ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ಭೀತಿ ನಡುವೆಯೇ ಗುರುವಾರ ದ್ವಿತೀಯ ಪಿಯುಸಿ ಪರೀಕ್ಷೆ

|
Google Oneindia Kannada News

ಬೆಂಗಳೂರು, ಜೂನ್ 17 : ಕೊರೊನಾ ವೈರಸ್ ಸೋಂಕಿನ ಭೀತಿಯ ನಡುವೆಯೇ ಕರ್ನಾಟಕದಲ್ಲಿ ಗುರುವಾರ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಲಾಕ್ ಡೌನ್ ಘೋಷಣೆಯಾಗಿದ್ದರಿಂದ ಆಂಗ್ಲ ಭಾಷೆಯ ಪರೀಕ್ಷೆ ಮಾತ್ರ ಬಾಕಿ ಉಳಿದಿತ್ತು.

Recommended Video

Solar Eclipse 2020: Most Imapcted 4 Zodiac Sign | Oneindia Kannada

ಜೂನ್ 18ರ ಗುರುವಾರ ಕರ್ನಾಟಕದ 1016 ಪರೀಕ್ಷಾ ಕೇಂದ್ರಗಳಲ್ಲಿ 5,95,997 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರದ ಆವರಣ, ಪರೀಕ್ಷೆ ನಡೆಯುವ ಕೊಠಡಿಗಳನ್ನು ಈಗಾಗಲೇ ಸ್ಯಾನಿಟೈಸ್ ಮಾಡಲಾಗಿದೆ.

ಕರ್ನಾಟಕದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ಕರ್ನಾಟಕದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ

ಪರೀಕ್ಷೆಗಳನ್ನು ನಡೆಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಎಲ್ಲಾ ವಿದ್ಯಾರ್ಥಿಗಳು, ಸಿಬ್ಬಂದಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಎಲ್ಲಾ ಕೇಂದ್ರಗಳಲ್ಲಿ ಥರ್ಮಲ್ ಸ್ಕ್ಯಾನಿಂಗ್ ಮಾಡುವ ಗನ್ ಇರಲಿದೆ.

SSLC ಪರೀಕ್ಷೆ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್SSLC ಪರೀಕ್ಷೆ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

All Set For 2nd PUC Exam On June 18

ಗುರುವಾರ ಬೆಳಗ್ಗೆ 10.15ಕ್ಕೆ ಪರೀಕ್ಷೆಗಳು ಆರಂಭವಾಗಲಿವೆ. ವಿದ್ಯಾರ್ಥಿಗಳು ಪರೀಕ್ಷೆ ಆರಂಭದ ಒಂದು ಗಂಟೆ ಮೊದಲು ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬೇಕು ಎಂದು ನಿರ್ದೇಶನ ನೀಡಲಾಗಿದೆ. ಕಂಟೈನ್ಮೆಂಟ್‌ ಝೋನ್‌ಗಳಿಂದ ಆಗಮಿಸುವ ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ.

ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ದಿನಾಂಕ ಪ್ರಕಟ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ದಿನಾಂಕ ಪ್ರಕಟ

ಪ್ರತಿ ವಿದ್ಯಾರ್ಥಿಯ ದೇಹದ ಉಷ್ಣತೆಯನ್ನು ಥರ್ಮಲ್ ಸ್ಕ್ಯಾನಿಂಗ್ ಮೂಲಕ ಪರೀಕ್ಷೆ ಮಾಡಲಾಗುತ್ತದೆ. ಜ್ವರ, ಕೆಮ್ಮು ಮತ್ತು ಶೀತದಿಂದ ಬಳಲುತ್ತಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಪ್ರತ್ಯೇಕ ಕೊಠಡಿ ವ್ಯವಸ್ಥೆಗಳನ್ನು ಮಾಡಲಾಗಿದೆ.

ಒಂದು ವೇಳೆ ಯಾವುದೇ ವಿದ್ಯಾರ್ಥಿಗೆ ಕೋವಿಡ್ - 19 ಸೋಂಕು ಇದ್ದರೆ ಪರೀಕ್ಷೆ ಬರೆಯಲು ಅವಕಾಶವಿಲ್ಲ. ಅವರ ಪೂರಕ ಪರೀಕ್ಷೆಯ ಸಮಯದಲ್ಲಿ ಪರೀಕ್ಷೆ ಬರೆಯಬಹುದಾಗಿದ್ದು ಅವರನ್ನು ಸಾಮಾನ್ಯ ವಿದ್ಯಾರ್ಥಿ ಎಂದೇ ಪರಿಗಣಿಸಲಾಗುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ.

English summary
Karnataka all set for 2nd PUC exam on June 18, 2020. 5,95,997 students will appearing for the exam in 1016 centres across the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X