Karnataka Syllabus: ಶಿಕ್ಷಣ ನೀತಿ ಬಗ್ಗೆ ಸಿಎಂ ಬ್ರೇಕಿಂಗ್ ನ್ಯೂಸ್!

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಗ್ಯಾರಂಟಿ ಫೈಟ್ ರೀತಿಯೇ ಶಿಕ್ಷಣ ನೀತಿ ಬದಲಾವಣೆ ವಿಚಾರ ಕೂಡ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಅದ್ರಲ್ಲೂ ಬಿಜೆಪಿಗೆ ತಿರುಗೇಟು ಕೊಡುವ ರೀತಿ ಕಾಂಗ್ರೆಸ್ ಕೂಡ ವಾಗ್ದಾಳಿ ನಡೆಸಿತ್ತು. ಆದರೆ ಸ್ವಲ್ಪ ದಿನಗಳ ಕಾಲ ತಣ್ಣಗಾಗಿದ್ದ ಕರ್ನಾಟಕ ಶಿಕ್ಷಣ ನೀತಿ ವಿಚಾರ, ಇದೀಗ ಮತ್ತೆ ಬಿರುಗಾಳಿ ಎಬ್ಬಿಸಿದೆ. ಹಾಗಾದರೆ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಕೊಟ್ಟ ಬಿಗ್ ಅಪ್‌ಡೇಟ್ ಏನು?

ಅಂದಹಾಗೆ ಮೊದಲೇ ಹೇಳಿದಂತೆ ರಾಜ್ಯದಲ್ಲಿ ಕಾಂಗ್ರೆಸ್, ಬಿಜೆಪಿ ವಾರ್ ಬರೀ ಗ್ಯಾರಂಟಿಗಳಿಗೆ ಮೀಸಲಾಗಿ ಉಳಿದಿಲ್ಲ. ಇಬ್ಬರ ಕಿತ್ತಾಟ ಶಿಕ್ಷಣ ನೀತಿಗೆ ಬಂದು ತಲುಪಿ, ಒಬ್ಬರ ಮೇಲೊಬ್ಬರು ಆರೋಪ & ಪ್ರತ್ಯಾರೋಪ ಮಾಡುತ್ತಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಅಖಾಡ ಪ್ರವೇಶ ಮಾಡಿದ್ದು ರಾಜ್ಯದಲ್ಲಿ ಹೊಸ ಶಿಕ್ಷಣ ನೀತಿ ಕುರಿತು ಬಿಗ್ ಅಪ್‌ಡೇಟ್ ಕೊಟ್ಟಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಶೀಘ್ರದಲ್ಲಿಯೇ ಶಿಕ್ಷಣ ನೀತಿಯ ಬದಲಾವಣೆ ಬಗ್ಗೆ ಸುಳಿವು ನೀಡಿದ್ದಾರೆ.

All set to change the syllabus in Karnataka

ಶಿಕ್ಷಣ ನೀತಿ ಬಗ್ಗೆ ಸಿಎಂ ಹೇಳಿದ್ದೇನು?

ಅಷ್ಟಕ್ಕೂ ಕೇಂದ್ರ ಸರ್ಕಾರದ ನೂತನ ಶಿಕ್ಷಣ ನೀತಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸುತ್ತಿತ್ತು. ಅಲ್ಲದೆ ರಾಜ್ಯದಲ್ಲಿ ಕೆಲವು ತಿಂಗಳ ಹಿಂದೆ ನಡೆದ 2023ರ ವಿಧಾನಸಭೆ ಚುನಾವಣೆ ವೇಳೆ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಕರ್ನಾಟಕ ಶಿಕ್ಷಣ ನೀತಿ ಬದಲಾಗುವುದು ಪಕ್ಕಾ ಎಂದು ಆಶ್ವಾಸನೆ ನೀಡಲಾಗಿತ್ತು. ಅದರ ಭಾಗವಾಗಿ ಇದೇ ಶೈಕ್ಷಣಿಕ ವರ್ಷದಿಂದ ಶಿಕ್ಷಣ ನೀತಿಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸಿತ್ತು. ನಂತರ ಆ ಕುರಿತು ಮಾತುಕತೆ ನಿಂತಿತ್ತು. ಇಷ್ಟೆಲ್ಲದರ ಮಧ್ಯೆ ಈಗ ನೂತನ ಶಿಕ್ಷಣ ನೀತಿಗೆ ಹೊಸ ಸಮಿತಿಯ ರಚನೆ ಮಾಡಿದೆ ರಾಜ್ಯ ಸರ್ಕಾರ.

ದೇಶಕ್ಕೆ ಮಾದರಿ ಶಿಕ್ಷಣ ನೀತಿಯಾಗಿ...

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, 'ಕರ್ನಾಟಕ ರಾಜ್ಯ ಶಿಕ್ಷಣ ನೀತಿಯ ಕರಡು ಸಿದ್ಧಪಡಿಸಲು ಪ್ರೊ|| ಸುಖ್‌ದೇವ್ ಥೋರಟ್ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಶಿಕ್ಷಣ ನೀತಿ ಸಮಿತಿಯನ್ನ ರಚಿಸಿ ಆದೇಶಿಸಲಾಗಿದೆ. ಈ ಸಮಿತಿಯು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕತೆ, ವೈಚಾರಿಕತೆ ಬೆಳೆಸುವ ಮತ್ತು ಅವರ ಮನೋ ವಿಕಾಸಕ್ಕೆ ಅಗತ್ಯವಾದ ಶಿಕ್ಷಣ ನೀಡಲು ಸೂಕ್ತ ಶಿಫಾರಸು ನೀಡಲಿದೆ ಎಂಬ ಭರವಸೆಯಿದೆ. ಕರ್ನಾಟಕ ರಾಜ್ಯ ಶಿಕ್ಷಣ ನೀತಿ ದೇಶಕ್ಕೆ ಮಾದರಿ ಶಿಕ್ಷಣ ನೀತಿಯಾಗಿ ಹೊರಹೊಮ್ಮಲಿ ಎಂದು ಹಾರೈಸುತ್ತೇನೆ.' ಅಂತಾ ಮಾಹಿತಿ ನೀಡಿದ್ದಾರೆ.

ಕೇಂದ್ರದ ವರ್ತನೆ ಖಂಡಿಸಿದ್ದ ಸಿಎಂ

ಆಗಸ್ಟ್‌ನಲ್ಲಿ ಶಿಕ್ಷಣ ನೀತಿ ಬಗ್ಗೆ ನಡೆಸಿದ ಸಭೆಯಲ್ಲಿ ಸಿಎಂ ಬೇಸರ ಹೊರಹಾಕಿದ್ದರು. ಶಿಕ್ಷಣಕ್ಕೆ ಕೇಂದ್ರ ಸರ್ಕಾರವು ನೀತಿ ರೂಪಿಸಲು ಸಾಧ್ಯವಿಲ್ಲ. ಏಕೆಂದರೆ ಅದು ರಾಜ್ಯದ ವಿಷಯ. ರಾಜ್ಯ ಸರ್ಕಾರಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ರಾಷ್ಟ್ರೀಯ ಶಿಕ್ಷಣ ನೀತಿ ರೂಪಿಸಲಾಗಿದೆ. ಶಿಕ್ಷಣ ನೀತಿಯನ್ನು ಕೇಂದ್ರ ಸರ್ಕಾರ ರಾಜ್ಯಗಳ ಮೇಲೆ ಹೇರಿದೆ ಎಂದು ಆರೋಪಿಸಿದ್ದರು. ಹಾಗೇ ಈ ನಡುವೆ ರಾಜ್ಯದಲ್ಲಿ ಶಿಕ್ಷಣ ನೀತಿ ಬದಲಾವಣೆ ಬಗ್ಗೆ ಚರ್ಚೆ ಕೂಡ ಜೋರಾಗಿತ್ತು. ಇದೀಗ ಅದಕ್ಕೆಲ್ಲಾ ಉತ್ತರ ಸಿಕ್ಕಿದೆ.

All set to change the syllabus in Karnataka

ಒಟ್ನಲ್ಲಿ ಕರ್ನಾಟಕದಲ್ಲಿ ಶಿಕ್ಷಣ ನೀತಿ ಬದಲಾಗುವುದು ಬಹುತೇಕ ಪಕ್ಕಾ ಆಗಿದೆ. ಇದೀಗ ಹೊಸ ಸಮಿತಿ ರಚನೆ ಕೂಡ ಮಾಡಲಾಗಿದ್ದು, ಸಮಿತಿ ನೀಡುವ ವರದಿ ಆಧಾರದಲ್ಲೇ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಏನಾಗುತ್ತೆ ಅನ್ನೋದನ್ನು ಕಾದು ನೋಡಬೇಕಿದೆ. ಮತ್ತೊಂದು ಕಡೆ ಈ ಬಗ್ಗೆ ಕರ್ನಾಟಕ ಬಿಜೆಪಿ ನಾಯಕರು ತೀವ್ರ ವಾಗ್ದಾಳಿ ನಡೆಸುವ ಸಾಧ್ಯತೆ ಕೂಡ ಇದೆ. ಆದರೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಶಿಕ್ಷಣ ನೀತಿ ಬದಲಾವಣೆ ಮಾಡಲು ದೃಢ ಹೆಜ್ಜೆ ಮುಂದಿಟ್ಟಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+