ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆಗಸ್ಟ್ ಪರೀಕ್ಷೆಗೆ ಅವಕಾಶ: ಕೊರಟಗೆರೆ ವಿದ್ಯಾರ್ಥಿನಿ ಗ್ರೀಷ್ಮಾಗೆ ಸುರೇಶ್ ಕುಮಾರ್ ಭರವಸೆ!

|
Google Oneindia Kannada News

ಬೆಂಗಳೂರು, ಜು. 17: "ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ವಿದ್ಯಾರ್ಥಿನಿ ಗ್ರೀಷ್ಮಾ ಎನ್. ನಾಯಕ್‌ಗೆ ಆಗಸ್ಟ್ ತಿಂಗಳಿನಲ್ಲಿ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು" ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಭರವಸೆ ನೀಡಿದ್ದಾರೆ. ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಹನುಮಂತಾಪುರದ ಗ್ರೀಷ್ಮಾ ಎನ್. ನಾಯಕ್ ಮನೆಗೆ ಸುರೇಶ್ ಕುಮಾರ್ ಭೇಟಿ ನೀಡಿದ್ದರು.

"ವಿದ್ಯಾರ್ಥಿನಿ ಗ್ರೀಷ್ಮಾ ನಾಯಕ್ ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹೆಸರು ನೊಂದಾಯಿಸಿದಲ್ಲವಾದ್ದರಿಂದ ನಿಯಮಾನುಸಾರ ಜುಲೈನಲ್ಲಿ ನಡೆಯಲಿರುವ ಪರೀಕ್ಷೆಗೆ ಹಾಜರಾಗಲು ಅವಕಾಶವಿಲ್ಲ. ಮುಂದಿನ ತಿಂಗಳು ನಡೆಯಲಿರುವ ಪೂರಕ ಪರೀಕ್ಷೆಗೆ ಹಾಜರಾಗಲು ಆಕೆಗೆ ಖಚಿತ ಅವಕಾಶ ಮಾಡಿಕೊಡಲಾಗುವುದು. ಜೊತೆಗೆ ಅವಳನ್ನು ಪಾಸ್ ಮಾಡಿ ಪಿಯುಸಿ ಪ್ರವೇಶಕ್ಕೆ ಅನುವು ಮಾಡಿಕೊಡಲಾಗುವುದು" ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

22 ರೂಪಾಯಿ, SSLC ಪರೀಕ್ಷೆ, ಆಳ್ವಾಸ್ ಶಿಕ್ಷಣ ಸಂಸ್ಥೆ: ಅವಕಾಶ ತಪ್ಪಿಸಿಕೊಂಡ ಗ್ರೀಷ್ಮಾ ನಾಯಕ್ 22 ರೂಪಾಯಿ, SSLC ಪರೀಕ್ಷೆ, ಆಳ್ವಾಸ್ ಶಿಕ್ಷಣ ಸಂಸ್ಥೆ: ಅವಕಾಶ ತಪ್ಪಿಸಿಕೊಂಡ ಗ್ರೀಷ್ಮಾ ನಾಯಕ್

ಡಿಡಿಪಿಐಗೆ ಸುರೇಶ್ ಕುಮಾರ್ ಸೂಚನೆ

ಡಿಡಿಪಿಐಗೆ ಸುರೇಶ್ ಕುಮಾರ್ ಸೂಚನೆ

ವಿದ್ಯಾರ್ಥಿನಿ ಗ್ರೀಷ್ಮಾ ಪೂರಕ ಪರೀಕ್ಷೆಗೆ ಹಾಜರಾಗಲು ಪರೀಕ್ಷೆಗೆ ಹೆಸರು ನೊಂದಾಯಿಸುವುದು, ಫಲಿತಾಂಶದ ನಂತರ ಇದೇ ಶೈಕ್ಷಣಿಕ ಸಾಲಿನಲ್ಲಿ ವಿದ್ಯಾರ್ಥಿನಿಗೆ ಪಿಯುಸಿ ತರಗತಿಗೆ ಸೇರ್ಪಡೆಗೊಳಿಸುವುದು ಸೇರಿದಂತೆ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕೆಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅಧಿಕಾರಗಳಿಗೆ ಸೂಚಿಸಿದರು. ಸ್ಥಳದಲ್ಲಿ ಹಾಜರಿದ್ದ ತುಮಕೂರು ಜಿಲ್ಲೆ ಮಧುಗಿರಿಯ ಡಿಡಿಪಿಐ ಅವರಿಗೆ ಈ ಬಗ್ಗೆ ಸಚಿವ ಸುರೇಶ್ ಕುಮಾರ್ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಪರೀಕ್ಷೆ ಬರೆಸುವುದು ನನ್ನ ಜವಾಬ್ದಾರಿ

"ಇದೇ ಸಾಲಿನಲ್ಲಿ ನಿನ್ನನ್ನು ಪಿಯುಸಿಗೆ ಸೇರ್ಪಡೆಗೊಳಿಸುವುದು ನನ್ನ ಜವಾಬ್ದಾರಿ. ಮುಂದಿನ ತಿಂಗಳು ನಡೆಯಲಿರುವ ಪರೀಕ್ಷೆ ಹಾಜರಾಗಲು ಅವಕಾಶವಿರುವುದರಿಂದ ಯಾವುದೇ ಕಾರಣಕ್ಕೂ ಮನಸ್ಸಿಗೆ ಬೇಸರ ಮಾಡಿಕೊಳ್ಳದೇ ಉತ್ತಮ ಅಂಕಗಳನ್ನು ಪಡೆಯಲು ಶ್ರಮವಹಿಸಿ ಅಭ್ಯಾಸದ ಕಡೆ ಗಮನ ಹರಿಸಬೇಕು. ಪರೀಕ್ಷೆಗೆ ಚೆನ್ನಾಗಿ ಓದುವುದಷ್ಟೇ ನೀನು ಮಾಡಬೇಕಾದ ಕೆಲಸ" ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿದ್ಯಾರ್ಥಿನಿಗೆ ಧೈರ್ಯ ತುಂಬಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯ ಪೋಷಕರು ಹಾಜರಿದ್ದು, ಸಚಿವ ಸುರೇಶ್ ಕುಮಾರ್ ಅವರು ತಮ್ಮ ಮನೆವರೆಗೂ ಆಗಮಿಸಿ ತಮ್ಮ ಪುತ್ರಿಗೆ ಧೈರ್ಯ ತುಂಬಿ ಭರವಸೆ ಮೂಡಿಸಿದ ಸಚಿವರಿಗೆ ಕೃತಜ್ಞಗೆ ಸಲ್ಲಿಸಿದರು.

ಗ್ರೀಷ್ಮಾ ಶಾಲೆಗೆ ಹಾಜರಾಗಿಲ್ಲ

ಗ್ರೀಷ್ಮಾ ಶಾಲೆಗೆ ಹಾಜರಾಗಿಲ್ಲ

ಇಡೀ ಪ್ರಕರಣದ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. "ವಿದ್ಯಾರ್ಥಿನಿ ಗ್ರೀಷ್ಮಾ 9ನೇ ತರಗತಿ ಪಾಸಾದ ಬಳಿಕ ಅವಳು ಶಾಲೆಗೆ ಹಾಜರಾಗಿಲ್ಲ. ಹಾಗೆಯೇ 10ನೇ ತರಗತಿ ಪರೀಕ್ಷೆಗೂ ನೋಂದಾಯಿಸಿಲ್ಲ. ಹೀಗಾಗಿ ಅವಳಿಗೆ ಜುಲೈನಲ್ಲಿ ಪರೀಕ್ಷೆಗೆ ಹಾಜರಾಗಲು ಅವಕಾಶವಾಗಿಲ್ಲ. ಆಗಸ್ಟ್‌ ತಿಂಗಳಿನಲ್ಲಿ ನಡೆಯಲಿರುವ ಪೂರಕ ಪರೀಕ್ಷೆಗೆ ಹೆಸರು ನೊಂದಾಯಿಸಿ ಗ್ರೀಷ್ಮಾಗೆ ಅವಕಾಶ ನೀಡಲಾಗುವುದು" ಎಂದು ವಿವರಿಸಿದರು.

ಆಳ್ವಾಸ್ ಮೇಲೆ ಆರೋಪಿಸಿದ್ದ ಗ್ರೀಷ್ಮಾ ತಂದೆ

ಆಳ್ವಾಸ್ ಮೇಲೆ ಆರೋಪಿಸಿದ್ದ ಗ್ರೀಷ್ಮಾ ತಂದೆ

ಇದಕ್ಕೂ ಮೊದಲು ಮೂಡುಬಿದರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ರೆಸಿಡೆನ್ಸಿಯಲ್ ಶಾಲೆಯ ಮೇಲೆ ಗ್ರೀಷ್ಮಾ ತಂದೆ ನರಸಿಂಹ ನಾಯಕ್ ಆರೋಪಿಸಿದ್ದರು. ಆದರೆ 9ನೇ ತರಗತಿಯ ಶಾಲಾ ಶುಲ್ಕವನ್ನೂ ವಿದ್ಯಾರ್ಥಿನಿಯ ತಂದೆ ಭರಿಸಿಲ್ಲ ಎಂಬ ವಿಚಾರ ಶಿಕ್ಷಣ ಸಚಿವರ ಭೇಟಿ ಸಂದರ್ಭದಲ್ಲಿ ಬೆಳಕಿಗೆ ಬಂದಿದೆ. ಶಾಲಾ ಶುಲ್ಕವನ್ನು ಭರಿಸದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿ ಆನ್‌ಲೈನ್‌ ತರಗತಿಗೂ ಹಾಜರಾಗಿರಲಿಲ್ಲ. ಈ ಬಗ್ಗೆ ಮೂಡುಬಿದರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ರೆಸಿಡೆನ್ಸಿಯಲ್ ಶಾಲೆ ಹಲವು ಬಾರಿ ವಿದ್ಯಾರ್ಥಿನಿ ಪಾಲಕರಿಗೆ ಮನವಿ ಮಾಡಿಕೊಂಡಿತ್ತು ಎಂಬ ಮಾಹಿತಿ ಇದೇ ಸಂದರ್ಭದಲ್ಲಿ ತಿಳಿದು ಬಂದಿದೆ.

English summary
Alvas SSLC Student Suicide Attempt After Not Getting Chance to Write Exam Over Not Paying Exam Fee. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X