ಪ್ರಜ್ವಲ್ ರೇವಣ್ಣ & ಎಚ್.ಡಿ. ರೇವಣ್ಣ ವಿರುದ್ಧ ಎಫ್‌ಐಆರ್ ದಾಖಲು?

ಹಾಸನ ಪೆನ್‌ಡ್ರೈವ್ & ಅಶ್ಲೀಲ ವಿಡಿಯೋ ವೈರಲ್ ಕೇಸ್‌ಗೆ ಕ್ಷಣಕ್ಷಣಕ್ಕೂ ಸ್ಫೋಟಕ ತಿರುವು ಸಿಗುತ್ತಿದೆ. ಅದರಲ್ಲೂ ಕೆಲವು ದಿನಗಳಿಂದ ಹಾಸನದ ಹಾದಿ, ಬೀದಿಯಲ್ಲಿ ಸಿಕ್ಕಿದ್ದ ರಾಶಿ & ರಾಶಿ ಪೆನ್‌ಡ್ರೈವ್ ಜೊತೆಗೆ ಮತ್ತೊಂದು ಗಂಭೀರ ಆರೋಪ ಕೂಡ ಕೇಳಿಬಂದಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಆರೋಪವು ಕೇಳಿಬಂದ ಬೆನ್ನಲ್ಲೇ, ಇದೀಗ ಎಚ್.ಡಿ. ರೇವಣ್ಣ ವಿರುದ್ಧ ಕೂಡ ಮನೆ ಕೆಲಸದವ್ರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಪ್ರಜ್ವಲ್ ರೇವಣ್ಣ ಅವರ ಖಾಸಗಿ ವಿಚಾರಕ್ಕೆ ಸಂಬಂಧಿಸಿದಂತೆ, ವಿಡಿಯೋ ಪೆನ್‌ಡ್ರೈವ್‌ನಲ್ಲಿ ಹಾಕಿ ಹಾಸನದ ಹಾದಿ & ಬೀದಿಗಳಲ್ಲಿ ಚೆಲ್ಲಾಡುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ. ಈ ಆರೋಪಗಳ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ವಿರುದ್ಧ ಆಕ್ರೋಶ ಕೂಡ ಮೊಳಗುತ್ತಿದೆ. ಈ ಸಮಯದಲ್ಲೇ ಕಾಂಗ್ರೆಸ್ ನಾಯಕರು ಈ ವಿಚಾರ ಹಿಡಿದು ಜೆಡಿಎಸ್ ನಾಯಕರ ವಿರುದ್ಧ, ತೀವ್ರ ವಾಗ್ದಾಳಿ ನಡೆಸಿದ್ದರು. ಮತ್ತೊಂದು ಕಡೆ ಸಂತ್ರಸ್ತ ಮಹಿಳೆಯರು ಈ ಕುರಿತು ದೂರು ನೀಡಿ ಕಾನೂನು ಹೋರಾಟಕ್ಕೂ ಮುಂದಾಗಿದ್ದರು ಎಂಬ ಆರೋಪ ಕೂಡ ಕೇಳಿಬಂದಿದೆ. ಈ ಘಟನೆ ಬೆನ್ನಲ್ಲೇ ಇದೀಗ ಮಾಜಿ ಸಚಿವ ಹಾಗೂ ಪ್ರಜ್ವಲ್ ರೇವಣ್ಣ ಅವರ ತಂದೆಯಾದ ಎಚ್.ಡಿ. ರೇವಣ್ಣ ವಿರುದ್ಧ ಕೂಡ ಕಂಪ್ಲೇಟ್ ದಾಖಲಾಗಿದೆ ಎಂಬ ಆರೋಪ ಕೇಳಿಬಂದಿದೆ.

Allegedly The Complaint Lodged Against HD Revanna And Prajwal Revanna In Hassan

ಮನೆ ಕೆಲಸದವರಿಂದ ದೂರು ದಾಖಲು?

ಹೌದು ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಕೇಸ್ ಹಲ್‌ಚಲ್ ಎಬ್ಬಿಸಿದೆ. ಇದೇ ವೇಳೆ ಎಚ್.ಡಿ. ರೇವಣ್ಣ ವಿರುದ್ಧವೂ ಆರೋಪ ಕೇಳಿಬಂದಿದೆ ಎಂಬ ಸುದ್ದಿ ಸಂಚಲನ ಸೃಷ್ಟಿಸಿದೆ. ಈ ಮಧ್ಯೆ ಪ್ರಜ್ವಲ್ ರೇವಣ್ಣ ವಿರುದ್ಧವೂ ಇದೇ ಮೊದಲ ಬಾರಿ, ಈ ಪ್ರಕರಣಕ್ಕೆ ಸಂಬಂಧಿಸಿ ಎಫ್‌ಐಆರ್ ದಾಖಲಾಗಿದೆ. ಹಾಸನ ಜಿಲ್ಲೆ ಹೊಳೆನರಸೀಪುರ ನಗರ ಠಾಣೆಯಲ್ಲಿ‌ ಮೊದಲ FIR ದಾಖಲು ದಾಖಲಾಗಿದೆ. ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದವಾಗಿ ಲೈಂಗಿಕ ದೌರ್ಜನ್ಯ ಆರೋಪದಡಿ ಎಫ್‌ಐಆರ್ ದಾಖಲಾಗಿದೆ. ಸಂತ್ರಸ್ಥ ಮಹಿಳೆ ದೂರು ಆದರಿಸಿ, ಕೇಸ್ ದಾಖಲು ಮಾಡಲಾಗಿದೆ. ಪ್ರಜ್ವಲ್ ರೇವಣ್ಣ ಜೊತೆ ಎಚ್.ಡಿ. ರೇವಣ್ಣ ವಿರುದ್ಧ ಕೂಡ ಎಫ್‌ಐಆರ್ ದಾಖಲಾಗಿದೆ.

ಐಪಿಸಿ ಸೆಕ್ಷೆನ್ 354 A, 354 D...

ಅಲ್ಲದೆ ಲೈಂಗಿಕ ದೌರ್ಜನ್ಯದ ಜೊತೆಗೆ ಪದೇ ಪದೇ ಹಿಂಬಾಲಿಸಿ ದೌರ್ಜನ್ಯ ಎಸಗಿದ ಬಗ್ಗೆ ಕೂಡ ಆರೋಪ ಕೇಳಿಬಂದಿದೆ. ಮಹಿಳೆಯ ಘನತೆಗೆ ಧಕ್ಕೆ ಆರೋಪ ಸೇರಿ ಹಲವು ಐಪಿಸಿ ಸೆಕ್ಷೆನ್ ಅಡಿ ಕೇಸ್ ದಾಖಲಾಗಿದೆ. ಐಪಿಸಿ ಸೆಕ್ಷೆನ್ 354 A, 354 D ಮತ್ತು 509 ಅಡಿಯಲ್ಲಿ ಈಗ ಕೇಸ್ ದಾಖಲು ಮಾಡಲಾಗಿದೆ. ಈ ಎಫ್‌ಐಆರ್‌ನಲ್ಲಿ ಎ1 ಆರೋಪಿಯಾಗಿ ಎಚ್.ಡಿ. ರೇವಣ್ಣ ಹಾಗೂ ಎ2 ಆರೋಪಿಯಾಗಿ ಪ್ರಜ್ವಲ್ ರೇವಣ್ಣ ವಿರುದ್ಧ ದೂರು ದಾಖಲಾಗಿದೆ. ಹೊಳೆನರಸೀಪುರ ನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಭಾರಿ ಸಂಚಲನ ಸೃಷ್ಟಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+