ಅಂಬರೀಶ್ ಸಾವಿಗೆ ಸಂತಾಪ ಸೂಚಿಸಿದ ರಾಹುಲ್ ಗಾಂಧಿ
ಬೆಂಗಳೂರು, ನವೆಂಬರ್ 25 : ಮಾಜಿ ಸಚಿವ ಎಂ.ಎಚ್.ಅಂಬರೀಶ್ ನಿಧನಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ. 'ಕಾಂಗ್ರೆಸ್ ಕುಟುಂಬ ಒಬ್ಬ ಸದಸ್ಯನನ್ನು ಕಳೆದುಕೊಂಡಿದೆ' ಎಂದು ಅವರು ಟ್ವೀಟ್ ಮಾಡಿದ್ದಾರೆ.
ಎಂ.ಎಚ್.ಅಂಬರೀಶ್ ಅವರು ನ.24ರ ಶನಿವಾರ ರಾತ್ರಿ 10.15ಕ್ಕೆ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಂಠೀರವ ಸ್ಟೇಡಿಯಂನಲ್ಲಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನ.26ರಂದು ಅಂತ್ಯಕ್ರಿಯೆ ನಡೆಯಲಿದೆ.
'ಅಂಬರೀಶ್ ಅವರು ನಟನೆ ಮತ್ತು ರಾಜಕೀಯ ಕೆಲಸದಿಂದಾಗಿ ಕರ್ನಾಟಕ ಮತ್ತು ಇಡೀ ದೇಶದಲ್ಲಿ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದರು' ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

'ಕಾಂಗ್ರೆಸ್ ಪಕ್ಷ ಒಬ್ಬ ಕುಟುಂಬ ಸದಸ್ಯನನ್ನು ಕಳೆದುಕೊಂಡಿದೆ. ಅಂಬರೀಶ್ ಅವರ ಕುಟುಂಬ ಸದಸ್ಯರಿಗೆ ನೋವು ಭರಿಸುವ ಶಕ್ತಿಯನ್ನು ನೀಡಲಿ' ಎಂದು ರಾಹುಲ್ ಗಾಂಧಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ಅಂಬರೀಶ್ ಅವರ ಪಾರ್ಥಿವ ಶರೀರವನ್ನು ಸಂಜೆ 4 ಗಂಟೆಗೆ ಮಂಡ್ಯಕ್ಕೆ ತೆಗೆದುಕೊಂಡು ಹೋಗಲಾಗುತ್ತದೆ. ಸೋಮವಾರ ಬೆಳಗ್ಗೆ 6 ಗಂಟೆ ತನಕ ಮಂಡ್ಯದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
In the passing of Ambareesh Ji, the Congress family has lost a valuable member. He was a famous son of Karnataka, whose work as an actor & and in politics, won him a huge following both in the state & across India. My condolences to his family and friends in this time of grief.
— Rahul Gandhi (@RahulGandhi) November 25, 2018












Click it and Unblock the Notifications