ವಿಧಾನ ಪರಿಷತ್‌ಗೆ ಎಲ್ಲ ಅಭ್ಯರ್ಥಿಗಳು ಅವಿರೋಧ ಆಯ್ಕೆ
ಬೆಂಗಳೂರು, ಜೂ. 22: ವಿಧಾನಸಭೆಯಿಂದ ವಿಧಾನ ಪರಿಷತ್‌ನ 7 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದೆ. ವಿಧಾನ ಪರಿಷತ್‌ನ 7 ಸ್ಥಾನಗಳಿಗೆ ಇದೇ ಜೂನ್ 29 ರಂದು ಚುನಾವಣೆ ನಡೆಯಬೇಕಾಗಿತ್ತು. ಆದರೆ 7 ಸ್ಥಾನಗಳಿಗೆ 7 ಅಭ್ಯರ್ಥಿಗಳು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಎಲ್ಲರೂ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯೂ ಆಗಿದ್ದ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ತಿಳಿಸಿದ್ದಾರೆ.
Recommended Video
ಬಿಜೆಪಿಯಿಂದ 4, ಕಾಂಗ್ರೆಸ್ ಪಕ್ಷದಿಂದ 2 ಹಾಗೂ ಜೆಡಿಎಸ್ ಪಕ್ಷದಿಂದ ಒಬ್ಬರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಹೀಗಾಗಿ ಎಲ್ಲ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಅಧಿಕೃತ ಘೋಷಣೆಯಾಗಿದೆ.

ಚುನಾವಣಾಧಿಕಾರಿಯಿಂದ ಅಧಿಕೃತ ಘೋಷಣೆ: ಕರ್ನಾಟಕ ವಿಧಾನಸಭೆಯ ಸದಸ್ಯರಿಂದ ವಿಧಾನ ಪರಿಷತ್ತಿಗೆ 7 ಸದಸ್ಯರನ್ನು ಆಯ್ಕೆ ಮಾಡಲು ದ್ವೈವಾರ್ಷಿಕ ಚುನಾವಣೆಯನ್ನು ದಿನಾಂಕ 29ನೇ ಜೂನ್, 2020 ರಂದು ನಿಗದಿ ಪಡಿಸಲಾಗಿತ್ತು. ದಿನಾಂಕ: 22.06.2020 ರಂದು ನಾಮಪತ್ರ ಹಿಂತೆಗೆದುಕೊಳ್ಳಲು ಅಂತಿಮ ದಿನವಾಗಿದ್ದು ಭಾರತೀಯ ಜನತಾ ಪಾರ್ಟಿಯ ಎನ್. ನಾಗರಾಜು (ಎಂಟಿಬಿ), ಪ್ರತಾಪ್ ಸಿಂಹ ನಾಯಕ್, ಆರ್. ಶಂಕರ್, ಸುನಿಳ್ ವಲ್ಯಾಪುರೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ನಸೀರ್ ಅಹಮ್ಮದ್, ಬಿ.ಕೆ. ಹರಿಪ್ರಸಾದ್ ಹಾಗೂ ಜನತಾದಳ(ಜಾ) ಗೋವಿಂದರಾಜು ಅವರು ಮಾತ್ರ ಅಂತಿಮವಾಗಿ ಚುನಾವಣಾ ಕಣದಲ್ಲಿ ಉಳಿದಿದ್ದು ಸದರಿ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿರುತ್ತಾರೆಂದು ಘೋಷಿಸಿರುತ್ತೇನೆ ಎಂದು ಚುನಾವಣಾಧಿಕಾರಿಗೂ ಆಗಿದ್ದ ವಿಧಾನಸಭಾ ಕಾರ್ಯದರ್ಶಿ ವಿಶಾಲಾಕ್ಷಿ ಅವರು ಘೋಷಣೆ ಮಾಡಿದ್ದಾರೆ.












Click it and Unblock the Notifications