ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಝಿಕಾ ವೈರಸ್ ಭೀತಿ; ರಾಜ್ಯದ ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರ

|
Google Oneindia Kannada News

ಬೆಂಗಳೂರು, ಜುಲೈ 10: ಕೊರೊನಾ ಸೋಂಕಿನ ಭೀತಿ ನಡುವೆ ನೆರೆ ರಾಜ್ಯ ಕೇರಳದಲ್ಲಿ ಝಿಕಾ ವೈರಸ್ ಪ್ರಕರಣಗಳು ಪತ್ತೆಯಾಗುತ್ತಿರುವ ಕಾರಣ ರಾಜ್ಯದಲ್ಲಿಯೂ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ.

ಕೇರಳದಲ್ಲಿ ಝಿಕಾ ವೈರಸ್ ಪ್ರಕರಣಗಳು ಕಂಡುಬಂದಿದ್ದು, ಈ ಬಗ್ಗೆ ರಾಜ್ಯದಲ್ಲಿಯೂ ಕಾಳಜಿ ವಹಿಸಲಾಗಿದೆ ಎಂದು ರಾಜ್ಯ ಸರ್ಕಾರ ಆರೋಗ್ಯ ಇಲಾಖೆ ಶುಕ್ರವಾರ ತಿಳಿಸಿದೆ.

Alert In Karnataka As Kerala Reports 14 zika Virus Cases

"ನೆರೆ ರಾಜ್ಯ ಕೇರಳದಲ್ಲಿ ಝಿಕಾ ವೈರಸ್ ಪತ್ತೆಯಾಗಿದೆ. ಇದೀಗ ಮುಂಗಾರು ಮಳೆಯಾಗುತ್ತಿದೆ. ಇದು ಝಿಕಾ ಸೋಂಕಿಗೆ ಕಾರಣವಾಗುವ ಏಡೆಸ್ ಸೊಳ್ಳೆಗಳು ಹೆಚ್ಚಾಗಲು ಕಾರಣವಾಗಹುದು. ಹೀಗಾಗಿ ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಆಶಾ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತೆಯರು ಈ ಕುರಿತು ಜಾಗೃತಿ ಮೂಡಿಸಲಿದ್ದಾರೆ" ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Zika Virus; ಕೊರೊನಾ ಆತಂಕದ ನಡುವೆ ಕೇರಳದಲ್ಲಿ ಝಿಕಾ ವೈರಸ್ ಪತ್ತೆZika Virus; ಕೊರೊನಾ ಆತಂಕದ ನಡುವೆ ಕೇರಳದಲ್ಲಿ ಝಿಕಾ ವೈರಸ್ ಪತ್ತೆ

ಸೊಳ್ಳೆಗಳ ಹರಡುವಿಕೆ ಹೆಚ್ಚಾಗದಂತೆ ತಡೆಯಲು ತ್ಯಾಜ್ಯ ನಿರ್ವಹಣೆ ಕುರಿತು ಎಚ್ಚರಿಕೆ ವಹಿಸಲಾಗಿದೆ. ಶುಚಿತ್ವ ಕಾಯ್ದುಕೊಳ್ಳಲು ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದೆ.

Recommended Video

ಸಿಪಿ ಯೋಗೀಶ್ವರ್ 420 ಕೆಲಸ ಮಾಡ್ತಿದ್ದಾರೆ ಅಂತ ಟಾಂಗ್ ಕೊಟ್ಟ ಡಿಕೆ ಸುರೇಶ್ | Oneindia Kannada

ಕೇರಳದ ತಿರುವನಂತಪುರಂನಲ್ಲಿ ಗುರುವಾರ ಹದಿನಾಲ್ಕು ಝಿಕಾ ವೈರಸ್ ಪ್ರಕರಣಗಳು ದಾಖಲಾಗಿವೆ. ಕೇಂದ್ರವು ತನ್ನ ಆರು ಸದಸ್ಯರ ತಂಡವನ್ನು ಪರಿಸ್ಥಿತಿ ನಿಭಾಯಿಸಲು ಕೇರಳಕ್ಕೆ ಕಳುಹಿಸಿದೆ.

English summary
Alert in karnataka as kerala reports 14 zika virus cases
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X