ಗಣರಾಜ್ಯೋತ್ಸವದಂದು ಅಂಬೇಡ್ಕರ್ ಭಾವಚಿತ್ರ ಕಡ್ಡಾಯ: ಆದೇಶ
ಬೆಂಗಳೂರು, ಜನವರಿ 23: ಗಣರಾಜ್ಯೋತ್ಸವ ದಿನಾಚರಣೆ ವೇಳೆ ಕಡ್ಡಾಯವಾಗಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರವನ್ನು ಇಡುವಂತೆ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ.
ಜನವರಿ 26 ರ ಗಣರಾಜ್ಯೋತ್ಸವದಂದು ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಇಟ್ಟು ಗಣರಾಜ್ಯೋತ್ಸವ ಆಚರಣೆ ಮಾಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಮಾಡಿದೆ.
ಆದೇಶವನ್ನು ಸರ್ಕಾರದ ಅಧೀನ ಕಾರ್ಯದರ್ಶಿ ಹೊರಡಿಸಿದ್ದು, ಆದೇಶವನ್ನು ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಇಲಾಖೆ ನಿರ್ದೇಶಕರು, ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನೀಡಲಾಗಿದೆ.

ನವೆಂಬರ್ 26, 1949 ರಂದೇ ಸಂವಿಧಾನವನ್ನು ಅಂಗೀಕರಿಸಲಾಯಿತಾದರೂ, ಜಾರಿಗೆ ಬಂದು ಭಾರತವು ಪ್ರಜಾಪ್ರಭುತ್ವ ರಾಷ್ಟ್ರ ಎನಿಸಿಕೊಂಡಿದ್ದು ಜನವರಿ 26 1950 ರಿಂದ ಹಾಗಾಗಿ ಆ ದಿನವನ್ನು ಗಣರಾಜ್ಯೋತ್ಸವ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. ಇಂತಹಾ ದಿನದಂದು ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಭಾವಚಿತ್ರ ಇರುವುದು ಕಡ್ಡಾಯವೆಂಬುದು ಸರ್ಕಾರದ ಅಭಿಪ್ರಾಯವಾಗಿದೆ.












Click it and Unblock the Notifications