ಮಂಗಳವಾರ ಕಾಲೇಜು ಓಪನ್; ಕೋವಿಡ್ ಪರೀಕ್ಷೆ, ಸ್ಯಾನಿಟೈಸ್

ಬೆಂಗಳೂರು, ನವೆಂಬರ್ 16 : ಕರ್ನಾಟಕದಲ್ಲಿ ಮಂಗಳವಾರದಿಂದ ಪದವಿ, ಇಂಜಿನಿಯರಿಂಗ್, ಡಿಪ್ಲೊಮಾ ಕಾಲೇಜುಗಳು ಆರಂಭವಾಗಲಿವೆ. ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ ಆಫ್ ಲೈನ್ ತರಗತಿಗಳು ನಡೆಯಲಿವೆ.

ಯುಜಿಸಿ ಮಾರ್ಗಸೂಚಿ ಅನ್ವಯ ಕಾಲೇಜುಗಳನ್ನು ಆರಂಭಿಸಲು ಸಿದ್ಧತೆಗಳು ಪೂರ್ಣಗೊಂಡಿವೆ. ಕೊಠಡಿಗಳನ್ನು ಸ್ಯಾನಿಟೈಸ್ ಮಾಡಲಾಗುತ್ತಿದ್ದು, ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದೆ.

ಕೋವಿಡ್ ವರದಿ ನಗೆಟಿವ್ ಬಂದ ವಿದ್ಯಾರ್ಥಿಗಳು ಮಾತ್ರ ಕಾಲೇಜಿಗೆ ಆಗಮಿಸಬಹುದಾಗಿದೆ. ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿಗಳಿಗೆ ಸಹ ಮೂರು ದಿನಗಳಿಂದ ಕೋವಿಡ್ ಪರೀಕ್ಷೆಗಳನ್ನು ಮಾಡಲಾಗಿದೆ.

Karnataka

ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಉಳಿದ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕವೇ ತರಗತಿಗಳನ್ನು ನಡೆಸಲಾಗುತ್ತದೆ. ಆಫ್ ಲೈನ್ ಕ್ಲಾಸ್‌ಗಳಿಗೆ ಬರುವ ವಿದ್ಯಾರ್ಥಿಗಳು ಪೋಷಕರ ಒಪ್ಪಿಗೆ ಪತ್ರವನ್ನು ಸಹ ತರಬೇಕಿದೆ.

ಕಾಲೇಜಿನ ಕಟ್ಟಡ, ಶೌಚಾಲಯ, ಎಲ್ಲಾ ಕೊಠಡಿ, ಪಿಠೋಪಕರಣಗಳನ್ನು ಸ್ಯಾನಿಟೈಸ್ ಮಾಡಲಾಗುತ್ತಿದೆ. ಕಾಲೇಜಿನ ಪ್ರಾಂಶುಪಾಲರು ತರಗತಿ ಆರಂಭಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದಾರೆ.

Karnataka Covid

ಮಾರ್ಚ್‌ನಲ್ಲಿ ಲಾಕ್ ಡೌನ್ ಘೋಷಣೆ ಮಾಡಿದ ಬಳಿಕ ಶಾಲಾ, ಕಾಲೇಜುಗಳನ್ನು ಬಂದ್ ಮಾಡಲಾಗಿದೆ. ಈಗ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ತರಗತಿಗಳನ್ನು ಆರಂಭಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+