ನಮಸ್ಕಾರ, ದಿಗ್ವಿಜಯ್ ಸಿಂಗ್ ಸರ್, ಹೋಗಿ ಬನ್ನಿ!

Subscribe to Oneindia Kannada

ಬೆಂಗಳೂರು, ಮಾರ್ಚ್ 19: ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಹುದ್ದೆಯಿಂದ ದಿಗ್ವಿಜಯ್ ಸಿಂಗ್ ರನ್ನು ಕಿತ್ತು ಹಾಕುವ ಸಾಧ್ಯತೆ ಇದೆ.

ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಭಾರತಕ್ಕೆ ಬಂದ ನಂತರ ಎಐಸಿಸಿಗೆ ಹೊಸ ಪ್ರಧಾನ ಕಾರ್ಯದರ್ಶಿಗಳು ಮತ್ತು ಕಾರ್ಯದರ್ಶಿಗಳನ್ನು ನೇಮಿಸಲಾಗುತ್ತದೆ. ಈ ಸಂದರ್ಭ ದಿಗ್ವಿಜಯ್ ರನ್ನು ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಹೊರಗಿಡುವ ಸಾಧ್ಯತೆ ಇದೆ. ಜತೆಗೆ ಕರ್ನಾಟಕ ಉಸ್ತುವಾರಿಯನ್ನೂ ಸಿಂಗ್ ಕೈಯಿಂದ ಕಿತ್ತುಕೊಳ್ಳುವ ಸಾಧ್ಯತೆ ಇದೆ.

ಒಡಿಶಾ ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡ ನಂತರ ಅಲ್ಲಿನ ಉಸ್ತುವಾರಿ ಹೊತ್ತಿದ್ದ ಕರ್ನಾಟಕ ಮೂಲದ ಬಿ.ಕೆ ಹರಿಪ್ರಸಾದ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ್ದರು. ಇದೇ ವೇಳೆ ಗೋವಾ ಚುನಾವಣೆಯ ಹೊಣೆ ಹೊತ್ತು ದಿಗ್ವಿಜಯ್ ಕೂಡಾ ರಾಜೀನಾಮೆ ನೀಡಬೇಕಾದ ಪ್ರಸಂಗವೂ ಒದಗಿ ಬಂದಿದೆ. [ಹಿಂದೆ ಬಿಜೆಪಿಗೇ ಬಿಸಿ ಮುಟ್ಟಿಸಿದ್ರೂ ಕಮಲ ಪಕ್ಷಕ್ಕೆ ಯೋಗಿಯೇ ಅಚ್ಚುಮೆಚ್ಚು]

ಇದೇ ವೇಳೆ ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರ ಬಗ್ಗೆಯೂ ನಿರ್ಧಾರ ತೆಗೆದುಕೊಳ್ಳಲಿದೆ. ಹಾಲಿ ಅಧ್ಯಕ್ಷ ಡಾ. ಜಿ ಪರಮೇಶ್ವರ್ ಭವಿಷ್ಯವನ್ನೂ ಕಾಂಗ್ರೆಸ್ ನಿರ್ಧರಿಸಲಿದೆ. ಇದೇ ವೇಳೆ ಇನ್ನೊಂದು ವರ್ಷದಲ್ಲಿ ರಾಜ್ಯದಲ್ಲಿ ಚುನಾವಣೆ ನಡೆಯಲಿರುವುದರಿಂದ ರಣತಂತ್ರ ಹೆಣೆಯುವ ಚಾಣಾಕ್ಷರೊಬ್ಬರನ್ನು ಕರ್ನಾಟಕ ಉಸ್ತುವಾರಿಗೆ ನೇಮಿಸಲು ಕಾಂಗ್ರೆಸ್ ಕಾತರವಾಗಿದೆ. ಯಾರು ಬರುತ್ತಾರಾ ಕಾದು ನೋಡಬೇಕು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Congress high command likely to drop Digvijaya Singh as in-charge for Karnataka after it loses in Goa. Amid of Karnataka assembly election in 2018, this is a crucial change that Congress want to made.
Please Wait while comments are loading...