ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

"ಎಲ್ಲ ಇಲಾಖೆ ಸಿಬ್ಬಂದಿ ಕಡ್ಡಾಯವಾಗಿ ಕೊರೊನಾ ಲಸಿಕೆ ಪಡೆಯಬೇಕು''

|
Google Oneindia Kannada News

ಬೆಂಗಳೂರು, ಫೆಬ್ರವರಿ 20: ಕೋವಿಡ್ ಲಸಿಕೆಯನ್ನು ಎಲ್ಲ ಸಿಬ್ಬಂದಿ ಕಡ್ಡಾಯವಾಗಿ ಪಡೆಯಬೇಕು ಎಂದು ಕೋರಲಾಗಿದೆ. ಇದು ಕೊರೊನಾ ಎರಡನೇ ಅಲೆ ಬಾರದಂತೆ ತಡೆಗಟ್ಟಲು ನೆರವಾಗಲಿದೆ. ಈ ಬಗ್ಗೆ ಮುಖ್ಯಮಂತ್ರಿಗಳು ಕೂಡ ಸೂಚನೆ ನೀಡಲಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಉಚಿತವಾಗಿ ಲಸಿಕೆ ದೊರೆಯುವಂತೆ ಮಾಡಿರುವಾಗ ಉದಾಸೀನ ಮಾಡಬಾರದು. ಎಲ್ಲ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ಕೋವಿಡ್ ಲಸಿಕೆ ಪಡೆಯಬೇಕು. ಈ ಬಗ್ಗೆ ಮುಖ್ಯಮಂತ್ರಿಗಳು ಕೂಡ ವೀಡಿಯೋ ಸಂವಾದ ನಡೆಸಿ ಸೂಚನೆ ನೀಡಲಿದ್ದಾರೆ ಎಂದರು.

ಈ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವವರಿಗೆ ಕೊರೊನಾ ಪರೀಕ್ಷೆ ಕಡ್ಡಾಯ!ಈ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವವರಿಗೆ ಕೊರೊನಾ ಪರೀಕ್ಷೆ ಕಡ್ಡಾಯ!

ಕೊರೊನಾ ಲಸಿಕೆ ಪಡೆದ ಬಳಿಕ ಸೋಂಕಿನ ತೀವ್ರತೆ ಕಡಿಮೆಯಾಗುತ್ತದೆ. ಅದರಿಂದ ಸಾವು ಉಂಟಾಗುವುದಿಲ್ಲ. ಸಾರ್ವಜನಿಕರು ಇನ್ನೂ ಕೋವಿಡ್ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಮದುವೆ ಮೊದಲಾದ ಸಮಾರಂಭ, ಸಭೆಗಳು ಹೆಚ್ಚುತ್ತಿವೆ. ಇದಕ್ಕೆ ಕಡಿವಾಣ ಹಾಕಿಕೊಳ್ಳಬೇಕು ಎಂದು ಹೇಳಿದರು.

All Department Staff Must Get The Corona Vaccine : Health Minister K Sudhakar

ಕೊರೊನಾ ಎರಡನೇ ಅಲೆ ಬಾರದಂತೆ ತಡೆಗಟ್ಟಬೇಕು ಎಂಬ ಉದ್ದೇಶದಿಂದ ಕಟ್ಟೆಚ್ಚರದ ಕ್ರಮ ಕೈಗೊಳ್ಳಲಾಗಿದೆ. ಬ್ರೆಜಿಲ್ ಮೊದಲಾದ ದೇಶಗಳ ವೈರಾಣು ಇಲ್ಲಿ ಪತ್ತೆಯಾಗಿಲ್ಲ. ಕೊರೊನಾ ಸೋಂಕು ಈಗ ಕಡಿಮೆಯಾಗಿದೆ. ಗಂಭೀರವಾಗಿ ಸೋಂಕು ಹರಡಿಲ್ಲ. ಈಗಿನಿಂದಲೇ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿದರೆ ಸೋಂಕು ತೀವ್ರವಾಗುವುದಿಲ್ಲ ಎಂದರು.

ನೆರೆಯ ರಾಜ್ಯಗಳಲ್ಲಿ ಹೆಚ್ಚಿರುವುದರಿಂದ ನಮ್ಮಲ್ಲೂ ಬರಬಹುದು. ಪಕ್ಕದ ಕೇರಳ ಮತ್ತು ಮಹಾರಾಷ್ಟ್ರ ರಾಜ್ಯದಿಂದ ಬರುವವರು ಕೊರೊನಾ ನೆಗೆಟಿವ್ ವರದಿ ಹೊಂದಿರಬೇಕು ಎಂದು ಸೂಚಿಸಲಾಗಿದೆ. ಆಯಾ ಜಿಲ್ಲಾಡಳಿತ, ಪೊಲೀಸ್ ಸಿಬ್ಬಂದಿ ನೆರವಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ನಮ್ಮಲ್ಲಿ ಸೋಂಕಿತರ ಪ್ರಮಾಣ ಕಡಿಮೆ ಇದೆ. ಬಹಳ ದೊಡ್ಡ ಕಠಿಣ ಕ್ರಮಗಳು ಈಗ ಬೇಕಿಲ್ಲ. ಮುಂದಿನ ದಿನಗಳಲ್ಲಿ ಕೊರೊನಾ ಎರಡನೇ ಅಲೆ ಬರುವುದನ್ನು ತಡೆಗಟ್ಟಲು ಸಫಲವಾದರೆ ಲಾಕ್ ಡೌನ್ ಮೊದಲಾದ ಕ್ರಮಗಳ ಪ್ರಶ್ನೆಯೇ ಬರುವುದಿಲ್ಲ ಎಂದರು.

Recommended Video

ಶಾಸಕ ಯತ್ನಾಳ್ ವಿರುದ್ಧ ಸಚಿವ ಬಿ.ಸಿ ಪಾಟೀಲ್ ಕಿಡಿ | Oneindia Kannada

English summary
All dept staff must obtain the Covid vaccine. This will help prevent a second wave of Corona, Health and Medical Education Minister Dr K Sudhakar said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X