ಆಂಬಿಡೆಂಟ್ ಪ್ರಕರಣ : ಅಲಿಖಾನ್‌ಗೆ ಷರತ್ತು ಬದ್ಧ ಜಾಮೀನು
ಬೆಂಗಳೂರು, ಡಿಸೆಂಬರ್ 05 : ಆಂಬಿಡೆಂಟ್ ವಂಚನೆ ಪ್ರಕರಣದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಆಪ್ತ ಅಲಿಖಾನ್‌ಗೆ ಷರತ್ತು ಬದ್ಧ ಜಾಮೀನು ಸಿಕ್ಕಿದೆ. ಅಲಿಖಾನ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್ ಬುಧವಾರ 1 ಲಕ್ಷ ರೂ. ಬಾಂಡ್, ಇಬ್ಬರ ಶ್ಯೂರಿಟಿ ಮತ್ತು ಸಾಕ್ಷಿ ನಾಶಮಾಡಬಾರದು ಎಂಬ ಷರತ್ತು ವಿಧಿಸಿ ಜಾಮೀನು ನೀಡಿದೆ. ಈ ಪ್ರಕರಣದಲ್ಲಿ ಅಲಿಖಾನ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿತ್ತು.

ನಿರೀಕ್ಷಣಾ ಜಾಮೀನು ಸಿಗದ ಹಿನ್ನಲೆಯಲ್ಲಿ ಅಲಿಖಾನ್ ಕೋರ್ಟ್‌ಗೆ ಶರಣಾಗಿದ್ದರು. ಬಳಿಕ ಸಿಸಿಬಿ ಪೊಲೀಸರು ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ವಿಚಾರಣೆ ಪೂರ್ಣಗೊಳಿಸಿದ ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.
ಆಂಬಿಡೆಂಟ್‌ಗೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸಬೇಕು ಎಂದು ಜನಾರ್ದನ ರೆಡ್ಡಿ ಮತ್ತು ಅಲಿಖಾನ್ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆಯನ್ನು ಕೋರ್ಟ್ ಮುಂದೂಡಿದ್ದು, ಬಲವಂತದಿಂದ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ಹೇಳಿದೆ.
ಅಂಬಿಡೆಂಟ್ ಪ್ರಕರಣದಲ್ಲಿ ಅಲಿಖಾನ್ ಅವರು 4ನೇ ಆರೋಪಿ. ಸಿಸಿಬಿ ಪೊಲೀಸರು ಅಲಿಖಾನ್ ಮನೆ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ವಶಕ್ಕೆ ಪಡೆದಿದ್ದರು.












Click it and Unblock the Notifications