ಸ್ಥಳೀಯ ಸಂಸ್ಥೆಗಳ ಮೀಸಲಾತಿ ಕುರಿತು ಸರ್ವಪಕ್ಷ ಸಭೆ: ಎಸ್ಟಿ ಮೀಸಲಾತಿ ಹೆಚ್ಚಿಸಲು ಚಿಂತನೆ

ಬೆಂಗಳೂರು, ಮಾರ್ಚ್ 23: ಹಿಂದುಳಿದ ವರ್ಗಗಳ ಮೀಸಲಾತಿ ಕಲ್ಪಿಸಿ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಬೇಕು ಎಂದು ಒಮ್ಮತದ ತೀರ್ಮಾನವಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗದವರಿಗೆ ಮೀಸಲಾತಿ ಕಲ್ಪಿಸುವ ಸಂಬಂಧ ನಡೆದ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಎಲ್ಲಾ ಆಯಾಮಗಳಲ್ಲಿ ವಿಚಾರ ಮಾಡಿ ಹಿಂದುಳಿದ ವರ್ಗಗಳಿಗೆ ರಾಜಕೀಯವಾಗಿ ಹಿಂದುಳಿದಿರುವುದನ್ನು ಗುರುತಿಸಬೇಕು. ಅದಕ್ಕಾಗಿ ಸಮಿತಿ ರಚಿಸಬೇಕು. ಒಟ್ಟಾರೆ ಮೀಸಲಾತಿ ಶೇ.50 ಮೀರಬಾರದು ಎನ್ನುವ ಸರ್ವೋಚ್ಚ ನ್ಯಾಯಾಲಯದ ಷರತ್ತುಗಳನ್ವಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು.ಈ ತಿಂಗಳ ಅಂತ್ಯದೊಳಗೆ ಮುಂದಿನ ಸಭೆ ನಿಗದಿಪಡಿಸಲಾಗುವುದು. ಆ ಸಭೆಯಲ್ಲಿ ವಿರೋಧ ಪಕ್ಷದ ನಾಯಕರ ಹಾಜರಾತಿಯಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.

All party meeting on reservations for local bodies elections: Thinking to increase ST reservation

ಇತ್ತೀಚಿನ ಸರ್ವೋಚ್ಚ ನ್ಯಾಯಾಲಯದ ಆದೇಶಕ್ಕೆ ಅನುಗುಣವಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗದವರಿಗೆ ಮೀಸಲಾತಿ ಕಲ್ಪಿಸಲು ಯಾವ ಕ್ರಮಗಳನ್ನು ಕೈಗೊಳ್ಳಬೇಕು, ಯಾವ ರೀತಿ ಚುನಾವಣೆ ನಡೆಯಬೇಕು ಎಂಬ ವಿಚಾರದಲ್ಲಿ ಸುದೀರ್ಘ ಚರ್ಚೆಯಾಗಿದೆ. ಅಡ್ವೊಕೇಟ್ ಜನರಲ್ ಅವರು ಕಾನೂನಿನ ವಸ್ತುಸ್ಥಿತಿಯ ವಿವರಗಳನ್ನು ತಿಳಿಸಿದ್ದಾರೆ ಎಂದರು.

ಈ ಕುರಿತು ಆಯೋಗ ರಚಿಸಿ ವರದಿ ಪಡೆದು ಚುನಾವಣೆಗೆ ಹೋಗಬೇಕೆ ಅಥವಾ ಸರ್ವೋಚ್ಚ ನ್ಯಾಯಾಲಯದಲ್ಲಿ ಪುನರ್ ಪರಿಶೀಲನಾ ಅರ್ಜಿ ಹಾಕಬೇಕೆ ಎನ್ನುವ ಆಯ್ಕೆ ನಮ್ಮ ಮುಂದಿದೆ. ಹಿಂದುಳಿದ ವರ್ಗದವರಿಗೆ ಮೀಸಲಾತಿ ನೀಡದೆ ಚುನಾವಣೆಗೆ ಹೋಗಲು ಸಾಧ್ಯವಿಲ್ಲ ಎಂದರು.

ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಹೆಚ್ಚಳಕ್ಕೆ ತೀರ್ಮಾನ

ಸಭೆಯಲ್ಲಿ ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಹೆಚ್ಚಿಸುವ ಬಗ್ಗೆಯೂ ಚರ್ಚೆಯಾಗಿದೆ. 7.5 % ಗೆ ಮೀಸಲಾತಿಯನ್ನು ಹೆಚ್ಚಿಸಬೇಕೆಂದು ಸಮುದಾಯವರ ಬೇಡಿಕೆಯಿದೆ. ಅವರ ಜನಸಂಖ್ಯೆಯೂ ಹೆಚ್ಚಾಗಿದೆ. ಹಿಂದಿನ ಸರ್ಕಾರ ಈ ಕುರಿತು ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿ ರಚಿಸಿತ್ತು. ಯಡಿಯೂರಪ್ಪ ಅವರ ಸರ್ಕಾರದಲ್ಲಿ ಸಮಿತಿ ವರದಿ ಸಲ್ಲಿಸಿದೆ. ವರದಿಯಲ್ಲಿ ಎಸ್.ಸಿ ಮತ್ತು ಎಸ್. ಟಿ ಗೆ ಮೀಸಲಾತಿ ಹೆಚ್ಚಿಸಬೇಕೆಂದು ಶಿಫಾರಸ್ಸು ಮಾಡಲಾಗಿದೆ. ಅದರಂತೆ ನಿರ್ಣಯ ತೆಗೆದುಕೊಳ್ಳಬೇಕು ಎಂದರು.

ನ್ಯಾಯಮೂರ್ತಿ ನಾಗಮೋಹನದಾಸ್ ಸಮಿತಿ ವರದಿ, ಮಹಾರಾಷ್ಟ್ರದ ಜಯಶ್ರೀ ಪಾಟೀಲ್ ಪ್ರಕರಣ ಹಾಗೂ ಇಂದಿರಾ ಸಹಾನಿ ಪ್ರಕರಣಗಳ ತೀರ್ಪುಗಳ ಹಿನ್ನೆಲೆಯಲ್ಲಿ ಹಾಗೂ ನ್ಯಾಯಮೂರ್ತಿ ಸುಭಾಷ್ ಅಡಿ ಅವರಿಂದಲೂ ಮಧ್ಯಂತರ ವರದಿ ಪಡೆದು ಈ ಜನಾಂಗಕ್ಕೆ ಮೀಸಲಾತಿ ಹೆಚ್ಚು ಮಾಡುವ ಮೂಲಕ ನ್ಯಾಯವನ್ನು ಕೊಡಬೇಕೆಂಬ ತೀರ್ಮಾನವಾಗಿದೆ ಎಂದರು.

ಮೀಸಲಾತಿ ಕೊಡುವುದಾದರೆ ಸಂವಿಧಾನಾತ್ಮಕವಾಗಿ ಹಾಗೂ ಸರ್ವೋಚ್ಚ ನ್ಯಾಯಾಲಯದ ಆದೇಶದನ್ವಯ ನೀಡಬೇಕು. ಆ ನಿಟ್ಟಿನಲ್ಲಿ ಕೂಡಲೇ ಅಡ್ವೊಕೇಟ್ ಜನರಲ್ ಅವರಿಗೆ ಮೂರೂ ವರದಿಗಳ ಬಗ್ಗೆ ವರದಿ ನೀಡಲು ತಿಳಿಸಲಾಗಿದೆ. ಅದನ್ನು ಸರ್ವ ಪಕ್ಷಗಳ ಸಭೆಯಲ್ಲಿಟ್ಟು, ಒಪ್ಪಿಗೆ ಪಡೆಯಲಾಗುವುದು ಎಂದರು.

2ಎ ವರ್ಗಕ್ಕೆ ಸೇರಿರುವ ಕುರುಬ ಸಮಾಜದವರು ಪರಿಶಿಷ್ಟ ಪಂಗಡಕ್ಕೆ ಸೇರಬೇಕೆಂಬ ಬೇಡಿಕೆ ಇದೆ. ಕೆಲವರು 3ಬಿ ನಲ್ಲಿರುವವರು 2ಎ ವರ್ಗಕ್ಕೆ ಸೇರಬೇಕು, 3ಬಿ ನಲ್ಲಿ ಇಲ್ಲದವರು, 3ಬಿ ವರ್ಗಕ್ಕೆ ಸೇರಬೇಕು ಎಂಬ ಬೇಡಿಕೆ ಇದೆ. ಈ ಹಿನ್ನೆಲೆಯಲ್ಲಿ ಹಂತ ಹಂತವಾಗಿ ನಾವು ಮುಂದುವರೆಯಬೇಕು. ಮೂಲಭೂತವಾಗಿ ಶೇ.50 ದಾಟಬೇಕೋ, ದಾಟಿದರೆ ಕಾನೂನಿನ ರೀತಿ ಹೇಗೆ ಮಾಡಬೇಕು ಎನ್ನುವ ವಿಚಾರವಿದೆ. ಮೊದಲು ನಾಗಮೋಹನ್ ದಾಸ ವರದಿ ಆಧಾರದ ಮೇಲೆ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು. ಆದಷ್ಟು ಶೀಘ್ರವಾಗಿ ನ್ಯಾಯಮೂರ್ತಿ ಸುಭಾಷ್ ಅಡಿಯವರ ವರದಿಯನ್ನು ಪಡೆದು, ನಂತರ ಸರ್ವಪಕ್ಷ ಸಭೆಯ ಮುಂದಿಡಲಾಗುವುದು. ನಂತರ ವಿಧಾನಸಭೆಯಲ್ಲಿ ಮಂಡಿಸಿ ನ್ಯಾಯ ಒದಗಿಸುವ ತೀರ್ಮಾನ ಮಾಡಲಾಗುವುದು ಎಂದರು.

ಇಂದಿನ ಸಭೆಯಲ್ಲಿ ಪರಿಶಿಷ್ಟ ಪಂಗಡದವರಿಗೆ ನ್ಯಾಯ ಒದಗಿಸುವ ಬಗ್ಗೆ ಒಮ್ಮತದ ಅಭಿಪ್ರಾಯ ಮೂಡಿದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+