CM vs DCM: ಸಿಎಂ ಬದಲಾವಣೆ ಚರ್ಚೆ ನಡುವೆ ಡಿ.ಕೆ ಸುರೇಶ್ ಮಾರ್ಮಿಕ ಪೋಸ್ಟ್ ವೈರಲ್
ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುತದೊಂದಿಗೆ ಅಧಿಕಾರಕ್ಕೆ ಬಂದ ದಿನವೇ ಸಿಎಂ ಸ್ಥಾನಕ್ಕಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಬಿಗ್ ಫೈಟ್ ಏರ್ಪಟ್ಟಿತ್ತು. ಅಂತಿಮವಾಗಿ ಸಿಎಂ ಪಟ್ಟ ಸಿದ್ದರಾಮಯ್ಯ ಪಾಲಾಯಿತು. ಸದ್ಯ ಸರ್ಕಾರ ಎರಡವರೆ ವರ್ಷ ಪೂರೈಸಿದ್ದು, ಮುಖ್ಯಮಂತ್ರಿ ಸ್ಥಾನಕ್ಕಾಗಿ ಮತ್ತೆ ಡಿಸಿಎಂ ಡಿ ಕೆ ಶಿವಕುಮಾರ್ ಭರ್ಜರಿ ಪೈಪೋಟಿ ಶುರು ಮಾಡಿದ್ದಾರೆ.
ಸರ್ಕಾರ ರಚನೆಯ ಸಂದರ್ಭದಲ್ಲಿ ಚರ್ಚೆಯಾದ ಅಧಿಕಾರ ಹಂಚಿಕೆಯ ಸೂತ್ರದ ಕುರಿತು ಡಿ ಕೆ ಶಿವಕುಮಾರ್ ಅವರು ಮಾಧ್ಯಮಗಳ ಜೊತೆಗಳ ಮುಂದೆ ಬಹಿರಂಗ ಪಡಿಸಿದ್ದಾರೆ. ಅಲ್ಲದೇ ದೆಹಲಿಯಲ್ಲಿಯೂ ಹೈಕಮಾಂಡ್ ನಾಯಕರ ಭೇಟಿ ಮಾಡಿರುವ ಡಿ ಕೆ ಶಿವಕುಮಾರ್ ಅವರು ನಾಯಕತ್ವ ಬದಲಾವಣೆ ಕುರಿತು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಅವರ ಜೊತೆಗೆ ಚರ್ಚೆ ನಡೆಸಿದ್ದಾರೆ. ಇನ್ನೂ ನಾಯಕತ್ವ ಬದಲಾವಣೆ ಕುರಿತು ಚರ್ಚೆ ನಡೆಯುತ್ತಿರುವ ಹೊತ್ತಲಿ ಡಿ ಕೆ ಶಿವಕುಮಾರ್ ಸಹೋದರ ಡಿ ಕೆ ಸುರೇಶ್ ಅವರು ಮಾರ್ಮಿಕ ಪೋಸ್ಟ್ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಯಾಗುತ್ತಿದೆ.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಆಡಳಿತಾರೂಢ ಕಾಂಗ್ರೆಸ್ ನಲ್ಲಿ ತೀವ್ರ ಚರ್ಚೆ ನಡೆಯುತ್ತಿರುವಂತೆಯೇ ಬುಧವಾರ ದೆಹಲಿಗೆ ತೆರಳಿದ್ದ ಡಿಕೆ ಶಿವಕುಮಾರ್ ರಾಹುಲ್ ಗಾಂಧಿ ಭೇಟಿಗೆ ಯತ್ನಿಸಿದ್ದಾರೆ. ಆದರೆ ಅದು ಆಗದಿದ್ದಕ್ಕೆ ಡಿ ಕೆ ಶಿವಕುಮಾರ್ ಅವರು ಬರಿಗೈನಲ್ಲೇ ವಾಪಸ್ ಆಗಿದ್ದಾರೆ. ಇತ್ತ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸಭೆಗೆ ಡಿಕೆ ಶಿವಕುಮಾರ್ ಅವರಿಗೂ ಆಹ್ವಾನ ಬಂದಿಲ್ಲ. ಬದಲಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮಾತ್ರ ಆಹ್ವಾನ ನೀಡಲಾಗಿದೆ. ಹೀಗಾಗಿ ಡಿಸೆಂಬರ್ 26 ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ.
ನಾಯಕತ್ವ ಬದಲಾವಣೆಯ ಬೆಳವಣಿಗೆಗಳ ನಡುವೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಸಹೋದರ ಹಾಗೂ ಮಾಜಿ ಸಂಸದ ಡಿಕೆ ಸುರೇಶ್ ಮಾಡಿರುವ ಮಾರ್ಮಿಕ್ ಪೋಸ್ಟ್ ಚರ್ಚೆಗೆ ಗ್ರಾಸವಾಗಿದೆ. ಗುರಿಯನ್ನು ಬೇಗ ತಲುಪಬೇಕು ಎನ್ನುವವರು ದಾರಿಯಲ್ಲಿ ವಿಶ್ರಮಿಸುತ್ತಾ ಕುಳಿತುಕೊಳ್ಳಬಾರದು ಎಂಬ ಪೋಸ್ಟ್ ಮಾಡಿದ್ದಾರೆ. ಯಾವ ಅರ್ಥದಲ್ಲಿ ಈ ಪೋಸ್ಟ್ ಮಾಡಿದ್ದಾರೆ ಎಂಬುದು ಇದೀಗ ಕುತೂಹಲಕ್ಕೆ ಕಾರಣವಾಗಿದೆ.
-
Siddaramaiah: ಶಿಸ್ತು, ಪ್ರಾಮಾಣಿಕತೆ ಮತ್ತು ಮಾನವೀಯತೆ ಪೊಲೀಸ್ ಸೇವೆಯ ಆಧಾರ: ಸಿದ್ದರಾಮಯ್ಯ -
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
12 ಕೋಟಿ ರೂ ಡ್ರಗ್ಸ್ ಜಪ್ತಿ: ಗಂಧದ ನಾಡು 'ಗಾಂಜಾ ಬೀಡು' ಮಾಡಿದ ಕಾಂಗ್ರೆಸ್ ಸರ್ಕಾರ; R ಅಶೋಕ -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ












Click it and Unblock the Notifications