ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸರ್ಕಾರಿ ಕಚೇರಿಗಳಲ್ಲಿ ಇನ್ನು ಸೋಲಾರ್ ವಿದ್ಯುತ್ ಉತ್ಪಾದನೆ

|
Google Oneindia Kannada News

ಬೆಂಗಳೂರು, ಡಿಸೆಂಬರ್ 07 : ಸೌರ ಶಕ್ತಿ ಉತ್ಪಾದನೆಯಲ್ಲಿ ದೇಶದಲ್ಲಿ ಪ್ರಥಮ ಸ್ಥಾನಗಳಿಸಬೇಕು ಎಂಬ ಗುರಿ ಹೊಂದಿರುವ ಕರ್ನಾಟಕ ಸರ್ಕಾರ, ಎಲ್ಲಾ ತಾಲೂಕುಗಳ ಸರ್ಕಾರಿ ಕಚೇರಿ ಮೇಲೆ ಸೋಲಾರ್ ಫಲಕ ಆಳವಡಿಸಲು ಮುಂದಾಗಿದೆ. ಇದಕ್ಕಾಗಿ 436 ಕೋಟಿ ರೂ. ಬಿಡುಗಡೆ ಮಾಡಿದೆ.

'13ನೇ ಹಣಕಾಸು ಆಯೋಗವು ನವೀಕರಿಸಬಹುದಾದ ಇಂಧನ ಅಭಿವೃದ್ಧಿಗಾಗಿ ನೀಡಿರುವ ಹೆಚ್ಚುವರಿ ಸಂಪನ್ಮೂಲಗಳಿಗೆ ಕಾರ್ಯಯೋಜನೆಯನ್ನು ರೂಪಿಸಿ ಕ್ರೆಡಲ್ ಹಾಗೂ ವಿದ್ಯುತ್ ವಿತರಣಾ ಕಂಪನಿಗಳಿಗೆ ಒಟ್ಟು 436.687 ಕೋಟಿ ರೂ ಬಿಡುಗಡೆ ಮಾಡಲಾಗಿದೆ' ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. [ಹೈಕೋರ್ಟ್ ಗೆ ಸೌರಶಕ್ತಿ ಬಲ]

solar energy

ಈ ಯೋಜನೆ ಅನ್ವಯ ರಾಜ್ಯದ 60 ತಾಲೂಕುಗಳಲ್ಲಿ ವಿಕೇಂದ್ರೀಕೃತ ವಿದ್ಯುತ್ ಉತ್ಪಾದನೆಯನ್ನು ಪ್ರೋತ್ಸಾಹಿಸಲು ಸೌರ ವಿದ್ಯುತ್ ಘಟಕಗಳನ್ನು ಅಳವಡಿಸಲು 290.83 ಕೋಟಿ ಮೀಸಲಾಗಿಡಲಾಗಿದೆ. ಸೌರಶಕ್ತಿ ಮೇಲ್ಛಾವಣಿಯನ್ನು ಎಲ್ಲಾ ವಿದ್ಯುತ್ ಕಂಪನಿಗಳ ವ್ಯಾಪ್ತಿಯಲ್ಲಿನ ಸರ್ಕಾರಿ ಕಟ್ಟಡಗಳ ಮೇಲೆ ಆಳವಡಿಸಲಾಗುತ್ತದೆ. [ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಸೌರಶಕ್ತಿ ಮೇಲ್ಛಾವಣಿ ಬಲ]

ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ, ಕೆಎಸ್ಆರ್‌ಟಿಸಿ ಬಸ್ ನಿಲ್ದಾಣ, ಆಸ್ಪತ್ರೆ, ಶಾಲಾ-ಕಾಲೇಜು ಸೇರಿದಂತೆ ವಿವಿಧ ಕಟ್ಟಡಗಳ ಮೇಲೆ ಸೋಲಾರ್ ಫಲಕ ಆಳವಡಿಸಲಾಗುತ್ತದೆ. ವಿದ್ಯುತ್ ವಿತರಣಾ ಕಂಪನಿಗಳಿಗೆ ಶೇಕಡಾವಾರು ವಿದ್ಯುತ್ ಹಂಚಿಕೆ ಪ್ರಮಾಣದ ಅನುಪಾತದಂತೆ ಒಟ್ಟು 145.69 ಕೋಟಿ ರೂ. ಮೀಸಲಾಗಿಡಲಾಗಿದೆ. [ಸೋಲಾರ್ ಶಾಕ್: ಕೇರಳ ಸಿಎಂ ಸೆಕ್ಸ್ ಆಫರ್ ಕೇಳಿದ್ರಂತೆ!]

ಹೈಕೋರ್ಟ್‌ನಲ್ಲಿ ಅಳವಡಿಸಲಾಗಿದೆ : ಕರ್ನಾಟಕ ಸರ್ಕಾರದ ಸೋಲಾರ್ ನೀತಿಯ ಅನ್ವಯ ಕರ್ನಾಟಕ ಹೈಕೋರ್ಟ್ ಮೇಲ್ಛಾವಣಿಯಲ್ಲಿ ಸೋಲಾರ್ ಫಲಕಗಳನ್ನು ಅಳವಡಿಸಲಾಗಿದೆ. ಪ್ರತಿದಿನ 200 ಕಿಲೋವ್ಯಾಟ್‌ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ.

English summary
Karnataka government decided to set up solar panels in all government offices in taluks. Energy department has released 436 core fund for this.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X