ಸಮ್ಮಿಶ್ರ ಸರ್ಕಾರದಲ್ಲಿ ಬಿರುಕು? ಎಲ್ಲ ಸುಳ್ಳು ಅಂದ್ರು ಗೌಡ್ರು!
Recommended Video

ಬೆಂಗಳೂರು, ಆಗಸ್ಟ್ 31: ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಮತ್ತೆ ಬಿರುಕು ಮೂಡುವ ಲಕ್ಷಣಗಳು ಗೋಚರಿಸುತ್ತಿವೆ ಎಂಬ ವದಂತಿಯನ್ನು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ತಳ್ಳಿಹಾಕಿದ್ದಾರೆ.
"ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಕಾಂಗ್ರೆಸ್ ಮತ್ತು ಜೆಡಿ ಎಸ್ ನಡುವೆ ಎಲ್ಲವೂ ಚೆನ್ನಾಗಿಯೇ ಇದೆ. ನಾವು ಎಂದಿಗೂ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ. ಲೋಕಸಭಾ ಚುನಾವಣೆಯಲ್ಲೂ ಒಟ್ಟಾಗಿಯೇ ಹೋರಾಡುತ್ತೇವೆ" ಎಂದು ಎಚ್ ಡಿ ದೇವೇಗೌಡ ಹೇಳಿದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇತ್ತೀಚೆಗಷ್ಟೇ ನಾನು ಮತ್ತೊಮ್ಮೆ ಮುಖ್ಯಮಂತ್ರಿಯಾಗುತ್ತೇನೆ ಎಂಬ ಹೇಳಿಕೆ ನೀಡಿದ್ದು ಸಾಕಷ್ಟು ವಿವಾದ ಸೃಷ್ಟಿಸಿತ್ತು. ಈ ಹಿನ್ನೆಲೆಯಲ್ಲಿ ಮತ್ತೆ ಕಾಂಗ್ರೆಸ್-ಜೆಡಿಎಸ್ ನಡುವೆ ಬಿರುಕು ಮೂಡಿದೆ ಎನ್ನಲಾಗಿತ್ತು. ಸಮ್ಮಿಶ್ರ ಸರ್ಕಾರಕ್ಕೆ ನೂರು ದಿನ ಪೂರೈಸಿದ ಹಿನ್ನೆಲೆಯಲ್ಲಿ ಗುರುವಾರ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ ಬಳಿ ದೂರು ಹೇಳುತ್ತಾರೆ ಎನ್ನಲಾಗಿತ್ತು. ಆದರೆ ಅಂಥ ಬೆಳವಣಿಗೆ ಏನೂ ನಡೆಯಲಿಲ್ಲ.












Click it and Unblock the Notifications