'ಧರ್ಮದ ಆಧಾರದಲ್ಲಿ ಮೀಸಲಾತಿ ನೀಡಲಾಗುವುದಿಲ್ಲ ಎಂದು ಅಂಬೇಡ್ಕರ್ ಹೇಳಿದ್ದಾರೆ' ಎಂದ ಅಸ್ಸಾಂ ಸಿಎಂ

ಬೆಂಗಳೂರು, ಮೇ. 03: ಕರ್ನಾಟಕದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಮುಸ್ಲಿಮರಿಗೆ ಮೀಸಲಾತಿ ನೀಡುವ ಕಾಂಗ್ರೆಸ್ ಹೇಳಿಕೆ ವಿರುದ್ಧ ಕಿಡಿಕಾರಿದ್ದಾರೆ. ಮೀಸಲಾತಿಯು ಧರ್ಮದ ಆಧಾರದ ಮೇಲೆ ಇರಬಾರದು, ಆದರೆ ಕಾಂಗ್ರೆಸ್ ಮುಸ್ಲಿಮರಿಗೆ ಮೀಸಲಾತಿ ನೀಡಲು ಬಯಸುತ್ತಿದೆ ಎಂದು ಹೇಳಿದ್ದಾರೆ.

ಧರ್ಮದ ಆಧಾರದಲ್ಲಿ ಮೀಸಲಾತಿ ನೀಡಲಾಗುವುದಿಲ್ಲ ಎಂದು ಬಾಬಾಸಾಹೇಬ್ ಅಂಬೇಡ್ಕರ್ ಹೇಳಿದ್ದರು. ಇದು ನಮ್ಮ ಸಂವಿಧಾನದ ಆಧಾರ. ಆದರೆ, ಇಂದು ಕಾಂಗ್ರೆಸ್ ಪಕ್ಷವು ಮುಸ್ಲಿಮರಿಗೆ ಮೀಸಲಾತಿ ನೀಡುತ್ತೇವೆ ಎಂದು ಕಾಂಗ್ರೆಸ್ ಹೇಳುತ್ತಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಬೆಂಗಳೂರಿನಲ್ಲಿ ಹೇಳಿದ್ದಾರೆ.

Ambedkar said reservation cannot be given on basis of religion says Himanta Biswa Sarma

ಕರ್ನಾಟಕದಲ್ಲಿ ಬಜರಂಗದಳವನ್ನು ನಿಷೇಧಿಸುವ ಚುನಾವಣಾ ಭರವಸೆ ನೀಡಿರುವ ಕಾಂಗ್ರೆಸ್ ಮತ್ತು ಅದರ ಪ್ರಣಾಳಿಕೆಯು "ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಪ್ರಣಾಳಿಕೆಯಂತೆ ಕಾಣುತ್ತಿದೆ. ಪಕ್ಷವು ಮುಸ್ಲಿಮರನ್ನು ಓಲೈಸಲು ಹಾಗೆ ಹೇಳುತ್ತಿದೆ ಎಂದು ಆರೋಪಿಸಿದ್ದಾರೆ.

"ಪಿಎಫ್‌ಐ ಸಂಘಟನೆಯನ್ನು ಈಗಾಗಲೇ ನಿಷೇಧಿಸಲಾಗಿದೆ. ಸಿದ್ದರಾಮಯ್ಯ ಸರ್ಕಾರ ತಮ್ಮ ಅಧಿಕಾರಾವಧಿಯಲ್ಲಿ ಪಿಎಫ್‌ಐ ವಿರುದ್ಧದ ಕೇಸ್‌ಗಳನ್ನು ಹಿಂಪಡೆದಿದೆ. ಹಾಗಾಗಿ ಅವರು (ಕಾಂಗ್ರೆಸ್) ಮುಸ್ಲಿಮರನ್ನು ಓಲೈಸಲು ಪಿಎಫ್‌ಐ ಮತ್ತು ಬಜರಂಗದಳವನ್ನು ನಿಷೇಧಿಸುವುದಾಗಿ ಹೇಳುತ್ತಿದ್ದಾರೆ. ಕಾಂಗ್ರೆಸ್‌ನ ಪ್ರಣಾಳಿಕೆಯು ಪಿಎಫ್‌ಐ ಮತ್ತು ಕೆಲವು ಮೂಲಭೂತವಾದಿ ಮುಸ್ಲಿಂ ಸಂಘಟನೆಗಳ ಪ್ರಣಾಳಿಕೆಯಂತೆ ಕಾಣುತ್ತದೆ" ಎಂದು ಮಾಧ್ಯಮದವರೊಂದಿಗೆ ಮಾತನಾಡುತ್ತಾ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.

Ambedkar said reservation cannot be given on basis of religion says Himanta Biswa Sarma

ಮುಂಬರುವ ಮೇ 10 ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಮಂಗಳವಾರ ಪ್ರಣಾಳಿಕೆ ಬಿಡುಗಡೆ ಮಾಡಿರುವ ಕಾಂಗ್ರೆಸ್ ಪಕ್ಷವು ಬಜರಂಗದಳ, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಇತರ ಸಂಘಟನೆಗಳ ಮೇಲೆ ಕಾನೂನಿನ ಪ್ರಕಾರ "ನಿರ್ಣಾಯಕ ಕ್ರಮ" ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಏಕರೂಪ ನಾಗರಿಕ ಸಂಹಿತೆಯ (ಯುಸಿಸಿ) ಅನುಷ್ಠಾನವು ರಾಜ್ಯದಲ್ಲಿ ಮುಸ್ಲಿಂ ಮಹಿಳೆಯರಿಗೆ ನ್ಯಾಯ ಮತ್ತು ಸಮಾನ ಹಕ್ಕುಗಳನ್ನು ನೀಡುತ್ತದೆ. ಪಕ್ಷವು ಮತ್ತೆ ಅಧಿಕಾರಕ್ಕೆ ಬಂದರೆ ಕರ್ನಾಟಕದಲ್ಲಿ ಯುಸಿಸಿಯನ್ನು ಜಾರಿಗೆ ತರುವುದಾಗಿ ಬಿಜೆಪಿ ಭರವಸೆ ನೀಡಿದೆ. ಕರ್ನಾಟಕ ಬಿಜೆಪಿ ಅತ್ಯಂತ ದಿಟ್ಟ ಬದ್ಧತೆಯನ್ನು ಘೋಷಿಸಿದೆ ರಾಷ್ಟ್ರವ್ಯಾಪಿ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ)ಗೆ ಈ ಸಮಯದ ಅಗತ್ಯವಾಗಿದೆ ಎಂದು ತಿಳಿಸಿದ್ದಾರೆ.

ಬಿಜೆಪಿಯು ತನ್ನ ಅಂತಿಮ ಹಂತದ ಪ್ರಚಾರದಲ್ಲಿ ರಾಜ್ಯದಲ್ಲಿ ಬೃಹತ್ ಸಮಾವೇಶಗಳು ಮತ್ತು ರೋಡ್‌ಶೋಗಳನ್ನು ನಡೆಸುತ್ತಿದೆ. ಬಿಜೆಪಿ ಅಧಿಕಾರದಲ್ಲಿರುವ ಏಕೈಕ ದಕಷಿಣ ರಾಜ್ಯ ಕರ್ನಾಟಕವಾಗಿದ್ದು, ಇದನ್ನು ಉಳಿಸಿಕೊಳ್ಳಲು ಪ್ರಯತ್ನ ಪಡುತ್ತಿದೆ. ಕರ್ನಾಟಕ ಚುನಾವಣೆಗೆ ಆಡಳಿತಾರೂಢ ಬಿಜೆಪಿ ತನ್ನ ಪ್ರಣಾಳಿಕೆಯನ್ನು ಸೋಮವಾರ ಬಿಡುಗಡೆ ಮಾಡಿದೆ. ಮೇ 10 ರಂದು ಕರ್ನಾಟಕ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+