ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡಲು ಎಲ್ಲಾ ರೀತಿಯ ನೆರವು- ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು, ನವೆಂಬರ್‌ 21: ಕರ್ನಾಟಕ ದೇಶದಲ್ಲೇ ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಜ್ಯವಾಗಿದ್ದು, ಇಲ್ಲಿನ ಉದ್ಯಮ ಸ್ನೇಹಿ ವಾತಾವರಣ, ಪ್ರತಿಭೆಗಳನ್ನು ಬಳಸಿಕೊಂಡು ಬಂಡವಾಳ ಹೂಡಿಕೆ ಮಾಡಲು ಎಲ್ಲಾ ರೀತಿಯ ನೆರವು ಒದಗಿಸಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಭಾರತದಲ್ಲಿನ ಬ್ರಿಟಿಷ್‌ ಹೈಕಮಿಷನರ್‌ ಲಿಂಡೆ ಕ್ಯಾಮರೂನ್‌ ಅವರ ಭೇಟಿ ಹಾಗೂ ವಿವಿಧ ವಿಷಯಗಳ ಕುರಿತು ಸಮಾಲೋಚನೆ ನಡೆಸಿದ ಬಳಿಕ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಯಮಗಳಿಗೆ ಬೆಂಗಳೂರಿನಲ್ಲಿ ವಿಪುಲ ಅವಕಾಶಗಳಿದ್ದು, ಮುಂದಿನ ಫೆಬ್ರವರಿ ತಿಂಗಳಲ್ಲಿ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶ ಇಲ್ಲಿ ನಡೆಯಲಿದೆ. ಸರ್ಕಾರದ ಮಹತ್ವಾಕಾಂಕ್ಷೆಯ ಕ್ವಿನ್‌ ಸಿಟಿ ಯೋಜನೆಯಡಿ ಸಹ ಅವಕಾಶಗಳನ್ನು ಬಳಸಿಕೊಳ್ಳಬಹುದಾಗಿದೆ ಎಂದರು.

All Types Of Assistance For Investment In Karnataka Says CM Siddaramaiah

ನಮ್ಮ ರಾಜ್ಯದ ಕೈಗಾರಿಕಾ ನೀತಿಯು ಅತ್ಯಂತ ಪ್ರಗತಿಶೀಲವಾಗಿದೆ. ರಾಜ್ಯದ ಬಹುತೇಕ ನಗರಗಳಿಗೆ ಉತ್ತಮ ವಿಮಾನ ಯಾನ ಸಂಪರ್ಕವಿದ್ದು, ಇಂತಹ ಎರಡನೇ ಹಂತದ ನಗರಗಳಲ್ಲಿ ಬಂಡವಾಳ ತೊಡಗಿಸಲು ಸರ್ಕಾರ ಎಲ್ಲಾ ನೆರವು ಒದಗಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಬಳಿಕ ಹೈಕಮಿಷನರ್‌ ಲಿಂಡೆ ಕ್ಯಾಮರೂನ್‌ ಅವರು ಮಾತನಾಡಿ, ಬೆಂಗಳೂರಿನಲ್ಲಿ ಹಲವು ಬ್ರಿಟಿಷ್‌ ಕಂಪೆನಿಗಳು ಕಾರ್ಯನಿರ್ವಹಿಸುತ್ತಿವೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ಬೆಂಗಳೂರು ತಂತ್ರಜ್ಞಾನ ಶೃಂಗದಲ್ಲಿ 15 ಬ್ರಿಟಿಷ್‌ ಕಂಪೆನಿಗಳು ಭಾಗವಹಿಸುತ್ತಿವೆ. ಫೆಬ್ರವರಿಯಲ್ಲಿ ನಡೆಯಲಿರುವ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶ ಮತ್ತು ಏರೋ ಇಂಡಿಯಾ ಕಾರ್ಯಕ್ರಮದಲ್ಲಿ ಬ್ರಿಟನ್‌ನ ಹಲವು ನಿಯೋಗಗಳು ಭಾಗವಹಿಸಲಿವೆ ಎಂದು ತಿಳಿಸಿದರು.

ಅಲ್ಲದೇ ಪ್ರಸ್ತುತ ಕರ್ನಾಟಕದ ಸರ್ಕಾರಿ ಕಾಲೇಜುಗಳ 30 ವಿದ್ಯಾರ್ಥಿಗಳು 15 ದಿನಗಳ ಅಕಾಡೆಮಿಕ್‌ ಅಧ್ಯಯನದ ಮೇಲೆ ಲಂಡನ್‌ನಲ್ಲಿ ತರಬೇತಿ ಪಡೆಯುತ್ತಿದ್ದಾರೆ ಎನ್ನುವ ಮಾಹಿತಿಯನ್ನು ಕೂಡ ಹಂಚಿಕೊಂಡಿದ್ದಾರೆ.

ಶೈಕ್ಷಣಿಕ ಕ್ಷೇತ್ರದಲ್ಲಿ ಹೆಣ್ಣು ಮಕ್ಕಳಿಗೆ ಬ್ರಿಟಿಷ್‌ ಹೈಕಮಿಷನ್ ಮತ್ತು ಕರ್ನಾಟಕ ಜಂಟಿ ಸಹಭಾಗಿತ್ವದಲ್ಲಿ ಸ್ಕಾಲರ್‌ಶಿಪ್‌ ಒದಗಿಸುವ ಪರಸ್ಪರ ಒಡಂಬಡಿಕೆ ರೂಪಿಸಲಾಗಿದೆ. ಇದರನ್ವಯ ಕರ್ನಾಟಕದಲ್ಲಿ ಅದರಲ್ಲೂ ಮುಖ್ಯವಾಗಿ ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ ಪದವಿ ಪಡೆದ ಹೆಣ್ಣು ಮಕ್ಕಳಿಗೆ ಯುಕೆಯಲ್ಲಿ ಸ್ನಾತಕೋತ್ತರ ಪದವಿ ಪಡೆಯಲು ಸ್ಕಾಲರ್‌ಶಿಪ್‌ ಒದಗಿಸಲಾಗುವುದು. ಮೂರು ವರ್ಷಗಳ ಒಡಂಬಡಿಕೆ ಇದಾಗಿದ್ದು, ಈ ವರ್ಷ 15 ಮಂದಿಗೆ ಸ್ಕಾಲರ್‌ಶಿಪ್‌ ಒದಗಿಸಲಾಗುವುದು ಎಂದು ವಿವರಿಸಿದರು.

ಇನ್ನು ರಾಜ್ಯ ಸರ್ಕಾರ ಅರಮನೆ ಮೈದಾನದಲ್ಲಿ ಮೂರು ದಿನಗಳ ಬೆಂಗಳೂರು ತಂತ್ರಜ್ಞಾನ ಶೃಂಗ-24ವನ್ನು (27ನೇ ಆವೃತ್ತಿ)ಯನ್ನು ಹಮ್ಮಿಕೊಂಡಿದೆ. ಈ ಕಾರ್ಯಕ್ರಮದಲ್ಲಿದೇಶದಲ್ಲಿ ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ರೂಪಿಸಲಾಗಿರುವ 'ಜಿಸಿಸಿ ಕಾರ್ಯನೀತಿ'ಯನ್ನು ಸಿಎಂ ಸಿದ್ದರಾಮಯ್ಯ ಅನಾವರಣಗೊಳಿಸಿದ್ದರು. ಅಲ್ಲದೇ ಮುಂದಿನ ಐದು ವರ್ಷಗಳಲ್ಲಿ ರಾಜ್ಯದಲ್ಲಿ ಈಗ ಇರುವ 875 ಜಿಸಿಸಿ ಘಟಕಗಳ ಜೊತೆಗೆ ಇನ್ನೂ 500 ಜಿಸಿಸಿ ಘಟಕಗಳ ಸ್ಥಾಪನೆ, 3.5 ಲಕ್ಷ ಉದ್ಯೋಗಗಳ ಸೃಷ್ಟಿ ಮಾಡಲಾಗುತ್ತದೆ ಎಂದು ತಿಳಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+