ್ಲ. ಗುರುವಾರ ಘೋಷಣೆಯಾಗುವ ನಿರೀಕ್ಷೆ ಇತ್ತು. ಶುಕ್ರವಾರ ರಾತ್ರಿಯಾದರೂ ಕಾಂಗ್ರೆಸ್ ಈ ಬಗ್ಗೆ ಯಾವುದೇ ಪ್ರಕಟಣೆ ಹೊರಡಿಸಿಲ್ಲ.

ಕೆಪಿಸಿಸಿ ಮುಂದಿನ ಸಾರಥಿ ಡಿಕೆ ಶಿವಕುಮಾರ್?ಕೆಪಿಸಿಸಿ ಮುಂದಿನ ಸಾರಥಿ ಡಿಕೆ ಶಿವಕುಮಾರ್?

ಕಾಂಗ್ರೆಸ್ ಮೂಲಗಳ ಮಾಹಿತಿ ಪ್ರಕಾರ ಸೋಮವಾರದ ಬಳಿಕ ಕೆಪಿಸಿಸಿ ಅಧ್ಯಕ್ಷರ ಘೋಷಣೆಯಾಗಲಿದೆ. ಕಾರ್ಯಾಧ್ಯಕ್ಷರ ನೇಮಕದ ಬಗ್ಗೆ ಹೈಕಮಾಂಡ್ ಒಮ್ಮತದ ತೀರ್ಮಾನ ಕೈಗೊಳ್ಳಲಿದ್ದು, ಅಧ್ಯಕ್ಷ ಮತ್ತು ಕಾರ್ಯಾಧ್ಯಕ್ಷರ ಹೆಸರನ್ನು ಒಟ್ಟಿಗೆ ಘೋಷಣೆ ಮಾಡಲಿದೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನ ಘೋಷಣೆಗೂ ಮುನ್ನ ಕಬ್ಬಾಳಮ್ಮಗೆ ಪೂಜೆ ಸಲ್ಲಿಸಿದ ಡಿಕೆಶಿ ತಾಯಿಕೆಪಿಸಿಸಿ ಅಧ್ಯಕ್ಷ ಸ್ಥಾನ ಘೋಷಣೆಗೂ ಮುನ್ನ ಕಬ್ಬಾಳಮ್ಮಗೆ ಪೂಜೆ ಸಲ್ಲಿಸಿದ ಡಿಕೆಶಿ ತಾಯಿ

ಸಾಮಾಜಿಕ ಜಾಲತಾಣಗಳಲ್ಲಿ ಡಿ. ಕೆ. ಶಿವಕುಮಾರ್‌ಗೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ಆದರೆ, ಎಐಸಿಸಿ ಕೆಪಿಸಿಸಿ ಸಾರಥ್ಯ ಯಾರಿಗೆ? ಎಂಬ ಗುಟ್ಟನ್ನು ಬಿಟ್ಟುಕೊಟ್ಟಿಲ್ಲ. ಅದರಲ್ಲೂ ಸಿದ್ದರಾಮಯ್ಯ ದೆಹಲಿ ಭೇಟಿ ಬಳಿಕ ಲೆಕ್ಕಾಚಾರ ಬದಲಾಗಿದೆ.

4 ಕಾರ್ಯಾಧ್ಯಕ್ಷರು? : ಕೆಪಿಸಿಸಿ ಅಧ್ಯಕ್ಷರ ಜೊತೆಗೆ 4 ಕಾರ್ಯಾಧ್ಯಕ್ಷರನ್ನು ನೇಮಕ ಮಾಡಲಾಗುತ್ತದೆ ಎಂಬ ಸುದ್ದಿಗಳು ಹಬ್ಬಿವೆ. ಸಿದ್ದರಾಮಯ್ಯ ಹೇಳಿದ ನಾಯಕರಿಗೆ ಕಾರ್ಯಾಧ್ಯಕ್ಷರ ಪಟ್ಟ ನೀಡಲಾಗುತ್ತದೆ ಎಂಬುದು ಸುದ್ದಿ. ಕಾರ್ಯಾಧ್ಯಕ್ಷರ ನೇಮಕ ಅಂತಿಮವಾದ ಬಳಿ ಅಧ್ಯಕ್ಷರ ಘೋಷಣೆಯೂ ನಡೆಯಲಿದೆ.

English summary
AICC may delay announcing Karnataka Congress president name. Party may announced name after January 20, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X