‘ಕಲ್ಯಾಣ ಕೇಂದ್ರಿತ’ ಸರ್ಕಾರ ತರಲು ಮತದಾರರಲ್ಲಿ ಮನವಿ ಮಾಡಿದ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು, ಮೇ 10: ಕರ್ನಾಟಕದ ಜನತೆ ಪ್ರಗತಿಪರ, ಪಾರದರ್ಶಕ ಮತ್ತು ಕಲ್ಯಾಣ ಕೇಂದ್ರಿತ ಸರ್ಕಾರವನ್ನು ಆಯ್ಕೆ ಮಾಡಲು ನಿರ್ಧರಿಸಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಹೇಳಿದ್ದಾರೆ. ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಬೇಕು ಎಂದು ಮನವಿ ಮಾಡಿದರು.

2024ರ ಲೋಕಸಭೆ ಚುನಾವಣೆಗೆ ಮುನ್ನ ನಡೆಯುತ್ತಿರುವ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ದಕ್ಷಿಣದ ಕೋಟೆಯನ್ನು ಉಳಿಸಿಕೊಳ್ಳುವ ಮೂಲಕ ಇತಿಹಾಸವನ್ನು ಮರು ಸೃಷ್ಟಿಸಲು ಹೊರಟಿದೆ. ಆಡಳಿತಾರೂಢ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಶತಾಯಗತಾಯ ಯತ್ನ ನಡೆಸಿದೆ. ಕರ್ನಾಟಕದಲ್ಲಿ ಬುಧವಾರದಂದು ವಿಧಾನಸಭೆ ಚುನಾವಣೆಗೆ ಮತದಾನ ಆರಂಭವಾಗಿದೆ.

Mallikarjun Kharge

'ಕರ್ನಾಟಕದ ಜನರು ಪ್ರಗತಿಪರ, ಪಾರದರ್ಶಕ ಮತ್ತು ಕಲ್ಯಾಣ-ಆಧಾರಿತ ಸರ್ಕಾರವನ್ನು ಆಯ್ಕೆ ಮಾಡಲು ನಿರ್ಧರಿಸಿದ್ದಾರೆ' ಎಂದು ಖರ್ಗೆ ಟ್ವೀಟ್ ಮಾಡಿದ್ದಾರೆ.

ಇಂದು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವ ಸಮಯ ಬಂದಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

'ಉತ್ತಮ ಭವಿಷ್ಯಕ್ಕಾಗಿ ಈ ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಭಾಗವಹಿಸಲು ಮೊದಲ ಬಾರಿಗೆ ಮತದಾರರನ್ನು ನಾವು ಸ್ವಾಗತಿಸುತ್ತೇವೆ' ಎಂದು ಕಾಂಗ್ರೆಸ್ ಅಧ್ಯಕ್ಷರು ಟ್ವೀಟ್‌ ಮಾಡಿದ್ದಾರೆ.

Mallikarjun Kharge

ಪ್ರಮುಖವಾಗಿ ಆಡಳಿತಾರೂಢ ಬಿಜೆಪಿ, ಕಾಂಗ್ರೆಸ್ ಮತ್ತು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಜನತಾದಳ (ಜಾತ್ಯತೀತ) ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಇಂದು ಕರ್ನಾಟಕದ 224 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ.

ಬಿಗಿ ಭದ್ರತೆಯ ನಡುವೆ ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನ ಸಂಜೆ 6ರವರೆಗೆ ಮುಂದುವರಿಯಲಿದೆ. ಮೇ 13 ರಂದು ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ ಹೊರಬರಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+