• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಂಬೇಡ್ಕರ್ ಅಭಿವೃದ್ಧಿ ನಿಗಮ; ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

|
Google Oneindia Kannada News

ಕೊಪ್ಪಳ, ನವೆಂಬರ್ 09; ಡಾ. ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ವಿವಿಧ ಯೋಜನೆಗಳ ಅಡಿ ಸಾಲ ಸೌಲಭ್ಯ ನೀಡುತ್ತಿದೆ. ಆಸಕ್ತರು ಯೋಜನೆ ಸದುಪಯೋಗ ಪಡೆಯುವಂತೆ ಅರ್ಜಿಗಳನ್ನು ಆಹ್ವಾನಿಸಿದೆ.

ಪರಿಶಿಷ್ಟ ಜಾತಿಯ ಜನರ ಆರ್ಥಿಕ ಅಭಿವೃದ್ಧಿಗೆ ಡಾ. ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳ ಅಡಿ ಸಹಾಯ ಮಾಡಲಿದೆ. 2022-23ನೇ ಸಾಲಿನಲ್ಲಿ ಕೆಳಗಿನ ಯೋಜನೆಗಳಡಿ ಆರ್ಥಿಕ ಅಭಿವೃದ್ಧಿಗೆ ಸಹಾಯ ಮಾಡಲಿದೆ.

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ ಸಿಗುವ 5 ಸೌಲಭ್ಯಗಳು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ ಸಿಗುವ 5 ಸೌಲಭ್ಯಗಳು

ಫಲಾಪೇಕ್ಷಿಗಳು ಅರ್ಜಿ ಸಲ್ಲಿಸಲು ನವೆಂಬರ್ 20 ಕೊನೆಯ ದಿನವಾಗಿದೆ. ನಿಗಮದ ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆಯಡಿ, ಮೈಕ್ರೊ ಕ್ರೆಡೊಟ್ ಪ್ರೇರಣಾ ಯೋಜನೆಯಡಿ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು.

ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯಕ್ಕೆ ಅರ್ಜಿ ಹಾಕಿ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯಕ್ಕೆ ಅರ್ಜಿ ಹಾಕಿ

ಆಸಕ್ತರು ಮತ್ತು ಅರ್ಹರು ಸೇವಾ ಸಿಂಧು ಪೋರ್ಟಲ್, ಕರ್ನಾಟಕ ಒನ್ ಹಾಗೂ ಬೆಂಗಳೂರು ಒನ್ ಕೇಂದ್ರದಲ್ಲಿ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು. ಡಾ. ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ವೆಬ್‌ಸೈಟ್‌ನಲ್ಲಿ ಯೋಜನೆಯ ವಿವರಗಳನ್ನು ಸಹ ನೀಡಲಾಗಿದೆ.

ಚಾಮರಾಜನಗರ ಜಿಲ್ಲಾ ಕೋರ್ಟ್ ನೇಮಕಾತಿ 2022: ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿಚಾಮರಾಜನಗರ ಜಿಲ್ಲಾ ಕೋರ್ಟ್ ನೇಮಕಾತಿ 2022: ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ

ಯೋಜನೆಯ ವಿವರಗಳು; ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ (ದ್ವಿಚಕ್ರ, ತ್ರಿಚಕ್ರ ಸರಕು ಸಾಗಾಣಿಕೆ ವಾಹನ ಹಾಗೂ ಮೈಕ್ರೊ ಕ್ರೆಡಿಟ್ ಪ್ರೇರಣಾ ಯೋಜನೆ (ಮಹಿಳಾ ಸ್ವ ಸಹಾಯ ಗುಂಪುಗಳಿಗೆ) ಸೌಲಭ್ಯ ಪಡೆಯಲು ಅರ್ಜಿದಾರರು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು ಹಾಗೂ ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.

ಕುಟುಂಬದ ವಾರ್ಷಿಕ ಆದಾಯ ಗ್ರಾಮೀಣ ಪ್ರದೇಶದಲ್ಲಿ 1,50,000 ರೂ. ಮತ್ತು ನಗರ ಪ್ರದೇಶದಲ್ಲಿ 3,00,000 ರೂ. ನಿಗದಿ ಮಾಡಲಾಗಿದೆ. ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆಯಲ್ಲಿ ಅರ್ಜಿದಾರರ ವಯೋಮಿತಿ ಕನಿಷ್ಠ 21 ವರ್ಷ, ಗರಿಷ್ಠ 50 ವರ್ಷ. ಮೈಕ್ರೊ ಕ್ರೆಡಿಟ್ (ಪ್ರೇರಣಾ) ಯೋಜನೆಯಡಿ ಅರ್ಜಿದಾರರ ವಯೋಮಿತಿ ಕನಿಷ್ಠ 21 ವರ್ಷ, ಗರಿಷ್ಠ 60 ವರ್ಷಗಳು.

Ambedkar Development Corporation Invited Applications For Various Schemes

ಅರ್ಜಿ ಸಲ್ಲಿಕೆ ಮಾಡುವ ಅರ್ಜಿದಾರರು ಅಥವಾ ಅವರ ಕುಟುಂಬದವರು ಈ ಹಿಂದೆ ನಿಗಮದಿಂದ ಯಾವುದೇ ಸೌಲಭ್ಯ ಪಡೆದಿರಬಾರದು ಮತ್ತು ಸರ್ಕಾರಿ/ ಅರೆ ಸರ್ಕಾರಿ ಸಂಸ್ಥೆಯಲ್ಲಿ ನೌಕರಿ ಮಾಡುತ್ತಿರಬಾರರು.

ಉದ್ಯಮ ಶೀಲತಾ ಅಭಿವೃದ್ಧಿ ಯೋಜುನೆಯಡಿ ದ್ವಿಚಕ್ರ/ ತ್ರಿಚಕ್ರ ಸಾಗಾಣಿಕೆ ವಾಹನ ಉದ್ದೇಶಗಳಿಗೆ ಘಟಕ ವೆಚ್ಚದಲ್ಲಿ ರೂ. 50,000 ಸಹಾಯಧನ ಹಾಗೂ ಉಳಿದ ಮೊತ್ತ ಬ್ಯಾಂಕ್ ಸಾಲವನ್ನಾಗಿ ಅರ್ಜಿದಾರರು ಸೇವಾ ವ್ಯಾಪ್ತಿಯ ಬ್ಯಾಂಕುಗಳಿಂದ ಮಂಜೂರಾತಿ ಪಡೆಯುವ ಷರತ್ತಿಗೆ ಒಳಪಟ್ಟು ಸಹಾಯಧನವನ್ನು ಮಂಜೂರು ಮಾಡಲಾಗುತ್ತದೆ. ಫಲಾಪೇಕ್ಷಿಗಳು ಡ್ರೈವಿಂಗ್ ಲೈಸನ್ಸ್ ಹೊಂದಿರಬೇಕು.

ಮೈಕ್ರೊ ಕ್ರೆಡಿಟ್; ಮೈಕ್ರೊ ಕ್ರೆಡಿಟ್ ಪ್ರೇರಣಾ ಯೋಜನೆಯಡಿ ಕನಿಷ್ಟ 10 ಮಹಿಳೆಯರು ಸ್ವ- ಸಹಾಯ ಗುಂಪಿನಲ್ಲಿ ಸದಸ್ಯರಿರಬೇಕು. ಸಂಘದ ಸದಸ್ಯರು ಬಿಪಿಎಲ್ ಪಡಿತರ ಚೀಟಿ ಮತ್ತು ಆಧಾರ ಕಾರ್ಡ್ ಹೊಂದಿರಬೇಕು.

ಸ್ವ-ಸಹಾಯ ಸಂಘಗಳು ಸಕ್ಷಮ ಪ್ರಧಿಕಾರಗಳಿಂದ ನೋಂದಣಿಯಾಗಿರಬೇಕು ಹಾಗೂ ಸಂಘದ ಹೆಸರಿನಲ್ಲಿ ಬ್ಯಾಂಕ್‌ನಲ್ಲಿ ಉಳಿತಾಯ ಖಾತೆಯನ್ನು ಹೊಂದಿರಬೇಕು. ಸಂಘದಲ್ಲಿ ಒಬ್ಬ ಸದಸ್ಯರಿಗೆ ರೂ. 25,000 ರಂತೆ (ರೂ. 15000 ಸಹಾಯಧನ ಹಾಗೂ 10,000 ಸಾಲ) ಒಟ್ಟು ರೂ. 2,50,000 ನೀಡಲಾಗುವುದು.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಾರ್ಯಾಲಯ, ಡಾ. ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ 2ನೇ ಮಹಡಿ ಜಿಲ್ಲಾ ಆಡಳಿತ ಭವನ ರೂಂ ನಂಬರ್ 102 ಕೊಪ್ಪಳ ಇವರನ್ನು ಸಂಪರ್ಕಿಸಬಹುದು.

ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ಆರ್ಥಿಕ ಅಭಿವೃದ್ಧಿಗಾಗಿ ಕರ್ನಾಟಕ ಸರ್ಕಾರ 20/03/1975ರಂದು ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲಾಯಿತು. 16/08/2005ರಂದು ಡಾ. ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ಎಂದು ಮರುನಾಮಕರಣ ಮಾಡಲಾಯಿತು.

English summary
Dr. B. R. Ambedkar Development Corporation Karnataka invited applications under various schemes. Interested candidate can apply till November 20th.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X