ಕಾಂಗ್ರೆಸ್‌ನ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆ ಬಗ್ಗೆ ನಿಮಗೆ ತಿಳಿದಿದೇಯೇ?

ಬೆಂಗಳೂರು, ಮೇ. 18: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್‌ಗೆ ಅವರು ಘೋಷಿಸಿದ್ದ ಐದು ಗ್ಯಾರೆಮಟಿಗಳು ಸಾಥ್ ನೀಡಿವೆ ಎನ್ನಲಾಗಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಈ ಐರುವ ಭರವಸೆಗಳು ಜನರಿಗೆ ಕಾಂಗ್ರೆಸ್ ಮೇಲೆ ನಂಬಿಕೆ ಹುಟ್ಟಿಸಿ ಜನರು ಪಕ್ಷಕ್ಕೆ ಮತ ಚಲಾಯಿಸಿದ್ದಾರೆ ಎಂದಿದ್ದಾರೆ.

ಕಾಂಗ್ರೆಸ್ ಪಕ್ಷವು ಘೋಷಿಸಿದ ಐದು 'ಗ್ಯಾರೆಂಟಿ'ಗಳು ಪಕ್ಷದ ಪರವಾಗಿ ಕೆಲಸ ಮಾಡಿವೆ ಮತ್ತುಇತ್ತೀಚೆಗೆ ಮುಗಿದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 135 ಸ್ಥಾನಗಳನ್ನು ಪಡೆಯಲು ಸಹಾಯ ಮಾಡಿದೆ. ಹೀಗಾಗಿಯೇ ಮೊದಲ ಸಂಪುಟ ಸಭೆಯಲ್ಲಿಯೇ ಎಲ್ಲ ಐದು ಗ್ಯಾರೆಂಟಿಗಳನ್ನು ಜಾರಿಗೊಳಿಸಲಾಗುವುದು ಎಂದು ಕಾಂಗ್ರೆಸ್ ನಾಯಕರು ಭರವಸೆ ನೀಡಿದ್ದಾರೆ.

All you need to know about Congress’ Gruha Jyothi Yojane

ಈ ವರ್ಷದ ಜನವರಿಯಲ್ಲಿ ಪಕ್ಷವು ಘೋಷಿಸಿದ ಮೊದಲ ಭರವಸೆಗಳಲ್ಲಿ ಒಂದಾದ 'ಗೃಹ ಜ್ಯೋತಿ' ಯೋಜನೆಯ ಅಡಿಯಲ್ಲಿ ಪ್ರತಿ ಮನೆಗೆ ತಿಂಗಳಿಗೆ 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತದೆ. ಈಗಾಗಲೇ ಜನ ಕಾಂಗ್ರೆಸ್ ಜಯಗಳಿಸಿದ್ದು ವಿದ್ಯುತ್ ಬಿಲ್ ಕಟ್ಟುವುದಿಲ್ಲ ಎಂದು ಹಠ ಹಿಡಿದಿದ್ದಾರೆ. ಆಗಾದರೆ, ಈ ಗೃಹಜ್ಯೋತಿ ಯೋಜನೆ ಬಗ್ಗೆ ನೀವು ತಿಳಿದುಕೊಳ್ಳಬೇಕಾದದ್ದು ಇಲ್ಲಿದೆ.

ಉಚಿತ ವಿದ್ಯುತ್ ಯೋಜನೆ ಘೋಷಣೆ

ಜನವರಿಯಲ್ಲಿ ಕಾಂಗ್ರೆಸ್ ಮೊದಲ ಸುತ್ತಿನ 'ಪ್ರಜಾಧ್ವನಿ ಯಾತ್ರೆ' ಆರಂಭಿಸಿದಾಗ, ಪಕ್ಷವು ಪ್ರತಿ ಮನೆಗೆ ತಿಂಗಳಿಗೆ 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್‌ ನೀಡುವ ಮೊದಲ 'ಗ್ಯಾರೆಂಟಿ' ಘೋಷಿಸಿತು. 'ನಮ್ಮ ಮೊದಲ ಗ್ಯಾರೆಂಟಿಯಾಗಿ ನಾವು ಗೃಹ ಜ್ಯೋತಿ ಯೋಜನೆಯಿಂದ ಪ್ರತಿ ಮನೆಯನ್ನು ಬೆಳಕಿನಿಂದ ಬೆಳಗಿಸಲು ಬಯಸುತ್ತೇವೆ' ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಬೆಳಗಾವಿಯಲ್ಲಿ ಹೇಳಿದ್ದರು.

"ಬೆಲೆಯೇರಿಕೆಯಿಂದ ತತ್ತರಿಸಿರುವ ರಾಜ್ಯದ ಜನರಿಗೆ ನೆಮ್ಮದಿ ನೀಡುವ ಯೋಜನೆಯನ್ನು ನಾವು ಘೋಷಿಸುತ್ತಿದ್ದೇವೆ. ರಾಜ್ಯದ ಪ್ರತಿ ಮನೆಗೂ 200 ಯುನಿಟ್ ಉಚಿತ ವಿದ್ಯುತ್ ಒದಗಿಸುವ 'ಗೃಹಜ್ಯೋತಿ' ಯೋಜನೆಯನ್ನು ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಲಿದೆ. ನಿಮ್ಮ ವಿದ್ಯುತ್ ಬಿಲ್ ಇನ್ಮುಂದೆ ಕಾಂಗ್ರೆಸ್ ಜವಾಬ್ದಾರಿ" ಎಂದು ಕಾಂಗ್ರೆಸ್ ತಿಳಿಸಿತ್ತು.

All you need to know about Congress’ Gruha Jyothi Yojane

''ಪ್ರತಿ ತಿಂಗಳಿಗೆ 22 ಯೂನಿಟ್‌ಗಳ ಉಚಿತ ವಿದ್ಯುತ್ ದಲಿತರು, ಒಬಿಸಿಗಳು ಮತ್ತು ಅಲ್ಪಸಂಖ್ಯಾತರಿಗೆ ಸೀಮಿತವಾಗಿರದೆ ಎಲ್ಲರಿಗೂ ಯಾವುದೇ ಅಡೆತಡೆಯಿಲ್ಲಎ ನೀಡಲಾಗುತ್ತದೆ. ಯಾವುದೇ ಬೆಲೆ ತೆತ್ತಾದರೂ ನಾವು ನೀಡಿದ ಗ್ಯಾರೆಂಟಿಗಳನ್ನು ಈಡೇರಿಸುತ್ತೇವೆ" ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹೇಳಿದ್ದರು.

ಆದರೆ 200ಕ್ಕಿಂತ ಕಡಿಮೆ ಬಳಸಿದವರಿಗೆ ಮಾತ್ರ ಉಚಿತ ಭರವಸೆ ಅನ್ವಯವಾಗುತ್ತದೆಯೇ ಎಂಬುದಕ್ಕೆ ಇನ್ನು ಸ್ಪಷ್ಟ ಉತ್ತರ ದೊರತಿಲ್ಲ. ಪಕ್ಷ ಈ ಬಗ್ಗೆ ಇನ್ನೂ ಹಲವು ಮಾಹಿತಿಗಳನ್ನು ಜಾರಿಗೊಳಿಸಬೇಕಾಗಿದೆ. ಮೊದಲ ಸಂಪುಟ ಸಭೆಯ ಬಳಿಕ ಈ ಎಲ್ಲಾ ಗೊಂದಲಗಳಿಗೂ ತೆರೆ ಬೀಳುವ ಸಾಧ್ಯತೆಯಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿಯೂ ಅರವಿಂದ್ ಕೇಜ್ರಿವಾಲ್ ಸರ್ಕಾರವು ಪ್ರತಿ ಮನೆಗೆ 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ಮತ್ತು 201 ರಿಂದ 400 ಯೂನಿಟ್‌ಗಳಿಗೆ 50 ಪ್ರತಿಶತ ಸಬ್ಸಿಡಿ ನೀಡಿದೆ. ಆದರೆ ಕಳೆದ ವರ್ಷ ಅರ್ಜಿ ಸಲ್ಲಿಸುವವರಿಗೆ ಮಾತ್ರ ಸಬ್ಸಿಡಿ ಸಿಗುತ್ತದೆ ಎಂದು ಘೋಷಿಸಿದ್ದಾರೆ. ವರದಿಗಳ ಪ್ರಕಾರ, ದೆಹಲಿ ಸರ್ಕಾರವು ಈ ವರ್ಷ ವಿದ್ಯುತ್ ಸಬ್ಸಿಡಿಗಾಗಿ 3,250 ಕೋಟಿಗಳನ್ನು ಮೀಸಲಿಟ್ಟಿದೆ. 58 ಲಕ್ಷ ಗ್ರಾಹಕರಲ್ಲಿ 46 ಲಕ್ಷ ಕುಟುಂಬಗಳು ಸಬ್ಸಿಡಿಗಾಗಿ ಅರ್ಜಿ ಹಾಕಿವೆ.

ಕರ್ನಾಟಕದಲ್ಲಿ, ಬೆಸ್ಕಾಂ, ಮೆಸ್ಕಾಂ, ಹೆಸ್ಕಾಂ, ಗೆಸ್ಕಾಂ ಮತ್ತು ಸೆಸ್ಕಾಂ ಎಂಬ ಐದು ವಿದ್ಯುತ್ ಸರಬರಾಜು ಕಂಪನಿಗಳಿವೆ (ESCOM). ಇವು ವಿವಿಧ ಪ್ರದೇಶಗಳಿಗೆ ವಿದ್ಯುತ್ ಒದಗಿಸುತ್ತವೆ.ವಿದ್ಯುತ್ ದರವನ್ನು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ) ನಿಯಂತ್ರಿಸುತ್ತದೆ. ಪ್ರದೇಶದಿಂದ ಪ್ರದೇಶಕ್ಕೆ ದರಗಳು ಬದಲಾಗುತ್ತವೆ. ಬೆಂಗಳೂರಿನಲ್ಲಿ, ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಶುಲ್ಕಗಳು ಬಳಕೆಗೆ ಅನುಗುಣವಾಗಿ ಬದಲಾಗುತ್ತವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+