ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಸೂಚನೆ

|
Google Oneindia Kannada News

ಬೆಂಗಳೂರು, ನವೆಂಬರ್ 26: ಮಹಾರಾಷ್ಟ್ರ ಗಡಿ ಭಾಗದ ಜಿಲ್ಲೆಗಳಲ್ಲಿ ಶಾಂತಿ ಸೌಹಾರ್ದತೆ ಕಾಪಾಡಿ, ಕಟ್ಟೆಚ್ಚರ ವಹಿಸುವಂತೆ, ಗೃಹ ಸಚಿವ ಆರಗ ಜ್ಞಾನೇಂದ್ರ ರವರು ಹಿರಿಯ ಪೊಲೀಸ್ ಅಧಿಕಾರಿ ಗಳಿಗೆ ಸೂಚನೆ ನೀಡಿದ್ದಾರೆ.

ಮಹಾರಾಷ್ಟ್ರ ಮತ್ತು ಕರ್ನಾಟಕ ಗಡಿ ವಿವಾದ ಭುಗಿಲೆದ್ದಿದ್ದು, ಮಹಾರಾಷ್ಟ್ರ ದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಒಂದಕ್ಕೆ ಕೆಲವು ಕಿಡಿಗೇಡಿಗಳು, ಕಲ್ಲು ತೂರಾಟ ನಡೆಸಿದ ಘಟನೆಯ ಹಿನ್ನೆಲೆಯಲ್ಲಿ, ಸಚಿವರು, ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಮಾತನಾಡಿ, ಶಾಂತಿ ಸೌಹಾರ್ದತೆ ಕಾಪಾಡಲು ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದರು.

ಕಲ್ಲು ತೂರಾಟ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಅಪರ ಮುಖ್ಯ ಕಾರ್ಯದರ್ಶಿ (ಒಳಾಡಳಿತ) ರಜನೀಶ್ ಗೋಯಲ್ ಅವರು, ಮಹಾರಾಷ್ಟ್ರ ರಾಜ್ಯ ಮುಖ್ಯ ಕಾರ್ಯದರ್ಶಿ ಯವರ ದೂರವಾಣಿ ಕರೆ ಮೂಲಕ ಸಂಪರ್ಕಿಸಿ, ಘಟನೆಯ ಬಗ್ಗೆ ಚರ್ಚಿಸಿದ್ದಾರೆ.

Alert sounded to prevent untoward incident in border districts Says Araga Jnanendra

ಗಡಿ ಭಾಗದ ಜಿಲ್ಲೆಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ಮುನ್ನೆಚ್ಚರಿಕೆ ಕ್ರಮವಾಗಿ, ಎರಡೂ ರಾಜ್ಯಗಳ, ಹಿರಿಯ ಪೊಲೀಸ್ ಅಧಿಕಾರಿಗಳೂ ಸಭೆ ನಡೆಸಲಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಯಾರೂ ಕೂಡ ಕಾನೂನು ಕೈಗೆತ್ತಿಕೊಳ್ಳಲು ಬಿಡಕೂಡದು: ಸಿಎಂ ಬೊಮ್ಮಾಯಿ

ಇನ್ನೂ ಮಹಾರಾಷ್ಟ್ರದ ಗೃಹ ಇಲಾಖೆ ಕಾರ್ಯದರ್ಶಿಗಳೊಂದಿಗೆ ಮಾತುಕತೆ ನಡೆಸಲು ಸೂಚಿಸಿದೆ. ಯಾವುದೇ ಕಾರಣಕ್ಕೂ ಯಾರೂ ಕೂಡ ಕಾನೂನು ಕೈಗೆತ್ತಿಕೊಳ್ಳಲು ಬಿಡಕೂಡದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅಲ್ಲದೇ ಎರಡೂ ರಾಜ್ಯಗಳ ಸಾಮರಸ್ಯ ಹದಗೆಡುವುದು ಬೇಡ. ಕರ್ನಾಟಕ ಬಸ್ಸುಗಳಿಗೆ, ಜನರಿಗೆ ಹಾಗೂ ಆಸ್ತಿಗೆ ಸಂಪೂರ್ಣವಾದ ರಕ್ಷಣೆ ನೀಡಬೇಕೆಂದು ಗೃಹ ಸಚಿವರು ಮಾತನಾಡುತ್ತಾರೆ ಎಂದರು.

ರಾಜ್ಯ ಪುನರ್ವಿಂಗಡಣಾ ಕಾಯ್ದೆ ಮತ್ತು ಸಂವಿಧಾನ 3ನೇ ವಿಧಿ ಅನುಸಾರ ಮಹಾರಾಷ್ಟ್ರ ಗಡಿ ವಿವಾದ ಹಿನ್ನಲೆಯಲ್ಲಿ 2004 ರಲ್ಲಿ ಹೂಡಿದ ದಾವೆಗೆ ಯಾವುದೇ ಕಾನೂನು ಮಾನ್ಯತೆ ಇಲ್ಲ. ಈ ವಾದಕ್ಕೆ ಹೆಚ್ಚಿನ ಒತ್ತು ನೀಡಿ ರಾಜ್ಯ ಸರ್ಕಾರ ಸರ್ವೋಚ್ಚ ನ್ಯಾಯಾಲಯದಲ್ಲಿ ಸಮರ್ಥವಾದ ಕಾನೂನು ಹೋರಾಟಕ್ಕೆ ಸಿದ್ದತೆ ಮಾಡಿಕೊಂಡಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

Alert sounded to prevent untoward incident in border districts Says Araga Jnanendra

ಹಿರಿಯ ನ್ಯಾಯವಾದಿಗಳಾದ ಮುಕುಲ್ ರೊಹಟಗಿ, ಉದಯಹೊಳ್ಳ ನೇತೃತ್ವದಲ್ಲಿ ಸರ್ವೋಚ್ಛ ನ್ಯಾಯಾಲಯದಲ್ಲಿ ಗಂಭೀರವಾಗಿ ವಾದ ಮಂಡಿಸಲಿದ್ದೇವೆ. ಕಾನೂನು ಹೋರಾಟಕ್ಕೆ ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ಅವರನ್ನು ಸಹ ಸರ್ಕಾರ ನೇಮಿಸಿದೆ. ನಾವು ಸಂವಿಧಾನ ಹಾಗೂ ಕಾನೂನು ಬದ್ದವಾಗಿ ಇದ್ದೇವೆ. ಕರ್ನಾಟಕದ ರಾಜ್ಯದ ಭೂ ಪ್ರದೇಶದಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದ ಬೇಡಿಕೆ ಹಾಗೂ ನಿಲುವುಗಳನ್ನು ವಿಚಾರಣೆ ಸಂದರ್ಭದಲ್ಲಿ ಮಂಡಿಸಲಾಗುವುದು. ಈ ಸಂಬಂಧವಾಗಿ ಮುಂದಿನ ವಾರ ಸರ್ವಪಕ್ಷ ಹಾಗೂ ಕಾನೂನು ತಜ್ಞರ ಸಭೆ ಕರೆದಿದ್ದೇನೆ. ಯಾವ ವಿಚಾರವನ್ನು ಮಂಡಿಸಬೇಕು ಎಂಬುದರ ಕುರಿತು ಕೂಲಂಕುಷವಾಗಿ ಚರ್ಚಿಸಿ ನಿರ್ಧಾರ ಕೈಗೊಳ್ಳಾಗುವುದು ಎಂದರು.

ಮಹಾರಾಷ್ಟ್ರ ಹಿರಿಯ ರಾಜಕಾರಣಿ ಶರದ್ ಪವಾರ್ ಬೆಳಗಾವಿ ಗಡಿ ವಿವಾದ ಇಟ್ಟುಕೊಂಡು ಇದುವರೆಗೂ ರಾಜಕೀಯ ಮಾಡಿದ್ದಾರೆ. ಬೆಳಗಾವಿ ಬಗೆಗಿನ ಅವರ ಕನಸ ನನಸಾಗಿಲ್ಲ, ಮುಂದೆಯೂ ನನಸಾಗುವುದಿಲ್ಲ. ಮಹಾರಾಷ್ಟ್ರದ ಜತ್ತ ಭಾಗದ ಜನರು ಕರ್ನಾಟಕದಲ್ಲಿ ವಿಲೀನವಾಗಲು ಬಹುದಿನಗಳಿಂದ ಬೇಡಿಕೆ ಇಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು‌.

English summary
Border dispute; Alert sounded to prevent untoward incident in border districts Says Araga Jnanendra,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X