ಲಂಚದ ಆರೋಪ: ರಾಜ್ಯದ ಆರ್‌ಟಿಓ ಚೆಕ್ ಪೋಸ್ಟ್‌ಗಳ ಮೇಲೆ ಲೋಕಾಯುಕ್ತ ದಾಳಿ!
ಕೋಲಾರ ಅಕ್ಟೋಬರ್ 8: ಲಂಚದ ಆರೋಪದ ಮೇಲೆ ಕರ್ನಾಟಕದ ಹಲವು ಆರ್‌ಟಿಓ ಚೆಕ್ ಪೋಸ್ಟ್‌ಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೀದರ್, ಕೋಲಾರ ಜಿಲ್ಲೆಗಳಲ್ಲಿ ಆರ್‌ಟಿಓ ಚೆಕ್ ಪೋಸ್ಟ್‌ಗಳ ವಿರುದ್ಧ ಲಂಚದ ಆರೋಪ ಕೇಳಿ ಬಂದ ಬೆನ್ನಲ್ಲೆ ಈ ದಾಳಿ ನಡೆದಿದೆ. ಇಂದು ಬೆಳಗಿನ ಜಾವ ಲೋಕಾಯುಕ್ತ ಅಧಿಕಾರಿಗಳು ಲಂಚಕೋರರ ಮನೆ ಬಾಗಿಲು ತಟ್ಟಿದ್ದಾರೆ.
ಕೆಲ ದಿನಗಳ ಹಿಂದೆ ಆರ್‌ಟಿಓ ಚೆಕ್ ಪೋಸ್ಟ್‌ಗಳ ಸಿಬ್ಬಂದಿಗಳ ವಿರುದ್ಧ ಲಂಚದ ದೂರುಗಳು ಕೇಳಿ ಬಂದಿದ್ದವು. ಹೀಗಾಗಿ ಕೋಲಾರ ಲೋಕಾಯುಕ್ತ ಎಸ್ಪಿ ಧನಂಜಯ ನೇತೃತ್ವದ ತಂಡ ದಾಳಿ ಮಾಡಿ ಪರಿಶೀಲನೆ ನಡೆಸಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ತಾಡಿಗೋಳ ಕ್ರಾಸ್ ಬಳಿ ಇರುವ ಆರ್‌ಟಿಓ ಚೆಕ್ ಪೋಸ್ಟ್ ಸೇರಿದಂತೆ ಮುಳಬಾಗಿಲು ತಾಲೂಕು ನಂಗಲಿ ಆರ್‌ಟಿಓ ಚೆಕ್ ಪೋಸ್ಟ್ ನಲ್ಲಿ ಪರಿಶೀಲನೆ ಮಾಡಲಾಗುತ್ತಿದೆ.

ದಾಳಿ ವೇಳೆ 20,000ಕ್ಕೂ ಹೆಚ್ಚು ಹಣ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಲೋಕಾಯುಕ್ತ ಅಧಿಕಾರಿಗಳು ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ಬಳಿಕ ಇಂದು ದಾಳಿ (ಅಕ್ಟೋಬರ್ 8) ಮಾಡಿ ಪರಿಶೀಲಿಸುತ್ತಿದ್ದಾರೆ.
ಇನ್ನೂ ಲಂಚ ಪಡೆದಿರುವ ಆರೋಪದ ಹಿನ್ನಲೆಯಲ್ಲಿ ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದಲ್ಲಿರುವ ಆರ್‌ಟಿಓ ಚೆಕ್ ಪೋಸ್ಟ್‌ನ ಸಿಬ್ಬಂದಿಗಳ ವಿಚಾರಣೆ ಮಾಡಲಾಗುತ್ತಿದೆ. ಇಂದು ಬೆಳಗಿನ ಜಾವ ನಾಲ್ಕು ಗಂಟೆ ಸುಮಾರಿಗೆ ಬೀದರ್ ಹಾಗೂ ಕಲಬುರಗಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ಮಾಡಿ ಲಂಚಕೊರರ ಚಳಿ ಬಿಡಿಸಿದ್ದಾರೆ. ದಾಳಿ ವೇಳೆ ಕಚೇರಿ ದಾಖಲೆಗಳನ್ನು ಪರಿಶೀಲನೆ ಮಾಡಲಾಗುತ್ತಿದೆ. ಆರ್‌ಟಿಓ ಚೆಕ್ ಪೋಸ್ಟ್ ಗಳಲ್ಲಿ ಸಿಕ್ಕ ದಾಖಲಾತಿಗಳನ್ನು ಪರಿಶೀಲನೆ ಮಾಡಲಾಗುತ್ತಿದೆ. ಸಾಕಷ್ಟು ದಾಖಲೆಗಳು ಹೊಂದಾಣಿಕೆಯಾಗದ ಕಾರಣ ಅವುಗಳನ್ನು ವಶಕ್ಕೆ ಪಡೆದು, ಅನುಮಾನ ಬಂದವರ ವಿಚಾರಣೆಯನ್ನು ಚುರುಕುಗೊಳಿಸಲಾಗಿದೆ.












Click it and Unblock the Notifications