ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಿಯು ಕಾಲೇಜುಗಳು ಬಯೋ ಮೆಟ್ರಿಕ್ ಅಳವಡಿಸಿಕೊಳ್ಳುವುದು ಕಡ್ಡಾಯ

|
Google Oneindia Kannada News

ಬೆಂಗಳೂರು, ಮೇ 03: ರಾಜ್ಯದ ಎಲ್ಲ ಸರ್ಕಾರಿ ಮತ್ತು ಅನುದಾನಿತ ಪದವಿ ಪೂರ್ವ ಕಾಲೇಜುಗಳು ಬಯೋ ಮೆಟ್ರಿಕ್ ಹಾಜರಿ ವ್ಯವಸ್ಥೆಯನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಕಟ್ಟು ನಿಟ್ಟಿನ ಆದೇಶ ಹೊರಡಿಸಿದೆ.

ಮೇ 4 ರ ಒಳಗಾಗಿ ಎಲ್ಲ ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳ ಭೋದಕ ಮತ್ತು ಭೋದಕೇತರ ಸಿಬ್ಬಂದಿಯ ಹಾಜರಿಯನ್ನು ಭಯೋಮೆಟ್ರಿಕ್ ವ್ಯವಸ್ಥೆಯಲ್ಲಿ ಪಡೆದು ಇಲಾಖೆಗೆ ವರದಿ ಸಲ್ಲಿಸಬೇಕು ಎಂದು ಆದೇಶ ಹೊರಡಿಸಲಾಗಿದೆ.

ಬಯೋಮೆಟ್ರಿಕ್ ವ್ಯವಸ್ಥೆ ಅಳವಡಿಸಿಕೊಳ್ಳಲು ವಿಫಲವಾಗುವ ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳು ಕಟ್ಟು ನಿಟ್ಟಿನ ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.

All government PU colleges should adopt bio metric system

ಕಾಲೇಜುಗಳಲ್ಲಿ ಭೋದಕ ಮತ್ತು ಇತರ ಸಿಬ್ಬಂದಿಯ ಹಾಜರಾತಿ ಹೆಚ್ಚಿಸಲು ಮತ್ತು ಸಿಬ್ಬಂದಿಯ ಕಾರ್ಯಕ್ಷಮತೆ ಹೆಚ್ಚು ಮಾಡಲು ಮತ್ತು ಶೈಕ್ಷಣಿಕ ಗುಣಮಟ್ಟ ಹೆಚ್ಚು ಮಾಡಲು ಈ ಕಟ್ಟುನಿಟ್ಟಿನ ಆದೇಶ ಜಾರಿ ಮಾಡಲಾಗಿದೆ ಎನ್ನಲಾಗಿದೆ.

ರಾಜ್ಯ ಸರ್ಕಾರಿ ನೌಕರರಿಗೆ 2013ರಲ್ಲಿಯೇ ಬಯೋಮೆಟ್ರಿಕ್ ವ್ಯವಸ್ಥೆಯನ್ನು ಜಾರಿ ಮಾಡಲಾಗಿತ್ತು, ಆದರೆ ಆಗ ಕೆಲವು ಸರ್ಕಾರಿ ಕಚೇರಿಗಳಲ್ಲಿ ಮಾತ್ರವೇ ಇದು ಅನುಷ್ಠಾನಕ್ಕೆ ಬಂತು.

ಈಗ ಕಾಲೇಜುಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಉದ್ದೇಶಿಸಿದ್ದು, ಬಯೋಮೆಟ್ರಿಕ್ ವ್ಯವಸ್ಥೆಯು ಕಡ್ಡಾಯವಾಗಿ ಆಧಾರ್ ಆಧರಿತವಾಗಿರಬೇಕು ಎಂದು ಸೂಚಿಸಲಾಗಿದೆ.

ಕಾಲೇಜುಗಳ ಸಿಬ್ಬಂದಿಗಳು ಸಮಯಕ್ಕೆ ಸರಿಯಾಗಿ ಹಾಜರಾಗುವುದಿಲ್ಲ, ಬಹುತೇಕ ಕಾಲೇಜು ಶಿಕ್ಷಕರು ಟ್ಯೂಷನ್ಸ್‌ ಗಳಲ್ಲಿ ತೊಡಗಿಸಿಕೊಂಡಿದ್ದು, ಕಾಲೇಜು ಪಠ್ಯವನ್ನು ನಿರ್ಲಕ್ಷಿಸಿದ್ದಾರೆ ಎಂಬ ದೂರುಗಳು ಕೇಳಿಬಂದಿದ್ದರಿಂದ ಈ ಆದೇಶ ಜಾರಿ ಮಾಡಲಾಗಿದೆ.

English summary
Pre university department passed order that all government and granted PU colleges should adopt bio metric system. Teaching and non teaching staff's attendance must take by bio metric system.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X