ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಂಬರೀಶ್ ನಿಧನ: ಬೆಂಗಳೂರಿನಲ್ಲಿ ಮದ್ಯ ಮಾರಾಟ ನಿಷೇಧ

|
Google Oneindia Kannada News

ಬೆಂಗಳೂರು, ನ 25: ಮಾಜಿ ಕೇಂದ್ರ ಸಚಿವ ಮತ್ತು ನಟ ಅಂಬರೀಶ್ ನಿಧನದ ಹಿನ್ನಲೆಯಲ್ಲಿ ಬೆಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಬರುವ ಎಲ್ಲಾ ರೀತಿಯ ಮದ್ಯದ ಅಂಗಡಿಗಳನ್ನು ನಿಷೇಧಿಸಿ ಬೆಂಗಳೂರು ನಗರ ಕಮಿಷನರ್ ಸುನೀಲ್ ಕುಮಾರ್ ಆದೇಶ ಹೊರಡಿಸಿದ್ದಾರೆ.

ಸಂಖ್ಯೆ ಗು.ವಾ/ಎಸ್ಬಿ/ಮದ್ಯ ಮಾರಾಟ ನಿಷೇಧ/47/2018 ದಿನಾಂಕ 25.11.2018, ಆದೇಶದ ಮೂಲಕ, ಕಮಿಷನರ್ ಈ ಆದೇಶ ಹೊರಡಿಸಿದ್ದಾರೆ. ದಿನಾಂಕ 25.11.2018 ಬೆಳಗ್ಗೆ ಆರು ಗಂಟೆಯಿಂದ, 26.11.2018ರ ಮಧ್ಯರಾತ್ರಿಯವರೆಗೆ ಈ ನಿಷೇಧ ಜಾರಿಯಲ್ಲಿರುತ್ತದೆ.

LIVE: ಅಂಬರೀಶ್ ನಿಧನದಿಂದ ನೊಂದ ಅಭಿಮಾನಿಯೊಬ್ಬ ಆತ್ಮಹತ್ಯೆLIVE: ಅಂಬರೀಶ್ ನಿಧನದಿಂದ ನೊಂದ ಅಭಿಮಾನಿಯೊಬ್ಬ ಆತ್ಮಹತ್ಯೆ

ಅಂಬರೀಶ್ ಅವರ ಅಂತ್ಯಕ್ರಿಯೆಯ ಸಂಬಂಧ, ಸಾವಿರಾರು ಜನರು ಸೇರುತ್ತಿದ್ದು, ಈ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ವಿಚಾರದಲ್ಲಿ ಈ ಆದೇಶವನ್ನು ಜಾರಿಗೆ ತರಲಾಗಿದೆ ಎಂದು ಪೊಲೀಸ್ ಕಮಿಷನರ್ ಹೇಳಿದ್ದಾರೆ.

Ambareesh death liqor ban in Bengaluru Commissionerate from Nov 25 to Nov 26 mid night

ಅಂತಿಮಯಾತ್ರೆಯ ವೇಳೆ, ಕಿಡಿಗೇಡಿಗಳು, ಮದ್ಯಪಾನದ ಅಮಲಿನಲ್ಲಿ, ದುಷ್ಕೃತ್ಯವನ್ನು ನಡೆಸಿ, ಸಮಾಜದ ಶಾಂತಿ ಮತ್ತು ಸುವ್ಯವಸ್ಥೆಯನ್ನು ಹಾಳು ಮಾಡುವ ಸಂಭವವಿರುವುದಾಗಿ ಗುಪ್ತವಾರ್ತಾ ವಿಭಾಗದ ಮಾಹಿತಿಯಿಂದ ತಿಳಿದುಬಂದಿರುವುದರಿಂದ, ಈ ಆದೇಶವನ್ನು ಹೊರಡಿಸಲಾಗಿದೆ.

ಅಂಬರೀಶ್ ಅಭಿಮಾನಿಗಳಿಗೆ ಮನವಿ ಮಾಡಿದ ಕುಮಾರಸ್ವಾಮಿಅಂಬರೀಶ್ ಅಭಿಮಾನಿಗಳಿಗೆ ಮನವಿ ಮಾಡಿದ ಕುಮಾರಸ್ವಾಮಿ

ಗುಪ್ತಚರ ಇಲಾಖೆಯ ಮಾಹಿತಿಯಲ್ಲಿ ಸತ್ಯಾಂಶವಿರುವುದರಿಂದ, ಬೆಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಮದ್ಯ ಮಾರಾಟವನ್ನು ಎರಡು ದಿನ ನಿಷೇಧಿಸಿ, ಆದೇಶವನ್ನು ಹೊರಡಿಸುತ್ತಿದ್ದೇವೆ ಎಂದು ಕಮಿಷನರ್ ಹೇಳಿದ್ದಾರೆ.

English summary
Former Union MInister Ambareesh death liqor ban in Bengaluru Commissionerate from Nov 25 to Nov 26 mid night
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X