DK Shivakumar: ಜಿಬಿಎ ಪಾಲಿಕೆ ಸೇರಿದಂತೆ ಈ ವರ್ಷವೇ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆ: ಡಿ ಕೆ ಶಿವಕುಮಾರ್‌

ಬೆಂಗಳೂರು: ಜಿಬಿಎ ಪಾಲಿಕೆಗಳು ಸೇರಿದಂತೆ ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಈ ವರ್ಷವೇ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಹೆಬ್ಬಾಳ ಮೇಲ್ಸೇತುವೆ ಬಳಿ ನೂತನ ಮೇಲ್ಸೇತುವೆ ಉದ್ಘಾಟಿಸಿದ ಬಳಿಕ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಶಿವಕುಮಾರ್ ಅವರು ಗುರುವಾರ ಮಾತನಾಡಿ, ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನ ಈ ವರ್ಷವೇ ನಡೆಸಲಾಗುವುದು. ಸ್ಥಳೀಯ ಸಂಸ್ಥೆಗಳ ಚುನಾವಣೆ ಕುರಿತು ಈಗಾಗಲೇ ಸಿದ್ದತೆ ನಡೆಯುತ್ತಿದೆ ಎಂದು ಹೇಳಿದರು.

All local body elections will be held this year Dk Shivakumar

ಹೊಸ ವರ್ಷದ ಸಂಕಲ್ಪದ ಕುರಿತು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿ, 2026ರ ವರ್ಷ ಶುಭ ಲಗ್ನದಲ್ಲಿ ಆರಂಭವಾಗಿದೆ. 2025ರ ವರ್ಷದಲ್ಲಿ ನಾವು ಉತ್ತಮ ಆಡಳಿತ ನೀಡಿದ್ದೇವೆ. ಬಂಡವಾಳ ಹೂಡಿಕೆದಾರರ ಸಮಾವೇಶ ಹಾಗೂ ಟೆಕ್ ಸಮ್ಮೇಳನ ಮೂಲಕ ನಾವು ಕರ್ನಾಟಕವನ್ನು ಮುನ್ನಡೆಸಿದ್ದೇವೆ. ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ತಿಳಿಸಿದರು.

ನೀರಾವರಿ ಇಲಾಖೆಯಲ್ಲಿ ಐತಿಹಾಸಿಕ ತೀರ್ಮಾನ ಮಾಡಿದ್ದೇವೆ. ಯುಕೆಪಿ, ತುಂಗಾಭದ್ರ ಯೋಜನೆಯಲ್ಲಿ ನಾವು ಕೈಗೊಂಡ ತೀರ್ಮಾನ, ಮೇಕೆದಾಟು ಯೋಜನೆಯಲ್ಲಿ ನ್ಯಾಯಾಲಯದ ತೀರ್ಮಾನ ಇತಿಹಾಸದ ಪುಟ ಸೇರಿವೆ. ಜನರು ನಮ್ಮ ಮೇಲೆ ಇಟ್ಟಿರುವ ವಿಶ್ವಾಸ ನಮ್ಮ ಆತ್ಮವಿಶ್ವಾಸ ಹೆಚ್ಚಿಸಿದೆ. ಅವರ ನಂಬಿಕೆ ಉಳಿಸಿಕೊಳ್ಳಲು, ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ" ಎಂದು ಹೇಳಿದರು.

ನನ್ನ 35 ವರ್ಷಗಳ ರಾಜಕಾರಣದಲ್ಲಿ ಬೆಂಗಳೂರಿಗೆ ಇಷ್ಟು ದೊಡ್ಡ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರಲಿಲ್ಲ. ಪ್ರಧಾನಮಂತ್ರಿಗಳು ಕೂಡ ಬೆಂಗಳೂರಿಗೆ ಬಂದಾಗ ಈ ನಗರವನ್ನು ಕೊಂಡಾಡಿದರು. ಅವರು ನಮ್ಮ ನಗರಕ್ಕೆ ಅನುದಾನ ನೀಡದಿದ್ದರೂ ನಾವು ಈ ನಗರಕ್ಕೆ ಹೊಸ ರೂಪ ನೀಡಲು ಮುಂದಾಗಿದ್ದೇವೆ ಎಂದು ತಿಳಿಸಿದರು.

ಇನ್ನೂ ಗೃಹ ಇಲಾಖೆ ಭದ್ರತೆಯಿಂದ ಬೆಂಗಳೂರಿನಲ್ಲಿ ಜನ 2025ಕ್ಕೆ ಬೀಳ್ಕೊಡುಗೆ ನೀಡಿ, 2026ರ ವರ್ಷವನ್ನು ಸ್ವಾಗತಿಸಿದೆ. ಎಲ್ಲೂ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಂಡ ಗೃಹ ಸಚಿವ ಪರಮೇಶ್ವರ್ ಅವರ ನೇತೃತ್ವದ ಇಡೀ ಇಲಾಖೆಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+