ದಸರಾ ಸಂಭ್ರಮದ ನಡುವೆ ದೇವರ ಮೂರ್ತಿ ಭಗ್ನ ಮಾಡಿದ ಕಿಡಿಗೇಡಿಗಳು: ಸಾರ್ವಜನಿಕರ ಆಕ್ರೋಶ

ರಾಜ್ಯದಲ್ಲಿ ದಸರಾ ಪ್ರಾರಂಭವಾಗಿದ್ದು, ಅದ್ಧೂರಿ ನವರಾತ್ರಿ ಆಚರಣೆ ನಡೆದಿದೆ. ಇದರ ಬೆನ್ನಲ್ಲೇ ಅವಳಿ ನಗರದಲ್ಲಿ ದೇವರ ಮೂರ್ತಿ ಭಗ್ನ ಮಾಡಲಾಗಿದೆ. ಕಿಡಿಗೇಡಿಗಳ ಈ ಕೃತ್ಯಕ್ಕೆ ಇದೀಗ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ದಸರಾ ಸಂದರ್ಭದಲ್ಲಿ ರಾಜ್ಯದ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳು ನಡೆಯುತ್ತಿವೆ. ದೇವರ ಮೂರ್ತಿಯನ್ನು ಭಗ್ನಗೊಳಿಸಲಾಗಿದ್ದು, ಸಾರ್ವಜನಿಕರಿಂದ ವ್ಯಾಪಕರ ಆಕ್ರೋಶ ವ್ಯಕ್ತವಾಗಿದೆ.

ಹುಬ್ಬಳ್ಳಿಯಲ್ಲಿ ಭಾನುವಾರ ಕಿಡಗೇಡಿಗಳು ದತ್ತಾತ್ರೇಯ ದೇವರ ಮೂರ್ತಿಯನ್ನು ಭಗ್ನಗೊಳಿಸಿದ್ದಾರೆ. ಇಲ್ಲಿನ ಐತಿಹಾಸಿಕ ದೇವರ ವಿಗ್ರಹವನ್ನು ದುಷ್ಕರ್ಮಿಗಳು ವಿರೂಪಗೊಳಿಸಿದ್ದಾರೆ. ಈ ದೇವಸ್ಥಾನಕ್ಕೆ 20 ವರ್ಷದ ಇತಿಹಾಸ ಇದೆ. ಹುಬ್ಬಳ್ಳಿಯ ದೇಶಪಾಂಡೆ ನಗರದ ಅಪರ್ಣಾ ಅಪಾರ್ಟ್ಮೆಂಟ್ ಎನ್ನುವಲ್ಲಿ ಈ ಘಟನೆ ನಡೆದಿದ್ದು, ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಇಲ್ಲಿನ ಅಪಾರ್ಟ್ಮೆಂಟ್‌ನಲ್ಲಿನ ಐತಿಹಾಸಿಕ ದತ್ತಾತ್ರೇಯ ದೇವರ ವಿಗ್ರಹದ ನಾಲ್ಕು ಕೈಗಳನ್ನು ಮುರಿದು ವಿರೂಪಗೊಳಿಸಲಾಗಿದೆ.

Amid Dasara celebrations the miscreants who broke the idol of God Public outrage

ನವರಾತ್ರಿ ಹಿನ್ನೆಲೆಯಲ್ಲಿ ಈ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು ನಡೆಯುತ್ತಿವೆ. ಅಲ್ಲದೇ ಸ್ಥಳೀಯ ನಿವಾಸಿಗಳು ಶನಿವಾರ ರಾತ್ರಿಯಷ್ಟೇ ಇಲ್ಲಿ ದಾಂಡಿಯಾ ನೃತ್ಯ ಮಾಡಿದ್ದರು. ಈ ಬೆನ್ನಲ್ಲೇ ಮೂರ್ತಿ ಭಗ್ನವಾಗಿದ್ದು ಜನರಿಂದ ಆಕ್ರೋಶ ವ್ಯಕ್ತವಾಗಿದೆ. ಭಾನುವಾರ ಮುಂಜಾನೆ ಬಂದು ಭಕ್ತರು ನೋಡಿದ ಸಂದರ್ಭದಲ್ಲಿ ಮೂರ್ತಿ ಭಗ್ನವಾಗಿರುವುದು ಬೆಳಕಿಗೆ ಬಂದಿದೆ.

ಪೊಲೀಸರಿಂದ ಪರಿಶೀಲನೆ: ದೇವರ ಮೂರ್ತಿ ಭಗ್ನವಾದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಸ್ಥಳೀಯರು ಪೊಲೀಸರನ್ನು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಹದ್ದುಮೀರಿ ವರ್ತನೆ: ರಾಜ್ಯದಲ್ಲಿ ಕೆಲವರು ಹದ್ದು ಮೀರಿ ವರ್ತಿಸುತ್ತಿದ್ದಾರೆ ಎಂದು ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿದ್ದಾರೆ. ದೇಶಪಾಂಡೆ ನಗರದ ಶ್ರೀ ದತ್ತಾತ್ರೇಯ ಮಂದಿರದ ಭಗ್ನವಾದ ದೇವಾಲಯ ಪರಿಶೀಲನೆ ಮಾಡಿ ಅವರು ಮಾತನಾಡಿದರು. ಸಮಾಜದಲ್ಲಿ ಶಾಂತಿ - ಸುವ್ಯವಸ್ಥೆಯನ್ನು ಯಾರೇ ಹಾಳು ಮಾಡಿದರೂ ಅವರನ್ನು 24 ಗಂಟೆ ಒಳಗೆ ಬಂಧಿಸಬೇಕು. ದೇಶದಲ್ಲಿ ವಿಜೃಂಭಣೆಯಿಂದ ನವರಾತ್ರಿ ಸಂಭ್ರಮ ನಡೆದಿದೆ. ಇದನ್ನು ಕೆಲವು ದುಷ್ಕರ್ಮಿಗಳು ಹಾಳು ಮಾಡುತ್ತಿದ್ದಾರೆ. ಈ ಸಂಬಂಧ ಪೊಲೀಸ್ ಹಿರಿಯ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ ಎಂದರು.

ದಸರಾ ನಂತರ ಸಿ.ಎಂ ಇಳಿಯುತ್ತಾರೆ: ದಸರಾ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿ.ಎಂ ಸ್ಥಾನದಿಂದ ಕೆಳಗೆ ಇಳಿಯುತ್ತಾರೆ ಎಂದು ಶಾಸಕ ಮಹೇಶ್‌ ಟೆಂಗಿನಕಾಯಿ ಹೇಳಿದ್ದಾರೆ. ಇನ್ನು ಜಾತಿ ಗಣತಿಯಲ್ಲಿ ಹಲವು ಗೊಂದಲವಾಗಿದೆ ಎಂದು ಅವರು ಹೇಳಿದರು.

ಸಾರ್ವಜನಿಕವಾಗಿ ಕೆಲವೆಡೆ ಹಿಂದೂ - ಕ್ರೈಸ್ತ ಧರ್ಮದವರು ಎಂದು ಬರೆಸಿದ್ದಾರೆ. ಬೇಡ ಅಂದಾಗ ಜಾತಿ ಗಣತಿ ಯಾಕೆ ಮಾಡಿಸಬೇಕಿತ್ತು. ಅದು ಸರಿಯಿಲ್ಲ ಎನ್ನುವುದು ಎಲ್ಲರಿಗೂ ಗೊತ್ತಿದೆ. ಒಳ ಆಂತರಿಕ ಬೇಗುದಿ ಏನಿದೆ ಎಂದು ಕಾಂಗ್ರೆಸ್‌ ನಾಯಕ ಹರಿಪ್ರಸಾದ ಅವರಿಗೆ ಗೊತ್ತಿದೆ. ಅದಕ್ಕಾಗಿಯೇ ಅವರು ಬಿಡುಗಡೆ ಮಾಡಲು ಹೇಳಿದ್ದಾರೆ ಎಂದರು. ಇನ್ನು ಹನ್ನೊಂದು ವರ್ಷ ಒಂದು ಕಪ್ಪುಚುಕ್ಕೆ ಇಲ್ಲದೆ ಪ್ರಧಾನಿ ನರೇಂದ್ರ ಮೋದಿ ಅವರು ಆಡಳಿತ ನಡೆಸುತ್ತಿದ್ದಾರೆ ಎಂದು ಅವರು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+