ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಕ್ರಮ-ಸಕ್ರಮಕ್ಕೆ ಮಾ.23ರ ನಂತರ ಅರ್ಜಿ ಸಲ್ಲಿಸಿ

|
Google Oneindia Kannada News

ಬೆಂಗಳೂರು, ಮಾ.3 : ಬಹುನಿರೀಕ್ಷಿತ ಅಕ್ರಮ-ಸಕ್ರಮ ಯೋಜನೆಯನ್ನು ಜಾರಿಗೆ ತರಲು ಸರ್ಕಾರ ಸಿದ್ಧತೆ ನಡೆಸುತ್ತಿದೆ. ಮಾ.23ರಿಂದ ಒಂದು ವರ್ಷದ ತನಕ ಅಕ್ರಮ ಕಟ್ಟಡಗಳನ್ನು ಸಕ್ರಮ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗುತ್ತದೆ. ಇದಕ್ಕಾಗಿ ದಂಡ ಶುಲ್ಕವನ್ನು ಪಾವತಿ ಮಾಡಬೇಕಾಗುತ್ತದೆ.

ಬೆಂಗಳೂರಿನಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿದ ನಗರಾಭಿವೃದ್ಧಿ ಸಚಿವ ವಿನಯ್ ಕುಮಾರ್ ಸೊರಕೆ ಅವರು, ಬಿಬಿಎಂಪಿ ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿನ ಅನಧಿಕೃತ ನಿರ್ಮಾಣಗಳನ್ನು ಸಕ್ರಮಗೊಳಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು. [ಸಿದ್ಧವಾಗುತ್ತಿದೆ ಅಕ್ರಮ-ಸಕ್ರಮ ಮಾರ್ಗಸೂಚಿ]

Vinay Kumar Sorake

ಅಕ್ರಮ ಕಟ್ಟಡಗಳನ್ನು ಸಕ್ರಮಗೊಳಿಸಿಕೊಳ್ಳಲು ಒಂದು ವರ್ಷದ ತನಕ ಕಾಲಾವಕಾಶ ಕಲ್ಪಿಸಲಾಗುತ್ತದೆ. ಮಾರ್ಚ್ 23ರಿಂದ ಒಂದು ವರ್ಷದ ತನಕ ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ. ದಂಡ ಶುಲ್ಕವನ್ನು ಪಾವತಿ ಮಾಡಿ ಅಕ್ರಮ ಕಟ್ಟಡಗಳನ್ನು ಸಕ್ರಮಗೊಳಿಸಿಕೊಳ್ಳಬಹುದಾಗಿದೆ ಎಂದು ಸಚಿವರು ತಿಳಿಸಿದರು. [ಅಕ್ರಮ-ಸಕ್ರಮ ವಿಧೇಯಕ, ರಾಜ್ಯಪಾಲರ ಒಪ್ಪಿಗೆ]

ಯಾವ ಕಟ್ಟಡ ಸಕ್ರಮ : 2013ರ ಅ.19ಕ್ಕಿಂತ ಮೊದಲು ನಿರ್ಮಾಣವಾಗಿರುವ ಕಟ್ಟಡಗಳಿಗೆ ಮಾತ್ರ ಈ ನಿಯಮ ಅನ್ವಯವಾಗುತ್ತದೆ. ಶೇ 50ರಷ್ಟು ಉಲ್ಲಂಘನೆಯಾಗಿದ್ದರೆ ಮಾತ್ರ ಸಕ್ರಮ ಮಾಡಿಕೊಳ್ಳಬಹುದು. ಅರ್ಜಿದಾರರು ಎಷ್ಟು ಉಲ್ಲಂಘನೆ ಮಾಡಿದ್ದಾರೆ ಎಂಬುದನ್ನು ಸ್ವಯಂ ಘೋಷಣೆ ಮಾಡಿಕೊಳ್ಳಬೇಕು.

ಸಕ್ರಮ ಮಾಡುವಾಗ 2013ಕ್ಕೂ ಮುಂಚೆ ಇದ್ದ ಮಾರ್ಗ ಸೂಚಿದರದಂತೆ ದಂಡ ವಿಧಿಸಲಾಗುತ್ತದೆ. ಬೆಂಗಳೂರು ನಗರದಲ್ಲಿ ಚ.ಮೀಟರ್‌ಗೆ 40ರೂ. ಇತರೆ ಪಾಲಿಕೆ ವ್ಯಾಪ್ತಿಯಲ್ಲಿ ಚದರ ಮೀಟರ್‌ಗೆ 30ರೂ. ಬೇರೆಡೆಗಳಲ್ಲಿ ಚದರ ಮೀಟರ್‌ಗೆ 20ರೂ. ದಂಡ ವಿಧಿಸಲಾಗುತ್ತದೆ ಎಂದು ಸಚಿವರು ಹೇಳಿದರು.

English summary
Karnataka government decided to issue notification of Akrama-Sakrama said, Urban development minister Vinay Kumar Sorake. Notification will issued on March 23.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X