ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಇದೇ ಅಧಿವೇಶನದಲ್ಲಿ ಲೋಕಾಯುಕ್ತ ಕಾಯ್ದೆಗೆ ತಿದ್ದುಪಡಿ'

By Prasad
|
Google Oneindia Kannada News

ಬೆಂಗಳೂರು, ಜು. 16 : ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಕುರಿತು ಉದ್ಭವಿಸಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಸಲುವಾಗಿ ಲೋಕಾಯುಕ್ತ ಕಾಯ್ದೆಗೆ ಸಮಗ್ರ ತಿದ್ದುಪಡಿ ಮಾಡಲು ಇದೇ ಅಧಿವೇಶನದಲ್ಲಿ ತಿದ್ದುಪಡಿ ಮಸೂದೆಯನ್ನು ಮಂಡಿಸುವುದಾಗಿ ಕಾನೂನು ಸಚಿವ ಟಿ. ಬಿ. ಜಯಚಂದ್ರ ಅವರು ವಿಧಾನಸಭೆಯಲ್ಲಿ ಗುರುವಾರ ತಿಳಿಸಿದರು.

ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಹಾಗೂ ಲೋಕಾಯುಕ್ತ ನ್ಯಾಯಮೂರ್ತಿ ಭಾಸ್ಕರ್ ರಾವ್ ಮತ್ತು ಅವರ ಮಗ ಅಶ್ವಿನ್‌ರಾವ್ ಅವರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ರಾಜ್ಯಾದ್ಯಂತ ನಡೆಯುತ್ತಿರುವ ಪ್ರತಿಭಟನೆ ನಡೆಯುತ್ತಿದೆ. ನಿಯಮ 69ರ ಅಡಿಯಲ್ಲಿ ಕಳೆದ ಮೂರು ದಿನಗಳಿಂದ ವಿಧಾನಸಭೆಯಲ್ಲಿ ಪಕ್ಷಾತೀತವಾಗಿ ನಡೆದ ಚರ್ಚೆಗೆ ಉತ್ತರಿಸಿದ ಸಚಿವರು, ಲೋಕಾಯುಕ್ತ ಕಾಯ್ದೆ ತಿದ್ದುಪಡಿ ಮಸೂದೆಯನ್ನು ಮಂಡಿಸುವುದಾಗಿ ಭರವಸೆ ನೀಡಿದರು. [5 ದಿನ ರಜೆ ಪಡೆದ ಲೋಕಾಯುಕ್ತ ನ್ಯಾ.ಭಾಸ್ಕರರಾವ್]

Amendment to Lokayukta Act in monsoon session : TB Jayachandra

ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿರುವ ಭ್ರಷ್ಟಾಚಾರದ ಕುರಿತು ತನಿಖೆ ನಡೆಸಲು ಎಡಿಜಿಪಿ ದರ್ಜೆಯ ಅಧಿಕಾರಿ ಕಮಲ್ ಪಂತ್ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ನೇಮಕ ಮಾಡಲಾಗಿದೆ. ಕಮಲ್ ಪಂತ್ ಅವರು ಸಿ.ಬಿ.ಐ ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿರುವ ದಕ್ಷ ಅಧಿಕಾರಿಯಾಗಿದ್ದು, ಅವರಿಗೆ ಬೇಕಾಗುವ ಸಿಬ್ಬಂದಿ ವರ್ಗ, ವಾಹನ, ಹಾಗೂ ಅಗತ್ಯ ಕಚೇರಿ ಸಾಮಗ್ರಿಗಳನ್ನು ಒದಗಿಸಿಕೊಡಲಾಗಿದೆ. ಅವರು ನಿಷ್ಪಕ್ಷಪಾತವಾಗಿ ತನಿಖೆಯನ್ನು ನಡೆಸಲಿದ್ದಾರೆ. ಆದ್ದರಿಂದ ಇದನ್ನು ಸಿಬಿಐಗೆ ವಹಿಸುವ ಅವಶ್ಯಕತೆ ಇಲ್ಲ ಎಂದರು.

ಯಾವುದೇ ಪ್ರಕರಣವನ್ನು ಮುಚ್ಚಿಹಾಕುವ ಪ್ರಯತ್ನಗಳು ನಡೆದಿಲ್ಲ, ಅಶ್ವಿನ್‌ರಾವ್ ಅವರ ಮೇಲೆ ಆರೋಪ ಪಟ್ಟಿ ಸಲ್ಲಿಕೆಯ ಕುರಿತಂತೆ ನ್ಯಾಯಾಲಯದಲ್ಲಿ ತಡೆಯಾಜ್ಞೆ ತಂದಿದ್ದು, ಪ್ರಕರಣವು ಜುಲೈ 25ರಂದು ನ್ಯಾಯಾಲಯದಲ್ಲಿ ಮತ್ತೆ ವಿಚಾರಣೆಗೆ ಬರಲಿದೆ. ನ್ಯಾಯಾಲಯದ ತೀರ್ಪಿನ ನಂತರ ಸರ್ಕಾರವು ಮುಂದೆ ಕ್ರಮಕೈಗೊಳ್ಳಲಿದೆ ಎಂದು ಸಚಿವರು ತಿಳಿಸಿದರು. [20 ಲಕ್ಷ ರೂ. ವಂಚನೆ ಮಾಡಿದ ಅಶ್ವಿನ್ ರಾವ್]

English summary
Law minister T.B. Jayachandra has assured that amendment to Karnataka Lokayukta Act will be implemented in the present monsoon session only. He said this amendment would solve all the problems related to corruption in Lokayukta office.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X