ಕಚೇರಿಯಲ್ಲಿ ಸರ್ಕಾರಿ ನೌಕರರು ಗುರುತಿನ ಚೀಟಿ ಧರಿಸಬೇಕು

ಬೆಂಗಳೂರು, ನವೆಂಬರ್ 05: ಕರ್ನಾಟಕದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿ/ಸಿಬ್ಬಂದಿಗಳು ಗುರುತಿನ ಚೀಟಿ ಧರಿಸಬೇಕು. ತಮ್ಮ ಟೇಬಲ್ ಮೇಲೆ ನಾಮಫಲಕವನ್ನು ಇಡಬೇಕು ಎಂದು ಸುತ್ತೋಲೆ ಹೊರಡಿಸಲಾಗಿದೆ.

ಕಚೇರಿಗಳಿಗೆ ಜನರು ಕೆಲಸ ಕಾರ್ಯಗಳಿಗಾಗಿ ದಿನನಿತ್ಯ ಭೇಟಿ ನೀಡುತ್ತಾರೆ. ಇಂತಹ ಸಮಯದಲ್ಲಿ ಯಾವ ಅಧಿಕಾರಿಗಳನ್ನು ಭೇಟಿ ಮಾಡಬೇಕು ಎಂಬ ಮಾಹಿತಿ ಜನರಿಗೆ ಇರುವುದಿಲ್ಲ. ಇದಕ್ಕಾಗಿ ಹೊಸ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ.

ಆದ್ದರಿಂದ ಬ್ಯಾಂಕ್ ಮತ್ತು ಅಂಚೆ ಕಚೇರಿಗಳಲ್ಲಿ ಇರುವಂತೆ ಅಧಿಕಾರಿ/ಸಿಬ್ಬಂದಿ ಹೆಸರು, ಹುದ್ದೆಯ ನಾಮಫಲಕಗಳನ್ನು ಅಳವಡಿಸಬೇಕು. ಅಧಿಕಾರಿ/ಸಿಬ್ಬಂದಿ ಕಚೇರಿ ವೇಳೆಯಲ್ಲಿ ಕಡ್ಡಾಯವಾಗಿ ಗುರುತಿನ ಚೀಟಿ ಧರಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

All Government Employees Should Wear Identity Card

ಈ ರೀತಿ ನಾಮಫಲಕ ಅಳವಡಿಕೆ ಮಾಡುವುದು, ಗುರುತಿನ ಚೀಟಿ ಧರಿಸುವುದರಿಂದ ಜನರು ಸಂಬಂಧಪಟ್ಟ ಅಧಿಕಾರಿಗಳನ್ನು ನೇರವಾಗಿ ಭೇಟಿ ಮಾಡಿ ಮಾಹಿತಿಗಳನ್ನು ಪಡೆಯಬಹುದಾಗಿದೆ. ಇದರಿಂದ ಸಮಯದ ಉಳಿತಾಯ ಸಹ ಆಗಲಿದೆ.

ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು/ ಪ್ರಧಾನ ಕಾರ್ಯದರ್ಶಿಗಳು ಮತ್ತು ಕಾರ್ಯದರ್ಶಿಗಳು ತಮ್ಮ ಅಧೀನ ಇಲಾಖೆಗಳಿಗೆ ಹಾಗೂ ಸರ್ಕಾರ ಅಧೀನ ನಿಗಮ/ ಮಂಡಳಿಗಳ ಅಧಿಕಾರಿ/ಸಿಬ್ಬಂದಿಗಳಿಗೆ ಈ ಆದೇಶವನ್ನು ಪಾಲಿಸಲು ನಿರ್ದೇಶನ ನೀಡಬೇಕು ಎಂದು ಸೂಚಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+