Mallikarjun Kharge: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ಏರುಪೇರು, ಆಸ್ಪತ್ರೆಗೆ ದಾಖಲು!
ಬೆಂಗಳೂರು, ಅಕ್ಟೋಬರ್ 01: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ಸದಸ್ಯರಾದ ಮಲ್ಲಿಕಾರ್ಜುನ ಖರ್ಗೆ ಅವರು ಅನಾರೋಗ್ಯಕ್ಕೆ ತುತ್ತಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎನ್ನಲಾಗಿದ್ದು, ಹಿರಿಯ ವೈದ್ಯರು ಅವರ ಆರೋಗ್ಯದ ಮೇಲೆ ನಿಗಾ ಇರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇಂದು ಬೆಳ್ಳಂಬೆಳಗ್ಗೆಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನಾರೋಗ್ಯಕ್ಕೀಡಾಗಿದ್ದು, ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಖರ್ಗೆ ಅವರು ಸಾಮಾನ್ಯ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯದ ಮೇಲೆ ಹಿರಿಯ ವೈದ್ಯರು ನಿಗಾ ಇರಿಸಿದ್ದಾರೆ. ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಕೆಲ ದಿನಗಳಿಂದ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಮೂಲಗಳು ತಿಳಿಸಿವೆ.

ಈಗಾಗಲೇ ಕಲ್ಯಾಣ ಕರ್ನಾಟಕದಲ್ಲಿ ಉಂಟಾದ ಪ್ರವಾಹದ ಕುರಿತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಅವರು ಸೋಮವಾರದಂದು ಮಾಹಿತಿ ಕಲೆ ಹಾಕಿದ್ರು. ಇನ್ನೂ ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳವಾರ ಎಂದಿನಂತೆಯೇ ರಾಜಕೀಯ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು. ಉತ್ತರ ಕರ್ನಾಟಕದಲ್ಲಿ ಉಂಟಾಗಿರುವ ಭಾರಿ ಪ್ರವಾಹ ಮತ್ತು ಬೆಳೆ ಹಾನಿ ಬಗ್ಗೆ ಬೆಂಗಳೂರಿನಲ್ಲಿ ಅವರು ಮಂಗಳವಾರ ಪ್ರತಿಕ್ರಿಯಿಸಿದ್ದಾರೆ. ಅಲ್ಲದೆ, ಕಲ್ಯಾಣ ಕರ್ನಾಟಕದಲ್ಲಿ ಉಂಟಾಗಿರುವ ಪ್ರವಾಹ ಮತ್ತು ಬೆಳೆ ಹಾನಿಗೆ ಪರಿಹಾರ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ವಿವರವಾದ ಪತ್ರ ಬರೆದು ಮನವಿ ಮಾಡುವುದಾಗಿ ಹೇಳಿದ್ದಾರೆ.
ಇನ್ನೂ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹ ಪರಿಸ್ಥಿತಿಯ ಅವಲೋಕನ ಮಾಡಿದ್ದು, ಸೂಕ್ತ ಪರಿಹಾರದ ಭರವಸೆ ನೀಡಿದ್ದಾರೆ. ಅಲ್ಲದೆ, ಮನೆ ಕಳೆದುಕೊಂಡವರಿಗೆ ಮತ್ತು ಬೆಳೆ ಹಾನಿಯಾದವರಿಗೆ ಏನೇನು ಪರಿಹಾರ ನೀಡಬೇಕು ಎಂಬುದನ್ನು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸೂಕ್ತ ಪರಿಹಾರಕ್ಕೆ ಮಲ್ಲಿಕಾರ್ಜುನ್ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಚರ್ಚೆ ನಡೆಸಿದ್ದರು ಎಂದು ಮೂಲಗಳು ತಿಳಿಸಿವೆ.
ವೈಮಾನಿಕ ಸಮೀಕ್ಷೆ ಮೂಲಕ ಪ್ರವಾಹ ಹಾನಿ ಪರಿಶೀಲಿಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಾಲ್ಕು ಜಿಲ್ಲೆಗಳ ಶಾಸಕರು, ಸಚಿವರು ಮತ್ತು ಅಧಿಕಾರಿಗಳ ಜತೆ ಮಂಗಳವಾರ ಸಭೆಯ ನಡೆಸಿದರು. ಈ ವೇಳೆ ಮಾತನಾಡಿದ ಸಿಎಂ, ಪ್ರವಾಹ ಇಳಿಕೆಯಾದ ಬಳಿಕ ವೈಜ್ಞಾನಿಕ ಜಂಟಿ ಸಮೀಕ್ಷೆ ನಡೆಸಿ ತುರ್ತಾಗಿ ಪರಿಹಾರ ನೀಡಲಾಗುತ್ತದೆ ಎಂದು ಭರವಸೆ ತಿಳಿಸಿದರು.












Click it and Unblock the Notifications