ಓಮಿಕ್ರಾನ್ ಸೋಂಕು: ಅಂತರರಾಜ್ಯ ಗಡಿ ಬಂದ್ ಇಲ್ಲ: ಡಾ. ಅಶ್ವತ್ಥ ನಾರಾಯಣ ಸ್ಪಷ್ಟನೆ
ಬೆಳಗಾವಿ, ಜ.5: ಓಮಿಕ್ರಾನ್ ಸೋಂಕು ಹೆಚ್ಚುತ್ತಿರುವ ಸಂದರ್ಭದಲ್ಲಿ ರಾಜ್ಯದೊಳಗೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ಸರ್ಕಾರ, ಗಡಿಗಳನ್ನು ಸದ್ಯ ಬಂದ್ ಮಾಡುವ ಬಗ್ಗೆ ಯಾವ ನಿರ್ಧಾರ ಮಾಡಿಲ್ಲ.
'ಕೊರೋನಾ ಮತ್ತು ಓಮಿಕ್ರಾನ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವುದು ನಿಜವಾದರೂ ಬೆಳಗಾವಿ ಸೇರಿದಂತೆ ರಾಜ್ಯದ ಯಾವ ಕಡೆಗಳಲ್ಲೂ ಅಂತರರಾಜ್ಯ ಗಡಿಗಳನ್ನು ಬಂದ್ ಮಾಡುವ ಆಲೋಚನೆ ಸರಕಾರದ ಮುಂದಿಲ್ಲ' ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.
ಬೆಳಗಾವಿಯಲ್ಲಿ ಲಘು ಉದ್ಯೋಗ ಭಾರತಿ ವತಿಯಿಂದ ಕೃಷಿಯಲ್ಲಿ ತಂತ್ರಜ್ಞಾನ ಅಳವಡಿಕೆಗೆ ಸಂಬಂಧಿಸಿದಂತೆ 'ಟೆಕ್ ಭಾರತ್ 2022' ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದಕ್ಕಾಗಿ ಬೆಳಗಾವಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಅಂತರರಾಜ್ಯ ಗಡಿಗಳಲ್ಲಿ ರಾಜ್ಯದೊಳಕ್ಕೆ ಬರುವವರನ್ನು ಪರೀಕ್ಷೆಗೆ ಒಳಪಡಿಸಿ, ಹೆಚ್ಚಿನ ನಿಗಾ ವಹಿಸಲಾಗುವುದು. ಸೋಂಕಿತರು ಕಂಡುಬಂದರೆ ಅಂಥವರನ್ನು ಮಾತ್ರ ನಿಯಂತ್ರಿಸಲಾಗುವುದು. ಉಳಿದಂತೆ ಅಂತರರಾಜ್ಯ ಚಟುವಟಿಕೆ ಮತ್ತು ಓಡಾಟಗಳಿಗೆ ಮುಕ್ತ ಅವಕಾಶ ಮುಂದುವರಿಯಲಿದೆ' ಎಂದು ಸ್ಪಷ್ಟಪಡಿಸಿದರು.
ಪರಿಸ್ಥಿತಿ ಕೈಮೀರಿ ಹೋಗಬಾರದೆಂದು 15 ದಿನಗಳ ಮಟ್ಟಿಗೆ ಸರಕಾರವು ವಾರಾಂತ್ಯದ ಕರ್ಫ್ಯೂ ಸೇರಿದಂತೆ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಸಂಪೂರ್ಣ ಲಾಕ್ ಡೌನನ್ನು ತಡೆಯುವುದೇ ಇದರ ಹಿಂದಿನ ಸದುದ್ದೇಶವಾಗಿದೆ. ಕಚೇರಿಗಳು ಸೇರಿದಂತೆ ಪಬ್, ಬಾರ್, ಚಿತ್ರಮಂದಿರ ಇತ್ಯಾದಿಗಳಲ್ಲಿ ಸಾಮರ್ಥ್ಯದ ಶೇ.50ರಷ್ಟು ಮಾತ್ರ ಜನ ಸೇರುವಂತೆ ಸೂಚಿಸಲಾಗಿದೆ ಎಂದು ಅವರು ಹೇಳಿದರು.

ವೈದ್ಯಕೀಯ ಕಾಲೇಜುಗಳಲ್ಲೂ ಅಲ್ಲಿನ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ಬೂಸ್ಟರ್ ಡೋಸ್ ಕೊಡಲಾಗುತ್ತಿದ್ದು, ಪರಿಸ್ಥಿತಿಯನ್ನು ಎದುರಿಸಲು ಸಜ್ಜುಗೊಳಿಸಲಾಗಿದೆ. ಹತ್ತು ದಿನಗಳ ನಂತರ ಮತ್ತೊಮ್ಮೆ ಸಮಾಲೋಚಿಸಿ, ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.
ಕಡ್ಡಾಯವಾಗಿ ಮಾಸ್ಕ್ ಧರಿಸಿ:
ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಕೆಲವು ನಿರ್ಬಂಧಗಳನ್ನು ಪ್ರಕಟಿಸಲಾಗಿದೆ. ಹೊರಗಡೆ ಹೋಗುವಾಗ ದಯವಿಟ್ಟು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಮರೆಯದೇ ಲಸಿಕೆ ಪಡೆಯಿರಿ ಮತ್ತು ಎಲ್ಲಾ ಕೋವಿಡ್ ನಿಯಮಗಳನ್ನು ತಪ್ಪದೇ ಪಾಲಿಸಿ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಕೂ ಮಾಡಿದ್ದಾರೆ.
ಕೋವಿಡ್ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ವಾರಾಂತ್ಯದ ಕರ್ಫ್ಯೂ ಸೇರಿದಂತೆ ಕೆಲ ನಿರ್ಬಂಧಗಳನ್ನು ಜಾರಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಾರ್ವಜನಿಕರು ಆರೋಗ್ಯದ ಹಿತದೃಷ್ಟಿಯಿಂದ ಸರ್ಕಾರದ ಮಾರ್ಗಸೂಚಿಯನ್ನು ತಪ್ಪದೇ ಪಾಲಿಸಿ ಎಂದು ಹೇಳಿದ್ದಾರೆ.
Koo Appಸಾಂಕ್ರಾಮಿಕ ಕೊರೋನ ಮಹಾಮಾರಿಯನ್ನು ಹೊಡೆದೋಡಿಸಲು ಎಲ್ಲರೂ ಸಂಕಲ್ಪ ಮಾಡೋಣ. ಮುಂಜಾಗ್ರತಾ ಕ್ರಮವಾಗಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಗಳನ್ನು ಧರಿಸೋಣ. ಸಾಮಾಜಿಕ ಅಂತರವನ್ನು ಪಾಲಿಸೋಣ, ಸ್ಯಾನಿಟೈಸರ್ ಬಳಸಿ ಶುದ್ಧತೆಯನ್ನು ಕಾಪಾಡೋಣ. ಬನ್ನಿ ಸಾಂಕ್ರಾಮಿಕ ಪಿಡುಗಿನ ವಿರುದ್ಧ ಎಲ್ಲರೂ ಒಗ್ಗಟ್ಟಾಗಿ ಹೋರಾಡೋಣ. ಕೊರೋನ ಮುಕ್ತ ಸಮಾಜ ನಿರ್ಮಿಸೋಣ. - B. Y. Raghavendra (@byrbjp) 5 Jan 2022
ಸಾಂಕ್ರಾಮಿಕ ಕೊರೋನ ಮಹಾಮಾರಿಯನ್ನು ಹೊಡೆದೋಡಿಸಲು ಎಲ್ಲರೂ ಸಂಕಲ್ಪ ಮಾಡೋಣ. ಮುಂಜಾಗ್ರತಾ ಕ್ರಮವಾಗಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಗಳನ್ನು ಧರಿಸೋಣ. ಸಾಮಾಜಿಕ ಅಂತರವನ್ನು ಪಾಲಿಸೋಣ, ಸ್ಯಾನಿಟೈಸರ್ ಬಳಸಿ ಶುದ್ಧತೆಯನ್ನು ಕಾಪಾಡೋಣ. ಬನ್ನಿ ಸಾಂಕ್ರಾಮಿಕ ಪಿಡುಗಿನ ವಿರುದ್ಧ ಎಲ್ಲರೂ ಒಗ್ಗಟ್ಟಾಗಿ ಹೋರಾಡೋಣ. ಕೊರೋನ ಮುಕ್ತ ಸಮಾಜ ನಿರ್ಮಿಸೋಣ ಎಂದು ಸಲಹೆ ನೀಡಿದ್ದಾರೆ.












Click it and Unblock the Notifications