ಸಿಎಂ ಸಿದ್ದರಾಮಯ್ಯ ಸರ್ಕಾರದ ಎಲ್ಲಾ 33 ಸಚಿವರಿಗೆ ಹೊಸ ಕಾರು ಖರೀದಿಗೆ ಆದೇಶ

ಬೆಂಗಳೂರು ಸೆಪ್ಟೆಂಬರ್ 1: ಪಂಚ ಗ್ಯಾರಂಟಿ ಜಾರಿಗೆ ತರುವಲ್ಲಿ ಬ್ಯೂಸಿ ಆಗಿರುವ ರಾಜ್ಯ ಸರ್ಕಾರ ಜನಸಾಮಾನ್ಯರನ್ನು ಮಾತ್ರವಲ್ಲದೆ ಸಂಪುಟದ ಸಚಿವರ ಕಡೆಗೂ ಗಮನ ಹರಿಸಿದೆ. ಸಂಪುಟದ ಎಲ್ಲಾ 33 ಸಚಿವರಿಗಾಗಿ ಹೊಸ ಕಾರ್ ಖರೀದಿಗೆ ಆದೇಶ ನೀಡಿದೆ ಎಂದು ತಿಳಿದು ಬಂದಿದೆ.

ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟದ ಎಲ್ಲಾ 33 ಸಚಿವರಿಗೆ ಶೀಘ್ರವೇ ಹೊಸ ಕಾರ್ ಸಿಗಲಿವೆ. 30 ಲಕ್ಷ ರೂಪಾಯಿ ಮೌಲ್ಯದ ಹೊಸ ಇನೋವಾ ಹೈಕ್ರಾಸ್ ಹೈಬ್ರೀಡ್ ಕಾರ್ ಗಳನ್ನು ಸರ್ಕಾರ ಸಚಿವರಿಗಾಗಿ ಖರೀದಿಗೆ ಮುಂದಾಗಿದೆ.

All 33 ministers of CM Siddaramaiah government ordered to buy new cars

ಸರ್ಕಾರ ಖರೀದಿಗೆ ಆದೇಶಿಸಿದ ಈ ಕಾರುಗಳ ಬೆಲೆ ಬಗ್ಗೆ ನೀವು ತಿಳಿಯಲೇಬೇಕು. ಸರ್ಕಾರ ಆದೇಶಿಸಿದ ಪ್ರತಿವಾಹನಕ್ಕೆ ಜಿಎಸ್‌ಟಿ ಸೇರಿದಂತೆ ಎಕ್ಸ್‌ ಶೋರೂಮ್ ಬೆಲೆ 30 ಲಕ್ಷ ರೂಪಾಯಿಯಂತೆ 9.90 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ.

ನೂತನ ಸಚಿವರಿಗೆ ಹೊಸ ಇನೋವಾ ಹೈಕ್ರಾಸ್ ಹೈಬ್ರಿಡ್ ವಾಹನಗಳನ್ನು ಜಿಎಸ್‌ಟಿ ಸೇರಿದಂತೆ ಪ್ರತಿ ವಾಹನಕ್ಕೆ 30 ಲಕ್ಷ ರೂಪಾಯಿನಂತೆ ಕಿರ್ಲೋಸ್ಕರ್ ಮೋಟಾರ್ಸ್ ಅವರಿಂದ ನೇರವಾಗಿ ಖರೀದಿಸಲು ಪಾರದರ್ಶಕತೆ ಅಧಿನಿಯಮದಡಿ ಸಿಬ್ಬಂದಿ ಮತ್ತು ಆಡಳಿತ ಸುಧಾಋಣೆ ಇಲಾಖೆ ಆದೇಶ ನೀಡಿದೆ.

ಪಂಚ ಗ್ಯಾರಂಟಿ

ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ನೀಡಿದ್ದ ಪಂಚ ಗ್ಯಾರಂಟಿಗಳನ್ನು ಸಿಎಂ ಸಿದ್ದರಾಮಯ್ಯ ಸರ್ಕಾರ ಒಂದೊಂದಾಗಿ ಜಾರಿಗೆ ತರುತ್ತಿದೆ.

All 33 ministers of CM Siddaramaiah government ordered to buy new cars

ಗೃಹ ಲಕ್ಷ್ಮೀ ಯೋಜನೆಯಡಿ ಮಾಸಿಕ 2,000 ರೂ., 200 ಯೂನಿಟ್ ಉಚಿತ ವಿದ್ಯುತ್, ಮಹಿಳೆಯರಿಗೆ ಉಚಿತ, ಅನ್ನ ಭಾಗ್ಯ, ಯುವ ನಿಧಿ ಪಂಚ ಗ್ಯಾರಂಟಿಗಳಾಗಿವೆ. ಈ ಯೋಜನೆಗಳ ಜಾರಿ ಪರಿಣಾಮ ರಾಜ್ಯದ ಜಿಡಿಪಿ, ಆರ್ಥಿಕ ಚಟುವಟಿಕೆ ಜಾಸ್ತಿಯಾಗುತ್ತದೆ. ಐದು ಗ್ಯಾರಂಟಿಗಳಿಂದ ಮಾಸಿಕ ಒಬ್ಬರಿಗೆ 4 ರಿಂದ 5 ಸಾವಿರ ರೂ. ದೊರೆತರೆ, ವಾರ್ಷಿಕ 48 ರಿಂದ 60 ಸಾವಿರ ರೂ. ಲಭಿಸಲಿದೆ.

ಅದಂತೆ ಜೂನ್ 11 ರಂದು 'ಶಕ್ತಿ' ಯೋಜನೆ ಜಾರಿಗೊಳಿಸಿದೆ. ಪ್ರತಿ ದಿನ ಸುಮಾರು 55 ಲಕ್ಷ ಇದುವರೆಗೂ 30 ಕೋಟಿಗೂ ಹೆಚ್ಚು ಜನ ಮಹಿಳೆಯರು ಉಚಿತ ಪ್ರಯಾಣದ ಲಾಭ ಪಡೆದಿದ್ದು, ಯೋಜನೆಯಿಂದ ರಾಜ್ಯದ ಮಹಿಳೆಯರು ಸಂತುಷ್ಟರಾಗಿದ್ದಾರೆ. ಇನ್ನೂ ಕಾಂಗ್ರೆಸ್​ನ ಗ್ಯಾರಂಟಿಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಗೆ ಮೊನ್ನೆಯಷ್ಟೆ ಚಾಲನೆ ಸಿಕ್ಕಿದೆ.

ಇನ್ನೂ ಗೃಹ ಜ್ಯೋತಿ ಕಾರ್ಯಕ್ರಮದಡಿ 2.14 ಕೋಟಿ ಜನ ಲಾಭ ಪಡೆಯಲಿದ್ದು, 1.41 ಕೋಟಿ ಜನರ ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ. ಡಿಸೆಂಬರ್-ಜನವರಿಯಲ್ಲಿ ನಿರುದ್ಯೋಗಿಳಗೆ ಕ್ರಮವಾಗಿ 1,500 ಮತ್ತು 3,000 ಭತ್ಯೆ ನೀಡುವ "ಯುವ ನಿಧಿ" ಯೋಜನೆ ಸಹ ಜಾರಿಗೊಳಿಸಲಾಗುವುದು ಎಂದು ಸಿ.ಎಂ. ಸಿದ್ದರಾಮಯ್ಯ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ತಿಳಿಸಿದ್ದಾರೆ. ಈ ಯೋಜನೆಗಳಿಂದ ರಾಜ್ಯದ ಪ್ರತಿ ಕುಟುಂಬಕ್ಕೆ ವಾರ್ಷಿಕ 60 ಸಾವಿರ ರೂ. ಸೌಲಭ್ಯ ಸಿಗಲಿದೆ.

ಇದೆಲ್ಲದರ ನಡುವೆ ಕಾಂಗ್ರೆಸ್ ಸರ್ಕಾರ ಸಚಿವರತ್ತ ಗಮನ ಹರಿಸಿದೆ. ಸಿಎಂ ಸಿದ್ದರಾಮಯ್ಯ ಸರ್ಕಾರದ ಎಲ್ಲಾ 33 ಸಚಿವರಿಗೆ ಹೊಸ ಕಾರು ಖರೀದಿಗೆ ಆದೇಶ ನೀಡಿದೆ ಎಂದು ತಿಳಿದು ಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+