ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಂಗಳವಾರ ಕಾಲೇಜು ಓಪನ್; ಕೋವಿಡ್ ಪರೀಕ್ಷೆ, ಸ್ಯಾನಿಟೈಸ್

|
Google Oneindia Kannada News

ಬೆಂಗಳೂರು, ನವೆಂಬರ್ 16 : ಕರ್ನಾಟಕದಲ್ಲಿ ಮಂಗಳವಾರದಿಂದ ಪದವಿ, ಇಂಜಿನಿಯರಿಂಗ್, ಡಿಪ್ಲೊಮಾ ಕಾಲೇಜುಗಳು ಆರಂಭವಾಗಲಿವೆ. ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ ಆಫ್ ಲೈನ್ ತರಗತಿಗಳು ನಡೆಯಲಿವೆ.

ಯುಜಿಸಿ ಮಾರ್ಗಸೂಚಿ ಅನ್ವಯ ಕಾಲೇಜುಗಳನ್ನು ಆರಂಭಿಸಲು ಸಿದ್ಧತೆಗಳು ಪೂರ್ಣಗೊಂಡಿವೆ. ಕೊಠಡಿಗಳನ್ನು ಸ್ಯಾನಿಟೈಸ್ ಮಾಡಲಾಗುತ್ತಿದ್ದು, ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದೆ.

ಹಾವೇರಿ: 450 ಕೋಟಿ ರೂ. ವೆಚ್ಚದ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಸಿಎಂ ಚಾಲನೆಹಾವೇರಿ: 450 ಕೋಟಿ ರೂ. ವೆಚ್ಚದ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಸಿಎಂ ಚಾಲನೆ

ಕೋವಿಡ್ ವರದಿ ನಗೆಟಿವ್ ಬಂದ ವಿದ್ಯಾರ್ಥಿಗಳು ಮಾತ್ರ ಕಾಲೇಜಿಗೆ ಆಗಮಿಸಬಹುದಾಗಿದೆ. ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿಗಳಿಗೆ ಸಹ ಮೂರು ದಿನಗಳಿಂದ ಕೋವಿಡ್ ಪರೀಕ್ಷೆಗಳನ್ನು ಮಾಡಲಾಗಿದೆ.

 ಚಿತ್ರದುರ್ಗಕ್ಕೆ ದೀಪಾವಳಿ ಗಿಫ್ಟ್: ಮೆಡಿಕಲ್ ಕಾಲೇಜು ಸ್ಥಾಪನೆಗೆ ಗ್ರೀನ್ ಸಿಗ್ನಲ್ ಚಿತ್ರದುರ್ಗಕ್ಕೆ ದೀಪಾವಳಿ ಗಿಫ್ಟ್: ಮೆಡಿಕಲ್ ಕಾಲೇಜು ಸ್ಥಾಪನೆಗೆ ಗ್ರೀನ್ ಸಿಗ್ನಲ್

Karnataka

ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಉಳಿದ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕವೇ ತರಗತಿಗಳನ್ನು ನಡೆಸಲಾಗುತ್ತದೆ. ಆಫ್ ಲೈನ್ ಕ್ಲಾಸ್‌ಗಳಿಗೆ ಬರುವ ವಿದ್ಯಾರ್ಥಿಗಳು ಪೋಷಕರ ಒಪ್ಪಿಗೆ ಪತ್ರವನ್ನು ಸಹ ತರಬೇಕಿದೆ.

ಕಾಲೇಜು ತರಗತಿ ಪ್ರಾರಂಭಿಸಲು ಎಸ್‌ಒಪಿ ಪ್ರಕಟಿಸಿದ ರಾಜ್ಯ ಸರ್ಕಾರಕಾಲೇಜು ತರಗತಿ ಪ್ರಾರಂಭಿಸಲು ಎಸ್‌ಒಪಿ ಪ್ರಕಟಿಸಿದ ರಾಜ್ಯ ಸರ್ಕಾರ

ಕಾಲೇಜಿನ ಕಟ್ಟಡ, ಶೌಚಾಲಯ, ಎಲ್ಲಾ ಕೊಠಡಿ, ಪಿಠೋಪಕರಣಗಳನ್ನು ಸ್ಯಾನಿಟೈಸ್ ಮಾಡಲಾಗುತ್ತಿದೆ. ಕಾಲೇಜಿನ ಪ್ರಾಂಶುಪಾಲರು ತರಗತಿ ಆರಂಭಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದಾರೆ.

Karnataka Covid

Recommended Video

ಈ ಲಸಿಕೆ Americans ರಿಗೆ ಉಪಯೋಗ ಆಗತ್ತಾ? | Oneindia Kannada

ಮಾರ್ಚ್‌ನಲ್ಲಿ ಲಾಕ್ ಡೌನ್ ಘೋಷಣೆ ಮಾಡಿದ ಬಳಿಕ ಶಾಲಾ, ಕಾಲೇಜುಗಳನ್ನು ಬಂದ್ ಮಾಡಲಾಗಿದೆ. ಈಗ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ತರಗತಿಗಳನ್ನು ಆರಂಭಿಸಲಾಗಿದೆ.

English summary
Karnataka all set to reopen engineering, degree and diploma colleges reopen from November 17. Offline class will be held for only final year students.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X