ಲಕ್ಷ್ಮೀದೇವಿಗೆ ಕೇಳಿಕೊಂಡೀವಿ ನಿಮಗೆ ಕಂಟಕ ಬರಲ್ಲ; ಸಿದ್ದರಾಮಯ್ಯಗೆ ಅಕ್ಕಾತಾಯಿ ಹೇಳಿದ್ದೇನು?

ಬೆಳಗಾವಿಆಗಸ್ಟ್‌ 27: ಗೃಹಲಕ್ಷ್ಮಿ ಹಣದಲ್ಲಿ ಗ್ರಾಮಕ್ಕೇ ಹೋಳಿಗೆ ಊಟ ಹಾಕಿದ ಅಕ್ಕಾತಾಯಿ ಲಂಗೂಟಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿ ವಿಮಾನ‌ನಿಲ್ದಾಣದಲ್ಲಿ‌ ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿದ ಬಳಿಕ‌ ಅಕ್ಕಾತಾಯಿ ಸಿಎಂಗೆ ತುಂಬು ಹೃದಯದಿಂದ ಆಶೀರ್ವದಿಸಿದರು.

ನಾಡಿಗೆ ಅನ್ನ ಕೊಡೋ ದೊರೆ ನಿನ್ನ ಕೈ ಮೇಲಾಗ್ಲಿ ಎಂದು ರಾಯಬಾಗ್ ತಾಲ್ಲೂಕಿನ‌ ಸುಟ್ಟಟ್ಟಿ ಗ್ರಾಮದ ಅಕ್ಕಾತಾಯಿ ಮುಖ್ಯಮಂತ್ರಿಗಳಿಗೆ ಆಶೀರ್ವಾದ ಮಾಡಿದರು. ನಾಡಿಗೆ ಅನ್ನ ಕೊಡೋ ದೊರೆ ನೀನು. ನಿಮ್ಮ ಕೈ ಇನ್ನೂ ಮೇಲಾಗ್ಲಿ. ನಾಡ ಆಳುವ ದೊರೆ ನೀನು ದೇಶ ಆಳ್ಬೇಕು. ಹಿಂಗಾ ಆಳ್ಕೊತಾ ಹೋಗ್ತಾ ಇರ್ಬೇಕು. ನಾಡಿಗೆ ಒಳ್ಳೇದಾಗೈತ್ರಿ ಎಂದರು.

Akkatayi Blessing To Chief Minister Siddaramaiah For His Political Success

ಅಕ್ಕಾತಾಯಿ ಜೊತೆ ಬಂದಿದ್ದ ಇತರೆ ತಾಯಂದಿರು ಒಟ್ಟಾಗಿ ಮುಖ್ಯಮಂತ್ರಿಗಳಿಗೆ, ನಾವು ಲಕ್ಷ್ಮೀದೇವಿಗೆ ಪೂಜೆ ಮಾಡೀವಿ. ಕಂಟಕ ನಾಶ ಆಗ್ಲಿ ಅಂತ ದೇವಿಗೆ ಕೈಮುಗಿದೀವಿ ಎಂದು ಹಾರೈಸಿದರು. ಅಕ್ಕಾತಾಯಿ ಮತ್ತು ಗ್ರಾಮದ ತಾಯಂದಿರು ಆಶೀರ್ವಾದ ಸ್ವೀಕರಿಸಿದ ಮುಖ್ಯಮಂತ್ರಿಗಳು ನಿಮ್ಮ ಆಶೀರ್ವಾದ ಹೀಗೇ ಇರಲಿ. ನಮ್ಮ ಸರ್ಕಾರ ಇರುವವರೆಗೂ ಗೃಹಲಕ್ಷ್ಮಿ ಯೋಜನೆ ನಿಲ್ಲಲ್ಲ. ಹೀಗೇ ಪ್ರತೀ ತಿಂಗಳು ನಿಮ್ಮ ಮಡಿಲು ಸೇರುತ್ತಿರುತ್ತದೆ ಎಂದರು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಅಕ್ಕಾತಾಯಿ ಮತ್ತು ತಾಯಂದಿರಿಗೆ ಸೀರೆ, ಅರಸಿನ ಕುಂಕುಮ ಬಾಗಿನ ನೀಡಿ ಸನ್ಮಾನಿಸಿದರು.

ನನ್ನ ವ್ಯಕ್ತಿತ್ವದಲ್ಲಿ 40 ವರ್ಷದಿಂದ ಇಲ್ಲದ ಕಪ್ಪುಚುಕ್ಕೆಯನ್ನು ಬಿಜೆಪಿ-ಜೆಡಿಎಸ್ ಈಗ ಹುಡುಕುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದರು. ನಾನು ಮಂತ್ರಿಯಾಗಿ 40 ವರ್ಷ ಆಯ್ತು. ಇಷ್ಟು ವರ್ಷ ಮಾಡದ ತಪ್ಪನ್ನು ಈಗ ಮಾಡ್ತೀನಾ? ನಾನು ಮಾಡದಿರುವ ತಪ್ಪನ್ನು ಷಡ್ಯಂತ್ರದಿಂದ ನನ್ನ ತಲೆಗೆ ಕಟ್ಟುವ ಪ್ರಯತ್ನ ಮಾಡ್ತಿದ್ದಾರೆ. ನಾವು-ನೀವು ಒಟ್ಟಾಗಿ ಈ ಷಡ್ಯಂತ್ರ ಸೋಲಿಸೋಣ. ಎಲ್ಲರೂ ಒಟ್ಟಾಗಿರಿ. 7 ಕೋಟಿ ಜನರ ಆಶೀರ್ವಾದ ನನ್ನ ಮೇಲೆ ಇರುವವರೆಗೂ ನನ್ನನ್ನು ಅಧಿಕಾರದಿಂದ ಇಳಿಸಲು ಸಾಧ್ಯವಿಲ್ಲ ಎಂದರು.

ಹಿಂದುಳಿದ ಸಮುದಾಯದಿಂದ ಬಂದು ಎರಡು ಬಾರಿ ಸಿಎಂ ಆದೆ ಅಂತ ಬಿಜೆಪಿ-ಜೆಡಿಎಸ್ ಗೆ ಸಹಿಸಲು ಆಗುತ್ತಿಲ್ಲ. ಆದ್ದರಿಂದ ನಮಗಮ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದ್ದಾರೆ. ಇದಕ್ಕೆ ನಾವು ಅವಕಾಶ ಕೊಡಬಾರದು. ನಮ್ಮ ಕಾಂಗ್ರೆಸ್ ಸರ್ಕಾರ ಇರುವವರೆಗೂ ಬಡವರ, ಮಧ್ಯಮ ವರ್ಗದವರ ಪರವಾದ ಗ್ಯಾರಂಟಿ ಕಾರ್ಯಕ್ರಮಗಳು ಜಾರಿಯಲ್ಲಿದ್ದು ಸದಾ ನಮ್ಮ ನೆರವಿನ ಹಸ್ತ ಬಡವರ ಪರವಾಗಿ ಇರುತ್ತದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+