Cauvery Water: 'ಕಾವೇರಿ'ದ ಆಕ್ರೋಶಕ್ಕೆ ಮಣಿದ ರಾಜ್ಯ ಸರ್ಕಾರ; ಇಂದು ಮಹತ್ವದ ಮೀಟಿಂಗ್! ಎಲ್ಲರ ಚಿತ್ತ ಸರ್ವಪಕ್ಷ ಸಭೆ ಯತ್ತ!
ಬೆಂಗಳೂರು, ಆಗಸ್ಟ್ 23: ರಾಜ್ಯದಲ್ಲಿ ಬೃದ ಛಾಯೆ ಆವರಿಸಿದೆ. ರಾಜ್ಯದ ಪ್ರಮುಖ ಅಣೆಕಟ್ಟುಗಳು ಬರಿದಾಗುತ್ತಿದ್ದು, ರಾಜ್ಯದ ರೈತ ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯದಲ್ಲಿ ಬರಗಾಲ ಸೃಷ್ಠಿಯಾಗಿರುವ ಹೊತ್ತಲ್ಲೇ ಕಾವೇರಿಗಾಗಿ ತಮಿಳುನಾಡು ಮತ್ತೆ ಕ್ಯಾತೆ ತಗೆದಿದೆ.
ಇತ್ತ ತಮಿಳುನಾಡು ಸರ್ಕಾರದ ಒತ್ತಡಕ್ಕೆ ಮಣಿದು ಕೆಆರ್ಎಸ್ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸಿದ್ದು, ರಾಜ್ಯದ ಜನರ ಆಕ್ರೋಶಕ್ಕೆ ಕಾರಣವಾಗಿದ್ದು, ರಾಜ್ಯ ಸರ್ಕಾರದ ನಡೆಗೆ ವಿಪಕ್ಷಗಳು ಸಹ ರಾಜ್ಯಾದ್ಯಂತ ಪ್ರತಿಭಟನೆಗಳನ್ನ ಆರಂಭಿಸಿದ್ದು, ಸರ್ವಪಕ್ಷ ಸಭೆ ಕರೆಯುವಂತೆ ವಿಪಕ್ಷಗಳು ಪಟ್ಟು ಹಿಡಿದಿದ್ದು, ಸಿದ್ದರಾಮಯ್ಯ ಸರ್ಕಾರ ಸರ್ವಪಕ್ಷ ಸಭೆಯನ್ನ ಇಂದು(ಬುಧವಾರ)11 ಗಂಟೆಗೆ ಎಲ್ಲಾ ಪಕ್ಷದ ಮುಖಂಡರು,ಶಾಸಕರು ಹಾಗೂ ಸಂಸದರಿಗೆ ಆಹ್ವಾನಿಸಿದೆ.

ಹೌದು, ಇಂದು ನಡೆಯುವ ಸರ್ವಪಕ್ಷ ಸಭೆಯಲ್ಲಿ ಕಾವೇರಿ ವಿಚಾರವಾಗಿ ವಿಪಕ್ಷಗಳ ಸಲಹೆಯನ್ನ ಸರ್ಕಾರ ಪಡೆಯಲಿದ್ದು, ರಾಜ್ಯದ ಪರಿಸ್ಥಿತಿ ಕುರಿತು ಸರ್ವಪಕ್ಷದ ನಾಯಕರು ಚರ್ಚಿಸಲಿದ್ದಾರೆ. ಅಲ್ಲದೇ, ಕಾವೇರಿ ನದಿ ನೀರು ಬಿಡುಗಡೆ ಸಂಬಂಧದಲ್ಲಿ ಸರಕಾರ ಯಾವ ನಿಲುವು ತೆಗೆದುಕೊಳ್ಳಲಿದೆ ಎಂಬ ಕುತೂಹಲವಿದೆ.
ಇನ್ನೂ ಸರ್ವಪಕ್ಷ ಸಭೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಕಾವೇರಿ ಹಾಗೂ ಮಹದಾಯಿ ಜಲ ವಿವಾದಗಳ ಬಗ್ಗೆ ಚರ್ಚಿಸಿ ಪರಿಹಾರ ಸೂತ್ರಗಳನ್ನು ಕಂಡುಕೊಳ್ಳಲು ನಾಳೆ ಬೆಳಿಗ್ಗೆ 11 ಗಂಟೆಗೆ ಸರ್ವಪಕ್ಷಗಳ ಸಭೆ ಕರೆದಿದ್ದೇವೆ. ಈ ವರ್ಷ ವಾಡಿಕೆಗಿಂತ ಕಡಿಮೆ ಮಳೆಯಾಗಿರುವುದರಿಂದ ರಾಜ್ಯದ ಬಹುತೇಕ ಜಲಾಶಯಗಳಲ್ಲಿ ಕೃಷಿ ಹಾಗೂ ಕುಡಿಯುವ ನೀರಿನ ಉದ್ದೇಶಕ್ಕೆ ಅಗತ್ಯವಾದ ಪ್ರಮಾಣಕ್ಕಿಂತ ಕಡಿಮೆ ನೀರಿದೆ. ಇಂತಹ ಸಂಕಷ್ಟದ ಸಮಯದಲ್ಲಿ ಕೂಡ ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಗಳ ಆದೇಶ ಪಾಲನೆ ಮಾಡಬೇಕಾಗಿದೆ.

ಒಂದೆಡೆ ಕನ್ನಡಿಗರ ಹಿತರಕ್ಷಣೆ, ಇನ್ನೊಂದೆಡೆ ನ್ಯಾಯಾಲಯದ ಆದೇಶ ಪಾಲನೆ ಮಾಡಬೇಕಾದ ಸಂದಿಗ್ಧ ಸಮಯದಲ್ಲಿ ನಾವಿರುವುದರಿಂದ ನಾಳೆ ನಡೆಯಲಿರುವ ಸರ್ವಪಕ್ಷ ಸಭೆಯಲ್ಲಿ ರಾಜ್ಯದ ಎಲ್ಲಾ ಪಕ್ಷಗಳ ಮುಖಂಡರು, ಸಂಸತ್ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ರಚನಾತ್ಮಕ ಸಲಹೆ, ಸಹಕಾರ ನೀಡುವ ಮೂಲಕ ನಾಡಿನ ಹಿತರಕ್ಷಣೆಗೆ ನಮ್ಮೊಂದಿಗೆ ಕೈಜೋಡಿಸುತ್ತೀರೆಂಬ ಭರವಸೆಯಿದೆ ಎಂದುತಿಳಿಸಿದ್ದಾರೆ.
ತಮಿಳುನಾಡು ಸರಕಾರದ ಮೇಲ್ಮನವಿ ಆಧರಿಸಿ ಕಾವೇರಿ ನದಿ ನೀರು ಬಿಡುಗಡೆಗೆ ಸಂಬಂಧಿಸಿ ಸುಪ್ರೀಂಕೋರ್ಟ್ ಪ್ರತ್ಯೇಕ ತ್ರಿಸದಸ್ಯ ಪೀಠ ರಚಿಸಿದೆ. ಇದರಿಂದಾಗಿ ಕಾವೇರಿ ನೀರಿನ ಸಂಬಂಧದಲ್ಲಿ ಕರ್ನಾಟಕ ಮತ್ತು ತಮಿಳುನಾಡು ನಡುವೆ ಪುನಃ ಸಂಘರ್ಷದ ವಾತಾವರಣ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ವಪಕ್ಷಯೂ ಸಾಕಷ್ಟು ಮಹತ್ವ ಪಡೆದುಕೊಂಡಿದೆ.
ಇನ್ನೂ ಸರ್ವಪಕ್ಷಗಳ ಸಭೆಯಲ್ಲಿ ಎಲ್ಲಾ ಪಕ್ಷದ ಮುಖಂಡರು ಮಾಜಿ ಮುಖ್ಯಮಂತ್ರಿಗಳು, ಸಂಸದರು, ನಾನಾ ಪಕ್ಷಗಳ ಮುಖಂಡರು, ರೈತರು, ಕಾನೂನು ತಜ್ಞರು ಹಾಗೂ ಅಂತಾರಾಜ್ಯ ಜಲವಿವಾದ ಪ್ರಕರಣಗಳಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಕಾನೂನು ತಂಡದ ಸದಸ್ಯರು ಪಾಲ್ಗೊಳ್ಳಲಿದ್ದಾರೆ.
ಇನ್ನೂ ನಾಡು, ನುಡಿ ಮತ್ತು ನೆಲ, ಜಲಕ್ಕೆ ಸಂಬಂಧಿಸಿದ ವಿಚಾರದಲ್ಲಿ ರಾಜ್ಯದ ರಾಜಕೀಯ ಪಕ್ಷಗಳು ಮಾದರಿಯಾಗಿ ನಡೆದುಕೊಂಡಿವೆ. ಇಂಥ ಸಂದರ್ಭದಲ್ಲಿ ಯಾವತ್ತೂ ರಾಜಕಾರಣ ಮಾಡಿಲ್ಲ. ಈಗಲೂ ರಾಜ್ಯದ ಜನರು ಇದೇ ಮಾದರಿಯನ್ನು ನಿರೀಕ್ಷಿಸಿದ್ದು, ಕಾವೇರಿ ನೀರು ಬಿಡುಗಡೆ ವಿಷಯದಲ್ಲಿ ರಾಜ್ಯದ ಹಿತ ಕಾಯುವ ಸಹಮತದ ನಿರ್ಣಯವನ್ನು ಎದುರು ನೋಡುತ್ತಿದ್ದಾರೆ.












Click it and Unblock the Notifications