ನವೀನ್ ಮೃತದೇಹ ಪಡೆಯಲು ಎಲ್ಲ ಪ್ರಯತ್ನ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು, ಮಾರ್ಚ್ 05: ನವೀನ್ ಮೃತದೇಹವನ್ನು ಪಡೆಯುವ ಪ್ರಯತ್ನ ಜಾರಿಯಲ್ಲಿದೆ. ನಿಖರ ಮಾಹಿತಿ ಪಡೆಯಲಾಗುತ್ತಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ಉಕ್ರೇನ್ ನಿಂದ ಹಲವಾರು ಕನ್ನಡಿಗರನ್ನು ಕರೆತರಲಾಗಿದೆ. ಖಾರ್ಕೀವ್, ಕೀವ್‌ನಲ್ಲಿ ಹೊರಬರಲಾರದ ಪರಿಸ್ಥಿತಿಯೂ ಇದೆ. ಸಿಲುಕಿಕೊಂಡವರನ್ನು ಪತ್ತೆ ಹಚ್ಚಲು ರಾಯಭಾರಿ ಕಚೇರಿಯವರೂ ಕಾರ್ಯನಿರತರಾಗಿದ್ದಾರೆ. ದಾಳಿ ಕಡಿಮೆಯಾದ ಕೂಡಲೇ ಸಂಪರ್ಕ ಸಾಧಿಸಲಾಗುವುದು ಎಂದು ಹೇಳಿದ್ದಾರೆ. ನಿನ್ನೆಯೂ ಕೇಂದ್ರ ವಿದೇಶಾಂಗ ಸಚಿವರೊಂದಿಗೆ ಮಾತನಾಡಿದ್ದು, ಉಕ್ರೇನ್ ರಾಯಭಾರ ಕಚೇರಿಯೊಂದಿಗೂ ಮಾತನಾಡಲಾಗಿದೆ ಎಂದರು.

All efforts to get Naveens body: CM Basavaraj Bommai

ಕೇಂದ್ರ ಜಲಶಕ್ತಿ ಸಚಿವರು ಭಾಗವಹಿಸುವ ಜಲಜೀವನ್ ಮಿಷನ್ ಕುರಿತು ದಕ್ಷಿಣ ರಾಜ್ಯ ಗಳ ಪ್ರಾದೇಶಿಕ ಸಭೆಯಲ್ಲಿ ಭಾಗವಹಿಸಿ ನಂತರ ಶಿಕಾರಿಪುರ ದಲ್ಲಿ ರೈತರ ಸಭೆಯಲ್ಲಿ ಪಾಲ್ಗೊಂಡು, ರಾಣಿಬೆನ್ನೂರಿನಲ್ಲಿ ಉಕ್ರೇನ್ ನಲ್ಲಿ ಮೃತಪಟ್ಟ ನವೀನ್ ಅವರ ತಂದೆಯವರನ್ನು ಭೇಟಿಯಾಗಲಿದ್ದೇನೆ ಎಂದರು. ಸರ್ಕಾರದಿಂದ ನವೀನ್ ಕುಟುಂಬಕ್ಕೆ ಪರಿಹಾರ ಕೊಡಲು ನಿರ್ಧರಿಸಲಾಗಿದೆ ಎಂದರು.

Recommended Video

      ಬೆಂಗಳೂರು ಸಮಗ್ರ ಅಭಿವೃದ್ಧಿಗೆ ಬೊಮ್ಮಾಯಿ ಬಜೆಟ್ ನಲ್ಲಿ ಏನೇನಿದೆ? | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+