ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಜೆಡಿಎಸ್‌ ಯೋಜನೆಗಳನ್ನು ಅನುಷ್ಠಾನಕ್ಕೆ ಸಮ್ಮತಿಸಿದವರ ಜೊತೆ ಮೈತ್ರಿ'

By Sachhidananda Acharya
|
Google Oneindia Kannada News

ಚಿಕ್ಕಮಗಳೂರು, ಮೇ 7: ಒಂದೊಮ್ಮೆ ರಾಜ್ಯದಲ್ಲಿ ಮೈತ್ರಿ ಸರಕಾರ ಅನಿವಾರ್ಯವಾದರೆ ಜೆಡಿಎಸ್‌ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ಯಾರು ಸಮ್ಮತಿಸುತ್ತಾರೋ ಅವರ ಜೊತೆಗೆ ಮೈತ್ರಿ ಮಾಡಿಕೊಳ್ಳುತ್ತೇವೆ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಚಿಕ್ಕಮಗಳೂರಿನ ಸುಭಾಷ್‌ ಚಂದ್ರಬೋಸ್‌ ಜಿಲ್ಲಾ ಆಟದ ಮೈದಾನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ವಿಕಾಸ ಪರ್ವ ಸಮಾವೇಶದಲ್ಲಿ ಮಾತನಾಡಿದ ಅವರು, "ನನ್ನ ಲೆಕ್ಕಾಚಾರದ ಪ್ರಕಾರ ಸಮ್ಮಿಶ್ರ ಸರ್ಕಾರ ಬರುವುದಿಲ್ಲ. ಆದರೆ, ಟಿವಿ ಸಮೀಕ್ಷೆಗಳು ಜೆಡಿಎಸ್ ಗೆ 40 ಸ್ಥಾನಗಳನ್ನು ನೀಡಿವೆ. ಅಷ್ಟು ಸ್ಥಾನಗಳು ದೊರೆತರೂ ನಮ್ಮನ್ನು ಬಿಟ್ಟು ಸರಕಾರ ರಚಿಸಲು ಸಾಧ್ಯವಿಲ್ಲ. ಅತಂತ್ರ ಸ್ಥಿತಿ ನಿರ್ಮಾಣವಾದರೆ ನಮ್ಮ ಕಾರ್ಯಕ್ರಮ ಅನುಷ್ಠಾನಗೊಳಿಸುವವರ ಜತೆ ಕೈಜೋಡಿಸುತ್ತೇವೆ," ಎಂದರು.

113 ಸ್ಥಾನ ಗೆಲ್ಲುವ ತಂತ್ರಗಾರಿಕೆ ಮಾಡಲಾಗಿದೆ :ಎಚ್ಡಿಕೆ113 ಸ್ಥಾನ ಗೆಲ್ಲುವ ತಂತ್ರಗಾರಿಕೆ ಮಾಡಲಾಗಿದೆ :ಎಚ್ಡಿಕೆ

ನಾನೀಗ ಮಾಜಿ ಮುಖ್ಯಮಂತ್ರಿ. ಮುಖ್ಯಮಂತ್ರಿ ಆಗಲೇಬೇಕೆಂಬ ಆಸೆ ನನಗಿಲ್ಲ. ಮಾಧ್ಯಮಗಳಲ್ಲಿ ತೋರಿಸುವಷ್ಟೇ ಸೀಟು ಬಂದರೂ ನಾನು ಮುಖ್ಯಮಂತ್ರಿ ಸ್ಥಾನ ಕೊಡಿ ಎಂದು ಯಾರ ಬಾಗಿಲನ್ನೂ ತಟ್ಟುವುದಿಲ್ಲ ಎಂದು ಕುಮಾರಸ್ವಾಮಿ ಇದೇ ವೇಳೆ ಸ್ಪಷ್ಟಪಡಿಸಿದರು.

 Alliance with the party which implements JDS programs: HDK

ಉತ್ತರ ಕರ್ನಾಟಕದಲ್ಲಿ ನಾನು ಪ್ರವಾಸ ಮಾಡಿದ್ದೇನೆ. ರಾಜ್ಯದ ಜನರು ಜೆಡಿಎಸ್‌ ಪಕ್ಷವನ್ನು ಬೆಂಬಲಿಸಲಿದ್ದಾರೆ. ಪಕ್ಷಕ್ಕೆ 113ಕ್ಕಿಂತ ಹೆಚ್ಚಿನ ಸ್ಥಾನಗಳು ದೊರೆಯಲಿವೆ ಎಂದು ಅವರು ಇದೇ ಸಂದರ್ಭದಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.

ಚುನಾವಣೆ ಮುಗಿದಮೇಲೆ ಕೆಲವರು ಊರು ಬಿಡ್ಬೇಕಾಗುತ್ತೆ:ಎಚ್‌ಡಿಕೆಚುನಾವಣೆ ಮುಗಿದಮೇಲೆ ಕೆಲವರು ಊರು ಬಿಡ್ಬೇಕಾಗುತ್ತೆ:ಎಚ್‌ಡಿಕೆ

English summary
Karnataka assembly elections 2018: JDS president HD Kumaraswamy said that, if situation arises party will alliance with anyone who is agree to implement JDS programs.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X