ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಖಂಡ ಶ್ರೀನಿವಾಸಮೂರ್ತಿ 'ಕೈ' ತಪ್ಪಲಿದೆ ಪುಲಿಕೇಶಿ ನಗರ ಟಿಕೆಟ್?

|
Google Oneindia Kannada News

ಬೆಂಗಳೂರು, ಏಪ್ರಿಲ್ 04 : ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸಿದ್ದ ಅಖಂಡ ಶ್ರೀನಿವಾಸಮೂರ್ತಿ ಅವರಿಗೆ ಟಿಕೆಟ್ 'ಕೈ' ತಪ್ಪಲಿದೆ?. ಇಂತಹ ಸುದ್ದಿ ಕಾಂಗ್ರೆಸ್ ವಲಯದಲ್ಲಿ ಹರಿದಾಡುತ್ತಿದ್ದು, ಅಖಂಡ ಶ್ರೀನಿವಾಸಮೂರ್ತಿ ಅವರು ಟಿಕೆಟ್ ಪಡೆಯಲು ಪ್ರಯತ್ನ ನಡೆಸುತ್ತಿದ್ದಾರೆ.

ಬೆಂಗಳೂರಿನ ಪುಲಿಕೇಶಿ ನಗರ ಕ್ಷೇತ್ರದ ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರು ಜೆಡಿಎಸ್ ಪಕ್ಷದಿಂದ ಅಮಾನತುಗೊಂಡಿದ್ದರು. ರಾಹುಲ್ ಗಾಂಧಿ ಸಮ್ಮುಖದಲ್ಲಿ ಇತರ ಬಂಡಾಯ ನಾಯಕರ ಜೊತೆ ಕಾಂಗ್ರೆಸ್ ಸೇರಿದ್ದಾರೆ.

ಅಖಂಡ ಶ್ರೀನಿವಾಸಮೂರ್ತಿ ಪಕ್ಷ ಸೇರಲು ಕಾಂಗ್ರೆಸಿಗರ ವಿರೋಧ!ಅಖಂಡ ಶ್ರೀನಿವಾಸಮೂರ್ತಿ ಪಕ್ಷ ಸೇರಲು ಕಾಂಗ್ರೆಸಿಗರ ವಿರೋಧ!

ಆದರೆ, 2018ರ ಚುನಾವಣೆಯಲ್ಲಿ ಅವರಿಗೆ ಟಿಕೆಟ್ 'ಕೈ' ತಪ್ಪುವ ಭೀತಿ ಎದುರಾಗಿದೆ. ಪುಲಿಕೇಶಿ ನಗರ ಕ್ಷೇತ್ರದ ಮಾಜಿ ಶಾಸಕ ಬಿ.ಪ್ರಸನ್ನ ಕುಮಾರ್ ಅಖಂಡ ಶ್ರೀನಿವಾಸಮೂರ್ತಿ ಅವರಿಗೆ ಟಿಕೆಟ್ ನೀಡುವುದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಚಿತ್ರಗಳು : ಜೆಡಿಎಸ್‌ ರೆಬಲ್ ಶಾಸಕರ ಮನೆಗೆ ಡಿ.ಕೆ.ಶಿವಕುಮಾರ್ ಭೇಟಿಚಿತ್ರಗಳು : ಜೆಡಿಎಸ್‌ ರೆಬಲ್ ಶಾಸಕರ ಮನೆಗೆ ಡಿ.ಕೆ.ಶಿವಕುಮಾರ್ ಭೇಟಿ

ಕಾಂಗ್ರೆಸ್ ರಾಜ್ಯ ಚುನಾವಣೆ ಸಮಿತಿ ಸಭೆಯಲ್ಲಿ ರಮೇಶ ಬಂಡಿಸಿದ್ದೇಗೌಡ (ಶ್ರೀರಂಗಪಟ್ಟಣ), ಜಮೀರ್ ಅಹಮದ್ ಖಾನ್ (ಚಾಮರಾಜಪೇಟೆ), ಎಚ್.ಸಿ.ಬಾಲಕೃಷ್ಣ (ಮಾಗಡಿ), ಚೆಲುವರಾಯಸ್ವಾಮಿ (ನಾಗಮಂಗಲ) , ಇಕ್ಬಾಲ್ ಅನ್ಸಾರಿ (ಗಂಗಾವತಿ) , ಭೀಮಾ ನಾಯಕ್ (ಹಗರಿಬೊಮ್ಮನಹಳ್ಳಿ) ಅವರಿಗೆ ಟಿಕೆಟ್ ಕೊಡಲು ಶಿಫಾರಸು ಮಾಡಲಾಗಿದೆ. ಆದರೆ, ಅಖಂಡ ಶ್ರೀನಿವಾಸಮೂರ್ತಿ ಅವರ ಹೆಸರು ಶಿಫಾರಸು ಮಾಡಿಲ್ಲ, ಇದು ಭಾರೀ ಕುತೂಹಲಕ್ಕೆ ಕಾರಣವಾಗಿದೆ.

ಬಂಡಾಯ ನಾಯಕರಿಂದ ಸಿದ್ದರಾಮಯ್ಯ ಭೇಟಿ

ಬಂಡಾಯ ನಾಯಕರಿಂದ ಸಿದ್ದರಾಮಯ್ಯ ಭೇಟಿ

ಜಮೀರ್ ಅಹಮದ್ ಖಾನ್ ನೇತೃತ್ವದಲ್ಲಿ ಜೆಡಿಎಸ್ ಬಂಡಾಯ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದರು. ಈ ಸಂದರ್ಭದಲ್ಲಿ ಅಖಂಡ ಶ್ರೀನಿವಾಸಮೂರ್ತಿ ಅವರಿಗೆ ಟಿಕೆಟ್ ನೀಡುವ ಬಗ್ಗೆ ಚರ್ಚೆ ನಡೆದಿದೆ. ಸಿದ್ದರಾಮಯ್ಯ ಅವರು ಟಿಕೆಟ್ ನೀಡುವ ಭರವಸೆ ನೀಡಿದ್ದಾರೆಯೇ? ಎಂಬುದು ಇನ್ನೂ ನಿಗೂಢವಾಗಿದೆ.

ಜಮೀರ್ ಅಹಮದ್ ಖಾನ್ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರನ್ನು ಸಹ ಭೇಟಿ ಮಾಡಿ ಅಖಂಡ ಶ್ರೀನಿವಾಸಮೂರ್ತಿ ಅವರಿಗೆ ಟಿಕೆಟ್ ನೀಡುವ ಕುರಿತು ಚರ್ಚೆ ನಡೆಸಿದ್ದಾರೆ. ಎಲ್ಲಾ 7 ಬಂಡಾಯ ನಾಯಕರಿಗೆ ಟಿಕೆಟ್ ಖಚಿತ ಎಂದು ಹಿಂದೆ ಕಾಂಗ್ರೆಸ್ ನಾಯಕರು ಹೇಳಿದ್ದರು. ಆದರೆ, ಈಗ ಚಿತ್ರಣ ಬದಲಾಗುತ್ತಿದೆ.

ಕೆಪಿಸಿಸಿ ಅಧ್ಯಕ್ಷರಿಗೆ ದೂರು

ಕೆಪಿಸಿಸಿ ಅಧ್ಯಕ್ಷರಿಗೆ ದೂರು

ಪುಲಿಕೇಶಿ ನಗರದ ಕ್ಷೇತ್ರದ ಮಾಜಿ ಶಾಸಕ ಬಿ.ಪ್ರಸನ್ನ ಕುಮಾರ್ ಅವರು ಅಖಂಡ ಶ್ರೀನಿವಾಸಮೂರ್ತಿ ಅವರಿಗೆ ಟಿಕೆಟ್ ನೀಡಬಾರದು ಎಂದು ಒತ್ತಾಯಿಸುತ್ತಿದ್ದಾರೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಸೇರಿದಂತೆ ಹಲವು ನಾಯಕರಿಗೆ ದೂರು ನೀಡಿದ್ದಾರೆ.

'ಕ್ಷೇತ್ರದಲ್ಲಿ ಪಕ್ಷವನ್ನು ಕಟ್ಟಿ ಬೆಳೆಸಿದ್ದೇವೆ. ಈಗ ಪಕ್ಷ ಗೆಲ್ಲುವ ಸ್ಥಿತಿಯಲ್ಲಿದ್ದರೆ ಅದು ನಮ್ಮಿಂದ. ಆದ್ದರಿಂದ ಬೇರೆಯವರಿಗೆ ಟಿಕೆಟ್ ನೀಡುವ ಮುನ್ನ ಆಲೋಚಿಸಿ' ಎಂದು ಪರಮೇಶ್ವರ ಅವರಿಗೆ ಬರೆದಿರುವ ಪತ್ರದಲ್ಲಿ ಪ್ರಸನ್ನ ಕುಮಾರ್ ಮನವಿ ಮಾಡಿದ್ದಾರೆ.

2013ರಲ್ಲಿ ಸೋಲು

2013ರಲ್ಲಿ ಸೋಲು

2008ರ ಚುನಾವಣೆಯಲ್ಲಿ ಬಿ.ಪ್ರಸನ್ನ ಕುಮಾರ್ ಅವರು ಪುಲಿಕೇಶಿ ನಗರ ಕ್ಷೇತ್ರದಲ್ಲಿ 39,577 ಮತಗಳನ್ನು ಪಡೆದು ಜಯಗಳಿಸಿದ್ದರು. ಆದರೆ, 2013ರ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದರು.

ಈ ಬಾರಿಯ ಚುನಾವಣೆಯಲ್ಲಿಯೂ ಅವರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಒಂದು ವೇಳೆ ಅಖಂಡ ಶ್ರೀನಿವಾಸಮೂರ್ತಿ ಅವರಿಗೆ ಟಿಕೆಟ್ ನೀಡಿದರೆ, ಪ್ರಸನ್ನ ಕುಮಾರ್ ಅವರಿಗೆ ಟಿಕೆಟ್ ಕೈ ತಪ್ಪಲಿದೆ. ಆದ್ದರಿಂದ, ಅಖಂಡ ಶ್ರೀನಿವಾಸಮೂರ್ತಿ ಅವರಿಗೆ ಟಿಕೆಟ್ ಕೊಡಲು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಅಖಂಡ ಶ್ರೀನಿವಾಸಮೂರ್ತಿ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬಾರದು ಎಂದು ಬೇಡಿಕೆ ಇಟ್ಟಿದ್ದರು. ಆದರೆ, ಪಕ್ಷದ ಹೈಕಮಾಂಡ್ ನಾಯಕರು ಪಕ್ಷ ಸೇರ್ಪಡೆಗೆ ಹಸಿರು ನಿಶಾನೆ ಕೊಟ್ಟ ಬಳಿಕ ಪ್ರಸನ್ನ ಕುಮಾರ್ ಒಪ್ಪಲೇಬೇಕಾಯಿತು.

ಅಖಂಡ ಶ್ರೀನಿವಾಸಮೂರ್ತಿ ಜೊತೆ ಮಾತುಕತೆ

ಅಖಂಡ ಶ್ರೀನಿವಾಸಮೂರ್ತಿ ಜೊತೆ ಮಾತುಕತೆ

ಜೆಡಿಎಸ್ ಬಂಡಾಯ ಶಾಸಕರ ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರು ಕೆಲವು ದಿನಗಳ ಹಿಂದೆ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಗೆ ಭೇಟಿ ನೀಡಿ, ಮಾತುಕತೆ ನಡೆಸಿದ್ದರು.

'ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸಿದ ಎಲ್ಲಾ ಶಾಸಕರು ನಮ್ಮ ಜೊತೆಯೇ ಇದ್ದಾರೆ. ಅವರಿಗೆ ಟಿಕೆಟ್ ನೀಡುವ ಬಗ್ಗೆ ರಾಹುಲ್ ಗಾಂಧಿ ತೀರ್ಮಾನ ತೆಗೆದುಕೊಳ್ಳುತ್ತಾರೆ' ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದರು.

ಬಿ.ಪ್ರಸನ್ನ ಕುಮಾರ್ ಸೋತಿದ್ದರು

ಬಿ.ಪ್ರಸನ್ನ ಕುಮಾರ್ ಸೋತಿದ್ದರು

2013ರ ಚುನಾವಣೆಯಲ್ಲಿ ಪುಲಿಕೇಶಿ ನಗರ ಕ್ಷೇತ್ರದಲ್ಲಿ ಅಖಂಡ ಶ್ರೀನಿವಾಸಮೂರ್ತಿ ವಿರುದ್ಧ ಬಿ.ಪ್ರಸನ್ನ ಕುಮಾರ್ ಅವರು ಸೋತಿದ್ದರು. ಈಗ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಅಖಂಡ ಶ್ರೀನಿವಾಸಮೂರ್ತಿ ಅವರು ಕಾಂಗ್ರೆಸ್ ಸೇರಿದ್ದಾರೆ.

2013ರ ಚುನಾವಣೆಯಲ್ಲಿ ಅಖಂಡ ಶ್ರೀನಿವಾಸಮೂರ್ತಿ ಅವರು 48,955 ಮತಗಳನ್ನು ಪಡೆದಿದ್ದರು. ಕಾಂಗ್ರೆಸ್‌ನ ಬಿ.ಪ್ರಸನ್ನ ಕುಮಾರ್ ಅವರು 38,796 ಮತಗಳನ್ನು ಪಡೆದು ಸೋತಿದ್ದರು. ಬಿಜೆಪಿ ಅಭ್ಯರ್ಥಿ ಪಲ್ವಾನಿ ವೇಲು 4,589 ಮತಗಳನ್ನು ಮಾತ್ರ ಪಡೆದಿದ್ದರು.

English summary
Pulakeshi Nagar Former MLA Akhanda Srinivas Murthy who recently joined Congress from JD(S) may miss party ticket for 2018 Karnataka assembly elections. Pulakeshi Nagar Congress leader and Former MLA B.Prasanna Kumar opposed for issue ticket for Akhanda Srinivas Murthy. B.Prasanna Kumar also ticket aspirant.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X