ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಂಠೀರವ ಸ್ಟುಡಿಯೋದಲ್ಲಿ ನ.26ರಂದು ಅಂಬರೀಶ್ ಅಂತ್ಯಕ್ರಿಯೆ

|
Google Oneindia Kannada News

ಬೆಂಗಳೂರು, ನವೆಂಬರ್ 25 : ಮಾಜಿ ಸಚಿವ, ಹಿರಿಯ ನಟ ಅಂಬರೀಶ್ ಪಾರ್ಥೀವ ಶರೀರದ ಅಂತ್ಯಕ್ರಿಯೆ ಸೋಮವಾರ (26-11-2018) ಕಂಠೀರವ ಸ್ಟುಡಿಯೋದಲ್ಲಿ ನಡೆಯಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಕಂಠೀರವ ಸ್ಟೇಡಿಯಂನಲ್ಲಿ ಅಂತಿಮ ದರ್ಶನ ನಡೆಯುತ್ತಿದೆ. ಕಂಠೀರವ ಸ್ಟುಡಿಯೋದಲ್ಲಿರುವ ಡಾ.ರಾಜ್ ಕುಮಾರ್ ಸಮಾಧಿ ಸ್ಮಾರಕದ ಬಳಿ ಸಕಲ ಸರ್ಕಾರಿ ಗೌರವದೊಂದಿಗೆ ಸೋಮವಾರ ಅಂತ್ಯಕ್ರಿಯೆ ನಡೆಯಲಿದೆ.

ಬೆಂಗಳೂರಿನಲ್ಲಿಯೇ ಅಂಬರೀಶ್ ಅಂತ್ಯಕ್ರಿಯೆ : ಎಚ್.ಡಿ.ಕುಮಾರಸ್ವಾಮಿಬೆಂಗಳೂರಿನಲ್ಲಿಯೇ ಅಂಬರೀಶ್ ಅಂತ್ಯಕ್ರಿಯೆ : ಎಚ್.ಡಿ.ಕುಮಾರಸ್ವಾಮಿ

ಭಾನುವಾರ ಇಡೀ ದಿನ ಪಾರ್ಥಿವ ಶರೀರವನ್ನು ಸಾರ್ವಜನಿಕ ಅಂತಿಮ ದರ್ಶನಕ್ಕೆ ಕಂಠೀರವ ಸ್ಟೇಡಿಯಂನಲ್ಲಿ ಇಡಲಾಗುತ್ತದೆ. ಅಂತಿಮ‌ ದರ್ಶನಕ್ಕೆ ಆಗಮಿಸಲು ಮಂಡ್ಯ ಜಿಲ್ಲೆಯಿಂದ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ.

ಅಂಬರೀಶ್ ನಿಧನಕ್ಕೆ ಎಚ್.ಡಿ.ಕುಮಾರಸ್ವಾಮಿ ಸಂತಾಪಅಂಬರೀಶ್ ನಿಧನಕ್ಕೆ ಎಚ್.ಡಿ.ಕುಮಾರಸ್ವಾಮಿ ಸಂತಾಪ

ambareesh

ಅಂಬರೀಶ್ (66) ನಿಧನದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಹಿರಿಯ ನಟ, ಮಾಜಿ ಸಚಿವ ಎಂ.ಎಚ್.ಅಂಬರೀಶ್ ಪರಿಚಯಹಿರಿಯ ನಟ, ಮಾಜಿ ಸಚಿವ ಎಂ.ಎಚ್.ಅಂಬರೀಶ್ ಪರಿಚಯ

'ಕನ್ನಡ ಚಿತ್ರರಂಗ ಕಂಡ ಮಹತ್ವದ ಕಲಾವಿದ ಹಾಗೂ ಅಪರೂಪದ ವ್ಯಕ್ತಿತ್ವದ ರಾಜಕಾರಣಿ ಇನ್ನಿಲ್ಲ ಎನ್ನುವುದು ಅಪಾರ ದುಃಖವನ್ನುಂಟುಮಾಡಿದೆ' ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಶೋಕ ವ್ಯಕ್ತಪಡಿಸಿದ್ದಾರೆ.

'ನನ್ನ ಮತ್ತು ಅವರ ಸ್ನೇಹ ಅನುಗಾಲದ್ದು. ಚಿತ್ರರಂಗ ಹಾಗೂ ರಾಜಕಾರಣವನ್ನು ಮೀರಿದ ಸ್ನೇಹ ನಮ್ಮದಾಗಿತ್ತು. ಅಂಬರೀಷ್ ಹೃದಯ ಶ್ರೀಮಂತಿಕೆಯ ವ್ಯಕ್ತಿತ್ವವುಳ್ಳವರಾಗಿದ್ದರು. ಹಾಗಾಗಿಯೇ ಅವರು ಪ್ರತಿಯೊಬ್ಬರ ಗೌರವಕ್ಕೆ ಪಾತ್ರರಾಗಿದ್ದರು' ಎಂದು ಮುಖ್ಯಮಂತ್ರಿಗಳು ನೆನಪುಮಾಡಿಕೊಂಡಿದ್ದಾರೆ.

English summary
Karnataka Chief Minister H.D.Kumaraswamy said that, The last rites of Kannada senior actor and Former minister M.H.Ambareesh will be held in Kanteerava studio, Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X