ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿ ಇಲ್ಲ; ಅಸಮಾಧಾನಕ್ಕೆ ಇಬ್ಬರು ಕಾರಣ?

|
Google Oneindia Kannada News

Recommended Video

ಕರ್ನಾಟಕದ ವಿಷಯದಲ್ಲಿ ಸೋನಿಯಾ ಗಾಂಧಿಗೆ ದೊಡ್ಡ ತಲೆನೋವು | Oneindia Kannada

ಬೆಂಗಳೂರು, ಸೆಪ್ಟೆಂಬರ್ 28 : ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಂಡ ಬಳಿಕ ಕರ್ನಾಟಕ ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿ ಇದ್ದ ಲಕ್ಷಣಗಳು ಕಾಣಿಸುತ್ತಿಲ್ಲ. ರಾಜ್ಯ ಕಾಂಗ್ರೆಸ್‌ನ ಬಿಕ್ಕಟ್ಟು ದೆಹಲಿ ತಲುಪಿದ್ದು, ಹೈಕಮಾಂಡ್ ಈ ಬಾರಿ ಎಚ್ಚರಿಕೆಯ ಹೆಜ್ಜೆ ಇಡಲಿದೆ.

ಲೋಕಸಭಾ ಚುನಾವಣೆಯಲ್ಲಿ ನಿರೀಕ್ಷಿತ ಫಲಿತಾಂಶ ಪಡೆಯದ ಕಾಂಗ್ರೆಸ್‌ ಕರ್ನಾಟಕದಲ್ಲಿ ಪಕ್ಷ ಅಧಿಕಾರದಲ್ಲಿದೆ ಎಂಬ ಸಮಾಧಾನದಲ್ಲಿತ್ತು. ಆದರೆ, ಮೈತ್ರಿ ಸರ್ಕಾರ ಪತನಗೊಂಡ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಅಸಮಾಧಾನ ಹೆಚ್ಚಾಗುವಂತೆ ಮಾಡಿದೆ.

ಸಿದ್ದರಾಮಯ್ಯ ಬಗ್ಗೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ ಪರಮೇಶ್ವರಸಿದ್ದರಾಮಯ್ಯ ಬಗ್ಗೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ ಪರಮೇಶ್ವರ

ಇದಕ್ಕೆ ಪ್ರಮುಖ ಕಾರಣಗಳು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ಪ್ರಯತ್ನ ನಡೆಸಲಿಲ್ಲ ಎಂಬುದು ಒಂದು ಆರೋಪ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಎಲ್ಲಾ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದಿಲ್ಲ ಎಂಬುದು ಮತ್ತೊಂದು ಆರೋಪ.

ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್ಸಿಗರ ಆಕ್ರೋಶಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್ಸಿಗರ ಆಕ್ರೋಶ

ಕರ್ನಾಟಕದಲ್ಲಿ ಪಕ್ಷ ಸಂಘಟನೆ ಚುರುಕುಗೊಳಿಸಿ ಮುಂದಿನ ವಿಧಾನಸಭೆ ಚುನಾವಣೆಗೆ ಸಿದ್ಧಗೊಳಿಸಬೇಕು ಎಂದರೆ ಮಹತ್ವದ ಬದಲಾವಣೆಯಾಗಬೇಕು. ಅದರಲ್ಲೂ ವಿಪಕ್ಷ ನಾಯಕ, ಕೆಪಿಸಿಸಿ ಅಧ್ಯಕ್ಷರ ಹುದ್ದೆ ಬದಲಾಗಬೇಕು ಎಂಬುದು ಹೈಕಮಾಂಡ್ ಚಿಂತನೆಯಾಗಿದೆ.

ಯಾರು ಗಿಣಿ, ಯಾರು ಹದ್ದು: ಸಿದ್ದರಾಮಯ್ಯ ಟ್ವೀಟ್ ಸೂಚಿಸುತ್ತಿರುವುದು ಏನು?ಯಾರು ಗಿಣಿ, ಯಾರು ಹದ್ದು: ಸಿದ್ದರಾಮಯ್ಯ ಟ್ವೀಟ್ ಸೂಚಿಸುತ್ತಿರುವುದು ಏನು?

ಹಿರಿಯ ನಾಯಕರು ಶ್ರಮ ಹಾಕಲಿಲ್ಲ

ಹಿರಿಯ ನಾಯಕರು ಶ್ರಮ ಹಾಕಲಿಲ್ಲ

ಕಾಂಗ್ರೆಸ್-ಜೆಡಿಎಸ್ ಸರ್ಕಾರ ಅಸ್ತಿತ್ವದಲ್ಲಿ ಇದ್ದಾಗ 14 ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದರು. ಸರ್ಕಾರದ ರಕ್ಷಣೆಗೆ ಡಿ.ಕೆ.ಶಿವಕುಮಾರ್, ಕೆ.ಸಿ.ವೇಣುಗೋಪಾಲ್ ಕಸರತ್ತು ನಡೆಸಿದರು. ಆದರೆ, ಸಿದ್ದರಾಮಯ್ಯ ಹೆಚ್ಚಿನ ಶ್ರಮ ಹಾಕಲಿಲ್ಲ. ರಾಜೀನಾಮೆ ನೀಡಿದ ತಮ್ಮ ಆಪ್ತ ಶಾಸಕರ ಮನವೊಲಿಕೆ ಮಾಡಲು ವಿಫಲರಾದರು. ಸರ್ಕಾರ ಉರುಳಲು ಅವರು ಪ್ರಮುಖ ಕಾರಣ ಎಂಬುದು ರಾಜ್ಯ ಕಾಂಗ್ರೆಸ್‌ನ ಹಲವು ನಾಯಕರ ಆರೋಪವಾಗಿದೆ.

ವಿಪಕ್ಷ ನಾಯಕನ ಹುದ್ದೆ ಯಾರಿಗೆ?

ವಿಪಕ್ಷ ನಾಯಕನ ಹುದ್ದೆ ಯಾರಿಗೆ?

ಮೈತ್ರಿ ಸರ್ಕಾರ ಪತನಗೊಂಡು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿತು. ಅಧಿಕೃತ ವಿರೋಧ ಪಕ್ಷ ಕಾಂಗ್ರೆಸ್ ಇಲ್ಲಿಯ ತನಕ ವಿಧಾನಸಭೆ ವಿಪಕ್ಷ ನಾಯಕನ ಘೋಷಣೆ ಮಾಡಲ್ಲ. ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರು ಆಗಿ ಹೋದರೂ ಎಂಬ ವಾತಾವರಣ ನಿರ್ಮಾಣವಾಯಿತು. ಆದರೆ, ಈಗ ಸಿದ್ದರಾಮಯ್ಯ ವಿರುದ್ಧ ಹಿರಿಯ ನಾಯಕರೇ ಅಸಮಾಧಾನಗೊಂಡಿದ್ದಾರೆ ಎಂಬುದು ಗುಟ್ಟಾಗಿ ಉಳಿದಿಲ್ಲ.

ಪರಮೇಶ್ವರ, ಸಿದ್ದರಾಮಯ್ಯ ದೆಹಲಿ ಭೇಟಿ

ಪರಮೇಶ್ವರ, ಸಿದ್ದರಾಮಯ್ಯ ದೆಹಲಿ ಭೇಟಿ

ಮಾಜಿ ಉಪ ಮುಖ್ಯಮಂತ್ರಿ ಪರಮೇಶ್ವರ, ಸಿದ್ದರಾಮಯ್ಯ ಪ್ರತ್ಯೇಕವಾಗಿ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದರು. ಪರಮೇಶ್ವರ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಭೇಟಿ ಮಾಡಿದರು. ಆದರೆ, ಸಿದ್ದರಾಮಯ್ಯ ಮೂರು ದಿನ ಕಾದರೂ ಸೋನಿಯಾ ಭೇಟಿ ಸಾಧ್ಯವಾಗಿಲ್ಲ.

ಚುರುಕಾದ ಸಿದ್ದರಾಮಯ್ಯ

ಚುರುಕಾದ ಸಿದ್ದರಾಮಯ್ಯ

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿ. ಕೆ. ಶಿವಕುಮಾರ್ ಬಂಧನವಾಗುತ್ತಿದ್ದಂತೆ ಸಿದ್ದರಾಮಯ್ಯ ಚುರುಕಾಗಿದ್ದಾರೆ. ಪಕ್ಷದಲ್ಲಿ ಹಿಡಿತ ಸಾಧಿಸಲು ಪ್ರಯತ್ನ ನಡೆಸಿದ್ದಾರೆ. ಪ್ರತಿ ದಿನ ಕೆಪಿಸಿಸಿ ಕಚೇರಿಗೆ ಭೇಟಿ ನೀಡಲು ಆರಂಭಿಸಿದ್ದು, ಒಂದಿಲ್ಲೊಂದು ಸಭೆ ನಡೆಸುತ್ತಿದ್ದಾರೆ. ಅತ್ತ ಪರಮೇಶ್ವರ ಎರಡು ಮೂರು ಸಭೆಗೆ ಗೈರಾಗಿದ್ದು, ಎಲ್ಲರೂ ಸರಿ ಇಲ್ಲ ಎಂಬ ಸಂದೇಶ ಹೊರಬಿದ್ದಿದೆ.

ದಿನೇಶ್ ಗುಂಡೂರಾವ್

ದಿನೇಶ್ ಗುಂಡೂರಾವ್

ಮತ್ತೊಂದು ಕಡೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಿರುದ್ಧವೂ ಹಲವು ನಾಯಕರಲ್ಲಿ ಅಸಮಾಧಾನವಿದೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವುದಿಲ್ಲ ಎಂಬುದು ಒಂದು ಆರೋಪ. ಸಿದ್ದರಾಮಯ್ಯ ಹೇಳಿದಂತೆ ಕೇಳುತ್ತಾರೆ ಎನ್ನುವುದು ಮತ್ತೊಂದು ಆರೋಪ. ಆದ್ದರಿಂದ, ಪ್ರತಿಪಕ್ಷ ನಾಯಕ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯಾಗಲಿದೆ ಎಂಬ ಮಾತು ಹಬ್ಬಿದೆ.

English summary
Why section of Karnataka Congress leaders upset with Siddaramaiah and KPCC president Dinesh Gundu Rao. Party High command closely watching the issue. It may take final call on issue soon.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X