Alamatti Dam: ಆಲಮಟ್ಟಿ ಜಲಾಶಯ: ಕೃಷ್ಣಾ ಮೇಲ್ದಂಡೆ ಯೋಜನೆ -3ರ ಬಗ್ಗೆ ಸಿ.ಎಂ ಸಿದ್ದರಾಮಯ್ಯ ಮಹತ್ವದ ಮಾಹಿತಿ
ವಿಜಯಪುರದ ಆಲಮಟ್ಟಿ ಜಲಾಶಯದ ಅಣ್ಣೆಕಟ್ಟು ಎತ್ತರ ಆಗಬೇಕು ಎನ್ನುವ ಬಹುದಿನಗಳ ಕನಸು ಇದೀಗ ಈಡೇರುವ ಹಂತವನ್ನು ತಲುಪಿದೆ. ಈ ಬಗ್ಗೆ ಕುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಮಾಹಿತಿ ಹಂಚಿಕೊಂಡಿದ್ದಾರೆ ಆಲಮಟ್ಟಿ ಜಲಾಶಯದ ನೀರಿನ ಸಂಗ್ರಹ ಮಟ್ಟವನ್ನು ಆರ್.ಎಲ್. 519.60 ಮೀ. ನಿಂದ 524.26 ಮೀ. ನವರೆಗೆ ಎತ್ತರಿಸಿ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಪೂರ್ಣಗೊಳಿಸುವುದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರವು ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಈ ಯೋಜನೆಯನ್ನು ಹಂತ ಹಂತವಾಗಿ ಪೂರ್ಣಗೊಳಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಇನ್ನು ಉದ್ದೇಶಿತ ಯೋಜನೆಗಾಗಿ ಮುಳುಗಡೆ ಹೊಂದಲಿರುವ ಜಮೀನು, ಪುನರ್ವಸತಿ ಹಾಗೂ ಕಾಲುವೆ ನಿರ್ಮಾಣಕ್ಕಾಗಿ ಅಂದಾಜು ಹಾಗೂ ಒಟ್ಟಾರೆ 1,33,867 ಎಕರೆ ಜಮೀನು ಸ್ವಾಧೀನಪಡಿಸಬೇಕಾಗಿದೆ ಎಂದಿದ್ದಾರೆ. ಅಲ್ಲದೆ ಈ ಸಂಬಂಧ ಈಗಾಗಲೇ 28,967 ಎಕರೆ ಸ್ವಾಧೀನಪಡಿಸಲಾಗಿದೆ. ಇನ್ನುಳಿದ 1,04,963 ಎಕರೆ ಸ್ವಾಧೀನಪಡಿಸಲು ಬಾಕಿಯಿದೆ ಎಂದು ಸಿದ್ದರಾಮಯ್ಯ ಅವರು ಮಾಹಿತಿ ನೀಡಿದ್ದಾರೆ.

ಜಲಾಶಯದ ಹಿನ್ನೀರಿನಿಂದ 188 ಗ್ರಾಮಗಳು ಮುಳುಗಡೆಯಾಗಲಿದ್ದು, ಈ ಗ್ರಾಮಗಳಿಗೆ ಸಂಬಂಧಿಸಿದಂತೆ 73,020 ಎಕರೆ ಜಮೀನು ಭೂಸ್ವಾಧೀನಕ್ಕೆ ಬಾಕಿಯಿದೆ. ಈ ಹಿಂದೆ ಬಿಜೆಪಿ ಸರ್ಕಾರವು 2022ರಲ್ಲಿ ಮುಳುಗಡೆಯಾಗುವ ಜಮೀನುಗಳನ್ನು ಎರಡು ಹಂತದಲ್ಲಿ ಭೂಸ್ವಾಧೀನಪಡಿಸುವ ನಿರ್ಧಾರ ತೆಗೆದುಕೊಂಡಿತ್ತು. ಇದನ್ನು ಬದಲಾಯಿಸಿ ಈಗ ಪ್ರಥಮ ಆದ್ಯತೆಯಲ್ಲಿ ಹಾಗೂ ಒಂದೇ ಹಂತದಲ್ಲಿ ಈ ಜಮೀನು ಭೂಸ್ವಾಧೀನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಅವರು ವಿವರಿಸಿದ್ದಾರೆ.
ಇನ್ನು ಜಮೀನು ಕಳೆದುಕೊಳ್ಳುವ ರೈತರಿಗೆ ಜಮೀನಿನ ಮಾರುಕಟ್ಟೆ ದರ, ಆಸ್ತಿಯ ಮಾರ್ಗದರ್ಶಿ ಮೌಲ್ಯ ಹಾಗೂ ಭೂಸ್ವಾಧೀನ ಕಾಯ್ದೆಯನ್ನು ಗಮನದಲ್ಲಿರಿಸಿ ನ್ಯಾಯಯುತ ಪರಿಹಾರ ಒದಗಿಸಲು ಸರ್ಕಾರ ಸಿದ್ಧವಿದೆ. ರೈತರಿಗಾಗಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಜಮೀನಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಎಲ್ಲರೂ ದರ ನಿಗದಿಪಡಿಸುವ ವಿಚಾರದಲ್ಲಿ ಒಮ್ಮತದ ನಿರ್ಧಾರಕ್ಕೆ ಎಲ್ಲರೂ ಮುಂದೆ ಬರಬೇಕು. ರೈತರಿಗೂ ಅನ್ಯಾಯವಾಗಬಾರದು, ಸರ್ಕಾರಕ್ಕೂ ಹೊರೆಯಾಗದಂತೆ ನಿರ್ಣಯಕ್ಕೆ ಬರಲಾಗುವುದು ಎಂದಿದ್ದಾರೆ.
ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ 20ಸಾವಿರ ಪ್ರಕರಣಗಳು ನ್ಯಾಯಾಲಯದಲ್ಲಿವೆ. ಈ ಪ್ರಕರಣಗಳನ್ನು ಹಿಂಪಡೆದುಕೊಂಡು ಸಹಮತದ ಮೂಲಕ ಬಗೆಹರಿಸಲು ಪ್ರಯತ್ನಿಸಬೇಕು ಎಂದು ಸೂಚಿಸಿದ್ದೇನೆ ಎಂದು ಹೇಳಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ.

ಇನ್ನು ಆಲಮಟ್ಟಿ ಜಲಾಶಯದ ಎತ್ತರವನ್ನು ಹೆಚ್ಚಿಸಬೇಕು ಎನ್ನುವುದ ಈ ಭಾಗದ ರೈತರು ಹಾಗೂ ಸ್ಥಳೀಯರ ಹಲವು ವರ್ಷಗಳ ಕನಸಾಗಿದೆ. ಈ ವಿಷಯದಲ್ಲಿ ಸರ್ಕಾರವು ಯಾವುದೇ ಕಾರಣಕ್ಕೂ ಹಿಂದೆ ಸರಿಯಬಾರದು ಎಂದು ವಿಜಯಪುರದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಈಚೆಗೆ ಸರ್ಕಾರವನ್ನು ಆಗ್ರಹಿಸಿದ್ದರು.
ಅಲ್ಲದೆ ಈ ಭಾಗದಲ್ಲಿ ಅಣೆಕಟ್ಟಿನ ಎತ್ತರವನ್ನು ಹೆಚ್ಚಿಸಬೇಕು ಎಂದು ಆಗ್ರಹಿಸಿ ರೈತರು ಸರಣಿ ಪ್ರತಿಭಟನೆಗಳನ್ನು ಸಹ ನಡೆಸಿದ್ದರು. ಸರ್ಕಾರಗಳು ಕೃಷ್ಣ ಹಾಗೂ ಕಾವೇರಿ ವಿಷಯದಲ್ಲಿ ನೀಡಿದ ಆದ್ಯತೆಯನ್ನು ಆಲಮಟ್ಟಿ ವಿಚಾರದಲ್ಲೂ ಕೊಡಬೇಕು ಎಂದು ಒತ್ತಾಯಿಸಿದ್ದರು. ಇದೀಗ ಅದಕ್ಕೆ ಕೊನೆಗೂ ಮುಹೂರ್ತ ಕೂಡಿ ಬಂದಿದೆ.
-
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ












Click it and Unblock the Notifications