ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

224 ಕ್ಷೇತ್ರಗಳಲ್ಲಿ ಎಐಎಂಇಪಿ ಏಕಾಂಗಿಯಾಗಿ ಸ್ಪರ್ಧೆ

|
Google Oneindia Kannada News

ಬೆಂಗಳೂರು, ಮಾರ್ಚ್ 10 : '2018ರ ವಿಧಾನಸಭೆ ಚುನಾವಣೆಯಲ್ಲಿ ಎಐಎಂಇಪಿ ಕರ್ನಾಟಕದ ಎಲ್ಲಾ 224 ಕ್ಷೇತ್ರಗಳಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲಿದೆ' ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಡಾ. ನೌಹೀರಾ ಶೇಖ್ ತಿಳಿಸಿದರು.

ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆಮ್ ಇಂಡಿಯಾ ಮಹಿಳಾ ಎಂಪರ್‌ಮೆಂಟ್ ಪಾರ್ಟಿ (ಎಐಎಂಇಪಿ) ಅಧ್ಯಕ್ಷೆ ಡಾ.ನೌಹೀರಾ ಶೇಖ್ ಅವರು, 'ರಾಷ್ಟ್ರೀಯ ಪಕ್ಷಗಳ ಕೆಲವರು ಹೊಂದಾಣಿಕೆಗಾಗಿ ನಮ್ಮನ್ನು ಸಂಪರ್ಕಿಸಿದ್ದಾರೆ' ಎಂದರು.

ಕರ್ನಾಟಕ ಚುನಾವಣೆ : 100 ಕ್ಷೇತ್ರಗಳಲ್ಲಿ ಎನ್‌ಸಿಪಿ ಸ್ಪರ್ಧೆಕರ್ನಾಟಕ ಚುನಾವಣೆ : 100 ಕ್ಷೇತ್ರಗಳಲ್ಲಿ ಎನ್‌ಸಿಪಿ ಸ್ಪರ್ಧೆ

'ಯಾವುದೇ ಪಕ್ಷದ ಜೊತೆ ಹೊಂದಾಣಿಕೆ ಮಾಡಿಕೊಳ್ಳದೇ ಎಐಎಂಇಪಿ ರಾಜ್ಯದ 224 ಕ್ಷೇತ್ರಗಳಲ್ಲಿಯೂ ಸ್ಪರ್ಧೆ ಮಾಡಲಿದೆ. ಭ್ರಷ್ಟಾಚಾರ ಮುಕ್ತ ಆಡಳಿತ ಕರ್ನಾಟಕಕ್ಕೆ ಅಗತ್ಯವಿದೆ. ಈ ನಿಟ್ಟಿನಲ್ಲಿ ಪಕ್ಷ ಕೆಲಸ ಮಾಡಲಿದೆ' ಎಂದು ಹೇಳಿದರು.

Nowhera Shaik

'ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ನಾನು ಮಹಿಳೆಯರನ್ನು ಸದೃಢರನ್ನಾಗಿಸುವ ಉದ್ದೇಶದಿಂದ ರಾಜಕೀಯಕ್ಕೆ ಪ್ರವೇಶಿಸಿದ್ದೇನೆ. ಹಾಗೆಂದು ಮಹಿಳೆಯರಿಗೆ ಮಾತ್ರ ಟಿಕೆಟ್ ಮೀಸಲಿಡುವುದಿಲ್ಲ. ಶೇ 40ರಷ್ಟು ಸ್ಥಾನಗಳಲ್ಲಿ ಮಾತ್ರ ಮಹಿಳೆಯರು ಸ್ಪರ್ಧಿಸಲಿದ್ದಾರೆ' ಎಂದು ವಿವರಣೆ ನೀಡಿದರು.

ಚುನಾವಣಾ ಕಾಲ : ಕರ್ನಾಟಕದಲ್ಲಿ ಹಲವು ಪಕ್ಷಗಳ ಉದಯ!ಚುನಾವಣಾ ಕಾಲ : ಕರ್ನಾಟಕದಲ್ಲಿ ಹಲವು ಪಕ್ಷಗಳ ಉದಯ!

'ಈಗಾಗಲೇ 13 ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಪಕ್ಷವನ್ನು ಸಂಘಟಿಸಿದ್ದೇನೆ. ಚುನಾವಣೆಗೆ ಇನ್ನೂ ಎರಡು ತಿಂಗಳು ಇದೆ. ಉಳಿದ 17 ಜಿಲ್ಲೆಗಳಲ್ಲಿಯೂ ಪ್ರವಾಸ ಮಾಡುತ್ತೇನೆ. ಚುನಾವಣೆ ದಿನಾಂಕ ಘೋಷಣೆಯಾದ ಬಳಿಕ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ' ಎಂದರು.

'ರಾಜ್ಯದ ರಾಜಕೀಯದ ಕುರಿತು ನಾನು ಸಮೀಕ್ಷೆ ಮಾಡಿಸಿದ್ದೇನೆ. ನಮ್ಮ ಪಕ್ಷದ ಪರವಾಗಿ ಬೆಂಬಲ ವ್ಯಕ್ತವಾಗಿದೆ. 30 ರಿಂದ 40 ಸ್ಥಾನಗಳಲ್ಲಿ ಪಕ್ಷ ಜಯಗಳಿಸಲಿದೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.

English summary
All India Mahila Empowerment Party will contest in all 224 assembly constituency of Karnataka said, party National President Dr. Nowhera Shaik.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X