ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

10 ದಿನದಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳ ಎಲ್ಲಾ ವಿದ್ಯಾರ್ಥಿಗಳಿಗೆ ಲಸಿಕೆ; ಡಿಸಿಎಂ

|
Google Oneindia Kannada News

ಬೆಂಗಳೂರು, ಜೂನ್ 30: ರಾಜ್ಯದ ಉನ್ನತ ಶಿಕ್ಷಣ ಸಂಸ್ಥೆಗಳ ಎಲ್ಲಾ ವಿದ್ಯಾರ್ಥಿಗಳಿಗೆ ಇನ್ನು ಹತ್ತು ದಿನಗಳ ಒಳಗೆ ಕೊರೊನಾ ಲಸಿಕೆ ನೀಡಲಾಗುವುದು ಎಂದು ಡಿಸಿಎಂ ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ.

ಮಂಗಳವಾರ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಿಣ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, "ಉನ್ನತ ಶಿಕ್ಷಣ ಸಂಸ್ಥೆಗಳ ಎಲ್ಲಾ ವಿದ್ಯಾರ್ಥಿಗಳಿಗೆ ಇನ್ನು ಹತ್ತು ದಿನಗಳ ಒಳಗೆ ಲಸಿಕೆ ನೀಡಲಾಗುವುದು. ಪಾಲಿಟೆಕ್ನಿಕ್, ಐಟಿಐ, ಡಿಗ್ರಿ, ಇಂಜಿನಿಯರಿಂಗ್, ವೈದ್ಯಕೀಯ, ಪ್ಯಾರಾಮೆಡಿಕಲ್, ಡಿಪ್ಲೊಮಾ, ಮೆಡಿಕಲ್ ಡಿಪ್ಲೊಮಾ, ಮುಖ್ಯಮಂತ್ರಿ ಕೌಶಲಾಭಿವೃದ್ಧಿ ಯೋಜನೆಯಡಿ ನೋಂದಣಿಯಾಗಿರುವ ವಿದ್ಯಾರ್ಥಿಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಇದು ಒಳಗೊಂಡಿರುತ್ತದೆ" ಎಂದು ತಿಳಿಸಿದರು.

All Students Of Higher Education Institutes Will Get Corona Vaccine Within 10 Days Assures DCM

"ಜೂನ್ 28ರಿಂದ ವಿದ್ಯಾರ್ಥಿಗಳಿಗೆ ಕೊರೊನಾ ಲಸಿಕೆ ನೀಡುವ ಕಾರ್ಯ ಆರಂಭವಾಗಿದೆ. ಮೊದಲ ದಿನವೇ 94,000 ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗಿದೆ. ಸಂಬಂಧಪಟ್ಟ ಆಡಳಿತ ಮಂಡಳಿಗಳಿಗೆ ಎಲ್ಲಾ ವಿದ್ಯಾರ್ಥಿಗಳಿಗೆ ಇನ್ನು ಹತ್ತು ದಿನದ ಒಳಗೆ ಲಸಿಕೆ ನೀಡುವಂತೆ ಸೂಚಿಸಲಾಗಿದೆ" ಎಂದು ತಿಳಿಸಿದರು.

ಕರ್ನಾಟಕ; ಗ್ರಾಮೀಣ ಭಾಗದಲ್ಲಿ ಹೋಂ ಐಸೋಲೇಷನ್‌ ಇಲ್ಲ
"ಜೂನ್ ತಿಂಗಳಿನಲ್ಲಿ ರಾಜ್ಯಕ್ಕೆ 60 ಲಕ್ಷ ಕೊರೊನಾ ಲಸಿಕೆಗಳನ್ನು ಪೂರೈಸಲಾಗಿದೆ. ಮುಂದಿನ ದಿನಗಳಲ್ಲಿ ಈ ಸಂಖ್ಯೆ ಹೆಚ್ಚಲಿದೆ. ಸದ್ಯಕ್ಕೆ ಕೊರೊನಾ ಲಸಿಕೆ ವಿತರಣೆ, ಕೊರೊನಾ ನಿರ್ವಹಣೆ ವಿಚಾರದಲ್ಲಿ ರಾಜ್ಯ ದೇಶದಲ್ಲಿ ಮೂರನೇ ಸ್ಥಾನದಲ್ಲಿದೆ" ಎಂದು ವಿವರಿಸಿದರು.

Recommended Video

ದಶಮುಖ ರಾವಣನ ಗುಣಗಳನ್ನು ಮೆಚ್ಚಿ ಶ್ರೀರಾಮ ಕೂಡ ಹೊಗಳಿದ್ದ!!| Interesting Facts About Ravan |Oneindia Kannada

ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ನಿರ್ವಹಣೆಗೆ ಸಿದ್ಧತೆಗಳನ್ನು ನಡೆಸಲಾಗುತ್ತಿದ್ದು, ಆಗಸ್ಟ್‌ ತಿಂಗಳ ಕೊನೆಯ ವೇಳೆಗೆ ಆಸ್ಪತ್ರೆಗಳಲ್ಲಿ ಆಮ್ಲಜನಕ ಸಂಗ್ರಹಣೆ ಹೆಚ್ಚಿಸಲು ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.

English summary
All students in higher education institutes will get COVID vaccine within 10 days assures: Karnataka Deputy CM Ashwath Narayan
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X