ಭಾನುವಾರ 25 ವಿಧಾನಪರಿಷತ್ ಸದಸ್ಯರ ಆಯ್ಕೆಗೆ ಚುನಾವಣೆ

ಬೆಂಗಳೂರು, ಡಿಸೆಂಬರ್ 26 : ಶಿಕ್ಷಕರ, ಪದವೀಧರರ ಕ್ಷೇತ್ರಗಳು ಹಾಗೂ ಸ್ಥಳೀಯ ಸಂಸ್ಥೆಗಳಿಂದ 25 ವಿಧಾನಪರಿಷತ್ ಸದಸ್ಯರ ಆಯ್ಕೆಗೆ ನಡೆಯುವ ಚುನಾವಣೆಗೆ ಚುನಾವಣಾ ಆಯೋಗ ಸಕಲ ರೀತಿಯಲ್ಲಿ ಸಜ್ಜಾಗಿದೆ. ಡಿ.27ರ ಭಾನುವಾರ ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯ ತನಕ ಚುನಾವಣೆ ನಡೆಯಲಿದೆ.

ರಾಜ್ಯ ಮುಖ್ಯಚುನಾವಣಾಧಿಕಾರಿ ಅನಿಲ್ ಕುಮಾರ್ ಝಾ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ಭಾನುವಾರ ಬೆಳಗ್ಗೆ 8 ಗಂಟೆಗೆ ಮತದಾನ ಆರಂಭವಾಗಲಿದ್ದು, 6,314 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 1 ಲಕ್ಷದ 7 ಸಾವಿರ ಮತದಾರರು ಮತದಾನ ಮಾಡಲಿದ್ದಾರೆ ಎಂದು ಹೇಳಿದ್ದಾರೆ. [ಪರಿಷತ್ ಚುನಾವಣೆ : ಕಣದಲ್ಲಿರುವ ಅಭ್ಯರ್ಥಿಗಳ ಪಟ್ಟಿ]

anil kumar jha

ಮತದಾರರು ಮತಪತ್ರದಲ್ಲಿಯೇ ಪ್ರಶಸ್ತ್ಯದ ಮತಗಳನ್ನು ಬರೆಯಬೇಕು. ಇಲ್ಲವಾದಲ್ಲಿ ಮತಗಳನ್ನು ಅಸಿಂಧು ಎಂದು ಪರಿಗಣಿಸಲಾಗುತ್ತದೆ. ಭಾನುವಾರ ಸಂಜೆ 4 ಗಂಟೆಯ ತನಕ ಮತದಾನ ಮಾಡಲು ಅವಕಾಶವಿದ್ದು, ಡಿಸೆಂಬರ್ 30ರಂದು ಮತಎಣಿಕೆ ನಡೆಯಲಿದೆ. [ಡಿಸೆಂಬರ್ 27ರ ವಿಧಾನಪರಿಷತ್ ಚುನಾವಣೆ ಬಗ್ಗೆ ತಿಳಿಯಿರಿ]

25 ಸ್ಥಾನಗಳಿಗೆ ಚುನಾವಣೆ : ಶಿಕ್ಷಕರ, ಪದವೀಧರರ ಕ್ಷೇತ್ರಗಳು ಹಾಗೂ ಸ್ಥಳೀಯ ಸಂಸ್ಥೆಗಳಿಂದ 25 ವಿಧಾನಪರಿಷತ್ ಸದಸ್ಯರ ಆಯ್ಕೆಗೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್‌ನ 12, ಬಿಜೆಪಿಯ 7, ಜೆಡಿಎಸ್‌ 5, ಒಬ್ಬರು ಪಕ್ಷೇತರ ಸದಸ್ಯರು 2016ರ ಜನವರಿ 5ರಂದು ನಿವೃತ್ತರಾಗಲಿದ್ದು, ಇವರಿಂದ ತೆರವಾಗುವ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ.

ಎಲ್ಲೆಲ್ಲಿ ಚುನಾವಣೆ? : ವಾಯುವ್ಯ ಶಿಕ್ಷಕರ ಕ್ಷೇತ್ರ, ಪಶ್ಚಿಮ ಶಿಕ್ಷಕರ ಕ್ಷೇತ್ರ, ದಕ್ಷಿಣ ಪದವೀಧರ ಕ್ಷೇತ್ರ, ವಾಯುವ್ಯ ಪದವೀಧರ ಕ್ಷೇತ್ರ. ಮೈಸೂರು, ಕೊಡಗು, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಧಾರವಾಡ, ಬೆಳಗಾವಿ, ವಿಜಯಪುರ, ಕಲಬುರಗಿ, ರಾಯಚೂರು, ಚಿತ್ರದುರ್ಗ ಸ್ಥಳೀಯ ಸಂಸ್ಥೆಗಳು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+