ಹಲವು ವರ್ಷಗಳಿಂದ ನಿರುದ್ಯೋಗಿಯಾಗಿರುವ ಯುವಕರಿಗೂ ಯುವನಿಧಿ ವಿಸ್ತರಿಸಿ: ಸಿಎಂಗೆ ಎಐಡಿವೈಒ ಮನವಿ
ಬೆಂಗಳೂರು, ಜೂನ್. 27: ಐದು ಗ್ಯಾರಂಟಿಗಳನ್ನು ಜಾರಿ ಮಾಡಿರುವ ಕಾಂಗ್ರೆಸ್ ಸರ್ಕಾರಕ್ಕೆ ಆಲ್ ಇಂಡಿಯಾ ಡೆಮಾಕ್ರಟಿಕ್ ಯೂತ್ ಆರ್ಗನೈಸೇಶನ್ (ಎಐಡಿವೈಒ) ನಿಯೋಗ ಮತ್ತೊಂದು ಮನವಿ ಮಾಡಿದೆ. ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವ ನಿಧಿಯನ್ನು ರಾಜ್ಯದ ಎಲ್ಲಾ ನಿರುದ್ಯೋಗಿ ಯುವಕರಿಗೂ ವಿಸ್ತರಿಸಬೇಕು ಎಂದು ಒತ್ತಾಯಿಸಿದೆ.
ಜೂನ್ 26 ರಂದು ಎಐಡಿವೈಒ( AIDYO) ಸ್ಥಾಪನಾ ದಿನವಾಗಿದ್ದು, 58ನೇ ಸ್ಥಾಪನಾ ದಿನದ ಹಿನ್ನೆಲೆಯಲ್ಲಿ ಸಂಘಟನೆಯ ರಾಜ್ಯ ಸಮಿತಿಯ ನಿಯೋಗವೊಂದು ಅಖಿಲ ಭಾರತ ಉಪಾಧ್ಯಕ್ಷ ಡಾ. ಜಿ.ಶಶಿಕುಮಾರ್ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿ ಮಾಡಿದೆ. ಈ ವೇಳೆ ರಾಜ್ಯ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ನಿರುದ್ಯೋಗ ಭತ್ಯೆ ನೀಡಿಕೆ ಯೋಜನೆಯ ಜಾರಿಗಾಗಿ ಅಭಿನಂದನೆ ಸಲ್ಲಿಸಿ, ಈ ನೀತಿಯನ್ನು ಹಲವು ವರ್ಷಗಳಿಂದ ನಿರುದ್ಯೋಗದಿಂದ ಪರಿತಪಿಸುತ್ತಿರುವ ಎಲ್ಲ ನಿರುದ್ಯೋಗಿಗಳಿಗೂ ವಿಸ್ತರಿಸಬೇಕು ಎಂದು ಆಗ್ರಹಿಸಿದೆ.

ಯುವನಿಧಿ ಯೋಜನೆ ಅಡಿಯಲ್ಲಿ 2022- 23ನೇ ಸಾಲಿನಲ್ಲಿ ಉತ್ತೀರ್ಣರಾಗಿ 6 ತಿಂಗಳು ಉದ್ಯೋಗ ಸಿಗದೆ ಇರುವ ವೃತ್ತಿಪರ ಕೋರ್ಸ್ ಒಳಗೊಂಡು ಎಲ್ಲಾ ಪದವೀಧರರರಿಗೆ ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳ ಅವಧಿಗೆ ಪ್ರತಿ ತಿಂಗಳು 3,000 ರೂಪಾಯಿ ಸಿಗಲಿದೆ. ಹಾಗೆಯೇ ಡಿಪ್ಲೊಮಾ ಪದವೀಧರರಿಗೆ ಮಾಸಿಕ 1,500 ರೂಪಾಯಿ ನಿರುದ್ಯೋಗ ಭತ್ಯೆ ಸಿಗಲಿದೆ.
ಇನ್ನು, ಎಐಡಿವೈಒ ನಿಯೋಗವು ಇತ್ತೀಚೆಗೆ ಕರ್ನಾಟಕ ಪರೀಕ್ಷೆ ಪ್ರಾಧಿಕಾರವು ಐದು ನಿಗಮಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ 1,000 ರೂ. ದುಬಾರಿ ಅರ್ಜಿ ಶುಲ್ಕವನ್ನು ನಿಗದಿ ಮಾಡಿರುವುದನ್ನು ಮುಖ್ಯ ಮಂತ್ರಿಗಳ ಗಮನಕ್ಕೆ ತಂದಿದೆ. ಅದನ್ನು ವಾಪಸ್ಸು ಪಡೆಯುವಂತೆ ಮನವಿ ಸಲ್ಲಿಸಿದ್ದು, ಜೊತೆಯಲ್ಲಿ, ನೇಮಕಾತಿಗಾಗಿ ನಡೆಯುವ ಪ್ರವೇಶ ಪರೀಕ್ಷೆ ಬರೆಯಲು ಹೋಗುವ ನಿರುದ್ಯೋಗಿ ಯುವಕರಿಗೆ ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣ ಮಾಡಲು ಅವಕಾಶ ಮಾಡಿಕೊಡಬೇಕೆಂಬ ಬೇಡಿಕೆಯನ್ನು ಸರ್ಕಾರದ ಮುಂದಿಟ್ಟಿದೆ.
ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಜೇಷನ್ ಅಧ್ಯಕ್ಷ ಜಯಣ್ಣ ಅವರನ್ನೊಳಗೊಂಡ ನಿಯೋಗವು ಮುಖ್ಯಮಂತ್ರಿ @siddaramaiah ಅವರನ್ನು ಇಂದು ಭೇಟಿಮಾಡಿ ಕೆಲವು ಪ್ರಮುಖ ಸಂಗತಿಗಳ ಕುರಿತು ಚರ್ಚಿಸಿದರು. pic.twitter.com/xXkQPmDql5
— CM of Karnataka (@CMofKarnataka) June 26, 2023
ರಾಜ್ಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು, ನೇಮಕಾತಿಯಲ್ಲಿನ ಭ್ರಷ್ಟಾಚಾರ ತಡೆಯಬೇಕು, ಯುವಜನರನ್ನು ದಾರಿ ತಪ್ಪಿಸುವ ಶಕ್ತಿಗಳನ್ನು ಮಟ್ಟಹಾಕಬೇಕು, ದ್ವೇಷದ ರಾಜಕಾರಣ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ನೇಮಕಾತಿಗಾಗಿನ ಎಲ್ಲಾ ತರಹದ ಅರ್ಜಿ ಶುಲ್ಕಗಳನ್ನು ಕೈಬಿಡಬೇಕು, ಯುವಜನತೆಯ ಸಾಂಸ್ಕೃತಿಕ ಅಧ:ಪತನಕ್ಕೆ ಕಾರಣವಾದ ಮಾಧ್ಯಮಗಳಲ್ಲಿನ ಅಶ್ಲೀಲತೆ, ಮಧ್ಯ ಮಾದಕ ವಸ್ತುಗಳಿಗೆ ಕಡಿವಾಣ ಹಾಕಬೇಕು ಎಂಬ ಹತ್ತು ಬೇಡಿಕೆಗಳ ಅಗ್ರಹ ಪತ್ರವನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗಿದೆ.
ಈ ನಿಯೋಗದಲ್ಲಿ ಸಂಘಟನೆಯ ರಾಜ್ಯ ಅಧ್ಯಕ್ಷರಾದ ಶರಣಪ್ಪ ಉದ್ಬಾಳ್, ರಾಜ್ಯ ಕಾರ್ಯದರ್ಶಿ ಸಿದ್ದಲಿಂಗ ಬಾಗೇವಾಡಿ, ರಾಜ್ಯ ಉಪಾಧ್ಯಕ್ಷ ಕೃಷ್ಣ, ರಾಜ್ಯ ಖಜಾಂಚಿ ಜಯಣ್ಣ, ರಾಜ್ಯ ಸಮಿತಿ ಸದಸ್ಯರಾದ ರಾಜಶೇಖರ, ಪೂರ್ಣಿಮ ಹಾಗೂ ಸದಸ್ಯರಾದ ಅರುಣಕುಮಾರ್ ಇದ್ದಾರೆ. ನಿಯೋಗದೊಂದಿಗೆ ಚರ್ಚೆ ನಡೆಸಿದ ಮುಖ್ಯಮಂತ್ರಿಗಳು, ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ಈ ಬಗ್ಗೆ "ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಜೇಷನ್ ಅಧ್ಯಕ್ಷ ಜಯಣ್ಣ ಅವರನ್ನೊಳಗೊಂಡ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ಭೇಟಿಮಾಡಿ ಕೆಲವು ಪ್ರಮುಖ ಸಂಗತಿಗಳ ಕುರಿತು ಚರ್ಚಿಸಿದರು" ಎಂದು ಮುಖ್ಯಮಂತ್ರಿ ಅವರ ಅಧಿಕೃತ ಟ್ವಿಟರ್ ಪೇಜ್ ಟ್ವೀಟ್ ಮಾಡಿದೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಇನ್ಮುಂದೆ KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ -
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Ugadi 2026: ಹಬ್ಬದ ಕಳೆ ಹೆಚ್ಚಿಸುವ ಸುಂದರ ರಂಗೋಲಿಗಳು; ಸರಳ, ಚುಕ್ಕಿ ಹಾಗೂ ಬಣ್ಣದ ರಂಗೋಲಿ ಐಡಿಯಾ ಇಲ್ಲಿದೆ












Click it and Unblock the Notifications