ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಧಿವೇಶನದಲ್ಲಿ ಯಾವುದೇ ವಿಷಯದ ಬಗ್ಗೆ ಚರ್ಚೆ ನಡೆಸಲು ಸರ್ಕಾರ ಸಿದ್ಧ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

|
Google Oneindia Kannada News

ಬೆಂಗಳೂರು, ಜು. 18: "ಲೋಕಸಭೆ ಮಳೆಗಾಲದ ಅಧಿವೇಶನದಲ್ಲಿ ಯಾವುದೇ ವಿಷಯದ ಬಗ್ಗೆ ಚರ್ಚೆ ನಡೆಸಲು ಸರ್ಕಾರ ಸಿದ್ಧವಾಗಿದೆ ಎಂದು ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ" ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಅವರು, "ನಾಳೆಯಿಂದ ಲೋಕಸಭೆ ಅಧಿವೇಶನ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಸರ್ವಪಕ್ಷ ಸಭೆ ಸರ್ವಪಕ್ಷ ಸಭೆ ಕರೆಯಲಾಗಿತ್ತು" ಎಂದರು.

"ಸಂಸತ್ ಮಳೆಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ಕರೆಯಲಾಗಿದ್ದ ಸರ್ವಪಕ್ಷ ಸಭೆಯಲ್ಲಿ 33 ಪಕ್ಷಗಳ 40ಕ್ಕೂ ಹೆಚ್ಚು ನಾಯಕರು ಭಾಗವಹಿಸಿ ಕಲಾಪದಲ್ಲಿ ಯಾವ ವಿಷಯಗಳ ಕುರಿತು ಬಗ್ಗೆ ಚರ್ಚಿಸಬೇಕು ಎಂಬುದರ ಬಗ್ಗೆ ಸಲಹೆ ನೀಡಿದರು" ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಭೆಯ ಬಳಿಕ ಹೇಳಿದರು.

 all party meeting a day before commencement of the Monsoon session of Parliament

"ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು ಪ್ರತಿಪಕ್ಷಗಳು ಸೇರಿದಂತೆ ಎಲ್ಲ ಸದಸ್ಯರ ಸಲಹೆಗಳು ಮೌಲ್ಯಯುತವಾಗಿವೆ. ಸರ್ವ ಸದಸ್ಯರ ಅಭಿಪ್ರಾಯದಂತೆ ಕಲಾಪ ನಡೆಯಲಿದೆ ಎಂದು ಭರವಸೆ ನೀಡಿದ್ದಾರೆ" ಎಂದು ಸಚಿವ ಜೋಶಿ ಹೇಳಿದರು.

ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಾಣಿಜ್ಯ ಸಚಿವ ಪಿಯೂಷ್ ಗೋಯಲ್, ಲೋಕಸಭೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ಟಿಎಂಸಿ ಸಂಸದ ಡೆರೆಕ್ ಒ'ಬ್ರಿಯೆನ್, ಡಿಎಂಕೆ ನಾಯಕ ತಿರುಚಿ ಶಿವ ಸೇರಿದಂತೆ 40ಕ್ಕೂ ಹೆಚ್ಚು ಸಂಸದರು ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಿದ್ದರು.

 all party meeting a day before commencement of the Monsoon session of Parliament

Recommended Video

ಮುಂಗಾರು ಅಧಿವೇಶನಕ್ಕೂ ಮುನ್ನ ಹೊಸಮುಖಗಳಿಗೆ ಮಣೆ ಹಾಕಿದ Sonia Gandhi | Oneindia Kannada

"ಲೋಕಸಭೆ ಮಳೆಗಾಲದ ಅಧಿವೇಶನದಲ್ಲಿ 20ಕ್ಕೂ ಹೆಚ್ಚು ವಿಧೇಯಕಗಳು ಮಂಡನೆ ಆಗಲಿದ್ದು, ಪ್ರತಿಪಕ್ಷಗಳು ತರುವ ಯಾವುದೇ ಬಗೆಯ ಚರ್ಚೆಗೆ ಸರ್ಕಾರ ಸಿದ್ಧವಿದೆ. ವಿಶ್ವದಲ್ಲೇ ಅತೀ ದೊಡ್ಡ ಕೊರೊನಾ ಲಸಿಕೆ ಅಭಿಯಾನ ಮಾಡಿದ್ದೇವೆ. ಈಗಾಗಲೇ 40 ಕೋಟಿಯಷ್ಟು ವ್ಯಾಕ್ಸಿನ್ ನೀಡಿದ್ದೇವೆ. ಎಲ್ಲರಿಗೂ ವ್ಯಾಕ್ಸಿನ್‌ ಕೊಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಕೊರೋನಾ ನಿಯಂತ್ರಿಸಲು ಯಶಸ್ವಿಯಾಗಿ ಕೇಂದ್ರ ಸರ್ಕಾರ ಕೆಲಸ ಮಾಡುತ್ತಿದೆ" ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.

English summary
Govt ready to hold discussions on any subject in Monsoon session, says PM Modi at all-party meeting in Delhi. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X