ರಾಜ್ಯದ ಎಲ್ಲಾ ಆಸ್ಪತ್ರೆಗಳ ಶೇ.80ರಷ್ಟು ಹಾಸಿಗೆಗಳು ಕೊರೊನಾ ಸೋಂಕಿತರಿಗೆ ಮೀಸಲು: ಸುಧಾಕರ್
ಬೆಂಗಳೂರು, ಏಪ್ರಿಲ್ 22: ರಾಜ್ಯದಲ್ಲಿರುವ 30ಕ್ಕಿಂತ ಹೆಚ್ಚು ಹಾಸಿಗೆಗಳಿರುವ ಎಲ್ಲಾ ಆಸ್ಪತ್ರೆಗಳಲ್ಲಿ ಶೇ.80ರಷ್ಟು ಕೊರೊನಾ ಸೋಂಕಿತರಿಗೆ ಮೀಸಲಿಡಬೇಕು ಎಂದು ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ಕೇವಲ ಹಾಸಿಗೆಗಳು ಮಾತ್ರವಲ್ಲದೆ ಐಸಿಯುಗಳನ್ನು ಕೂಡ ಮೀಸಲಿಡುವಂತೆ ತಿಳಿಸಿದ್ದಾರೆ. ಡಯಾಲಿಸಿಸ್ ರೋಗಿಗಳು, ಮದರ್ ಕೇರ್ ಕೇಂದ್ರಗಳು, ಜೀವಕ್ಕೆ ಕುತ್ತು ತರುವ ಕಾಯಿಲೆಗಳಿಂದ ನರಳುತ್ತಿರುವ ಹಾಸಿಗೆಗಳನ್ನು ಹೊರತುಪಡಿಸಿ ಉಳಿದೆಲ್ಲಾ 30ಕ್ಕಿಂತ ಹೆಚ್ಚು ಹಾಸಿಗೆಗಳಿರುವ ಆಸ್ಪತ್ರೆಗಳಲ್ಲಿ ಶೇ.80ರಷ್ಟು ಹಾಸಿಗೆಗಳನ್ನು ಕೊರೊನಾ ಸೋಂಕಿತರಿಗಾಗಿಯೇ ಮೀಸಲಿಡಬೇಕು ಎಂದು ಹೇಳಿದ್ದಾರೆ.
ದೇಶದಲ್ಲಿ ಈವರೆಗೂ ಸುಮಾರು 12.7 ಕೋಟಿ ಡೋಸ್ ಕೊರೊನಾ ಲಸಿಕೆ ವಿತರಿಸಲಾಗಿದ್ದು, ಒಂದು ಅಥವಾ ಎರಡು ಡೋಸ್ ಲಸಿಕೆ ಪಡೆದ 99.96% ವ್ಯಕ್ತಿಗಳಲ್ಲಿ ಕೊರೊನಾ ಸೋಂಕು ಕಂಡುಬಂದಿಲ್ಲ.

ಕೊರೊನಾ ವಿರುದ್ಧದ ಈ ಹೋರಾಟದಲ್ಲಿ ಲಸಿಕೆ ನಮಗಿರುವ ಅತ್ಯಂತ ದೊಡ್ಡ ಅಸ್ತ್ರವಾಗಿದ್ದು ಎಲ್ಲ ಅರ್ಹ ವ್ಯಕ್ತಿಗಳೂ ಕೂಡಲೇ ಲಸಿಕೆ ಪಡೆಯಬೇಕೆಂದು ಮನವಿ ಮಾಡುತ್ತೇನೆ.
ಕೊರೊನಾ ಸೋಂಕು ಹೆಚ್ಚಿರುವ ಕಲಬುರ್ಗಿ, ಬೀದರ್, ವಿಜಯಪುರ, ದಕ್ಷಿಣ ಕನ್ನಡ, ಮೈಸೂರು ಹಾಗೂ ತುಮಕೂರು ಜಿಲ್ಲೆಗಳ ಜಿಲ್ಲಾಡಳಿತಗಳೊಂದಿಗೆ ಇಂದು ವಿಡಿಯೋ ಸಂವಾದ ನಡೆಸಲಾಯಿತು.
ಜಿಲ್ಲೆಯಲ್ಲಿ ಸೋಂಕಿನ ಸ್ಥಿತಿಗತಿ ಹಾಗೂ ಕೈಗೊಂಡಿರುವ ನಿಯಂತ್ರಣ ಕ್ರಮಗಳನ್ನು ಪರಿಶೀಲಿಸಲಾಯಿತು. ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಸೂಚಿಸಲಾಯಿತು ಎಂದು ಮಾಹಿತಿ ನೀಡಿದ್ದಾರೆ.
ಪ್ರತಿಯೊಬ್ಬ ಕೊರೊನಾ ಸೋಂಕಿತ ವ್ಯಕ್ತಿಗೂ ಸೂಕ್ತ ಚಿಕಿತ್ಸೆ ಒದಗಿಸಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದರು.












Click it and Unblock the Notifications