Sriramulu: ಅಜ್ಞಾತ ಸ್ಥಳದಲ್ಲಿ ಶ್ರೀರಾಮುಲು, ಅಮಿತ್ ಶಾ ಕರೆ
ಬೆಂಗಳೂರು, ಜನವರಿ 28: ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ಜೋರಾಗಿರುವ ಬೆನ್ನಲ್ಲೇ ಮಾಜಿ ಸಚಿವ ಬಿ.ಶ್ರೀರಾಮುಲು ಪಕ್ಷ ತೊರೆಯುವ ಸುಳಿವು ನೀಡಿದ್ದಾರೆ. ಶ್ರೀರಾಮುಲು ಪಕ್ಷ ಬಿಡುವ ಕುರಿತು ಹೇಳಿಕೆ ನೀಡುವ ಮೂಲಕ ಬಿಜೆಪಿಗೆ ದೊಡ್ಡ ಶಾಕ್ ನೀಡಿದ್ದು, ಅಜ್ಞಾತ ಸ್ಥಳದಲ್ಲಿರುವ ಶ್ರೀರಾಮುಲು ಅವರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ದೂರವಾಣಿ ಕರೆ ಮಾಡಿದ್ದಾರೆ.
ಆಪ್ತ ಸ್ನೇಹಿತ ಜನಾರ್ದನ ರೆಡ್ಡಿ ವಿರುದ್ಧ ಗಂಭೀರ ಆರೋಪ ಮಾಡಿರುವ ಶ್ರೀರಾಮುಲು ಪಕ್ಷ ಬಿಡುವ ಕುರಿತು ಹೇಳಿಕೆ ನೀಡುವ ಮೂಲಕ ಬಿಜೆಪಿಗೆ ದೊಡ್ಡ ಶಾಕ್ ಉಂಟಾಗಿದ್ದು, ಮಾಜಿ ಸಚಿವ ಜನಾರ್ದನ ರೆಡ್ಡಿ ವಿರುದ್ಧ ಮುನಿಸಿಕೊಂಡಿರುವ ಮಾಜಿ ಸಚಿವ ಬಿ. ಶ್ರೀರಾಮುಲುಗೆ ಕೇಂದ್ರ ಗೃಹಸಚಿವ ಅಮಿತ್ ಶಾ ಕರೆ ಮಾಡಿದ್ದಾರೆ. ಅಲ್ಲದೇ ದೆಹಲಿಗೆ ಬರುವಂತೆ ಅಮಿತ್ ಶಾ ಸೂಚನೆ ನೀಡಿದ್ದಾರೆ.

ಈಗಾಗಲೇ ಮಾಜಿ ಸಚಿವ ಶ್ರೀರಾಮುಲು ಅವರು ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಮಾಜಿ ಸಚಿವ ಜನಾರ್ದನ ರೆಡ್ಡಿ ವಿರುದ್ಧ ಸಿಡಿದೆದ್ದಿದ್ದರು. ಇದೀಗ ಶ್ರೀರಾಮುಲುಗೆ ಅಮಿತ್ ಶಾ ಕರೆ ಮಾಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಅಜ್ಞಾತ ಸ್ಥಳದಲ್ಲಿ ಶ್ರೀರಾಮುಲು ಅವರಿಗೆ ಕೇಂದ್ರ ಗೃಹಸಚಿವ ಅಮಿತ್ ಶಾ ಕರೆ ಮಾಡಿ ಈ ಸೋಮವಾರವೇ ದೆಹಲಿಗೆ ಬರುವಂತೆ ಸೂಚನೆ ನೀಡಿದ್ದಾರೆ. ಸೋಮವಾರದಿಂದ ಸಂಸತ್ ಬಜೆಟ್ ಅಧಿವೇಶನ ಪ್ರಾರಂಭವಾಗಲಿದೆ. ಈ ಅಧಿವೇಶನದ ಸಂದರ್ಭದಲ್ಲಿ ಭೇಟಿಯಾಗಿ, ಚರ್ಚೆ ಮಾಡಲು ಅಮಿತ್ ಶಾ ನಿರ್ಧಾರ ಮಾಡಿದ್ದಾರೆ. ಈ ವೇಳೆ ಅಮಿತ್ ಶಾ ಜೊತೆಗಿನ ಶ್ರೀರಾಮಲು ಭೇಟಿ ಭಾರೀ ಮಹತ್ವ ಪಡೆದುಕೊಂಡಿದೆ ಎಂದು ಹೇಳಲಾಗಿದೆ. ಇನ್ನೂ ಸಂಡೂರು ಉಪಚುನಾವಣೆ ಸಂದರ್ಭದಲ್ಲಿ ನಾನು ಕೆಲಸ ಮಾಡಿದ್ದೇನೆ ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಮೇಲೂ ಶ್ರೀರಾಮುಲು ಸಿಟ್ಟಾಗಿದ್ದಾರೆ.
ಕಳೆದ ವಾರ ಬಿಜೆಪಿ ರಾಜ್ಯ ಉಸ್ತುವಾರಿ ರಾಧಾ ಮೋಹನದಾಸ್ ಅವರ ನೇತೃತ್ವದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ನಡೆದಿತ್ತು. ಈ ಸಭೆಯಲ್ಲಿ ಸಂಡೂರು ಉಪಚುನಾವಣೆಯ ಚರ್ಚೆ ಬಂದಾಗ ರಾಧಾ ಮೋಹದಾಸ್ ಅಗರವಾಲ್ ಅವರು ಬಂಗಾರು ಹನುಮಂತು ಸೋಲಿಗೆ ಮಾಜಿ ಸಚಿವ ಶ್ರೀರಾಮುಲು ಕಾರಣ ಎಂದು ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಹೀಗಾಗಿ ಇದು ಶ್ರೀರಾಮುಲು ಅಸಮಾಧಾನಕ್ಕೆ ಕಾರಣವಾಗಿತ್ತು.
ಸಂಡೂರು ಚುನಾವಣೆಯ ಬಳಿಕ ಶ್ರೀರಾಮುಲು ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿದ್ದ ಬಂಗಾರು ಹನುಮಂತು ದೂರು ನೀಡಿದ್ದರು .ಇನ್ನು ಆ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ನಾಯಕರ ಶ್ರಮ ಸಾಕಾಗಿಲ್ಲ ಎಂದು ಶ್ರೀರಾಮುಲು ಅವರನ್ನು ಸೇರಿಸಿ ಬೇಸರ ವ್ಯಕ್ತಪಡಿಸಿದ್ದಾರೆ. ಎಲ್ಲಾ ಈ ಬೆಳವಣೆಗೆಯ ಮಧ್ಯ ಶ್ರೀರಾಮುಲು ಖಾಸಗಿ ಚಾನಲ್ ನಲ್ಲಿ ಪಕ್ಷ ಬಿಡುಗ ಮಾತನಾಡಿದ್ದಾರೆ. ಅಲ್ಲದೇ ನನ್ನ ಮುಗಿಸಲು ಜನಾರ್ದನ ರೆಡ್ಡಿ ಪ್ರಯತ್ನ ನಡೆಸಿದ್ದಾರೆ ಎಂದು ಶ್ರೀರಾಮುಲು ಆರೋಪಿಸಿದ್ದಾರೆ.
ಮಾಜಿ ಸಚಿವ ಜನಾರ್ದನ ರೆಡ್ಡಿ ನನ್ನನ್ನು ರಾಜಕೀಯವಾಗಿ ಮುಗಿಸಲು ಯತ್ನಿಸುತ್ತಿದ್ದಾರೆ. ಈ ವಿಚಾರವನ್ನು ರಾಜ್ಯಾಧ್ಯಕರಿಗೂ ತಿಳಿಸಿದ್ದೇನೆ. ನಾನು ಕೆಲಸ ಮಾಡಿಲ್ಲ ಎಂದು ಜನಾರ್ದನರೆಡ್ಡಿ ಹೇಳರೋದು ಸ್ಪಷ್ಟವಾಗಿದೆ. ಜನಾರ್ದನ ರೆಡ್ಡಿ ನನ್ನನ್ನು ರಾಜಕೀಯವಾಗಿ ಮುಗಿಸಲು ಯತ್ನಿಸುತ್ತಿದ್ದಾರೆ. ಜನಾರ್ದನ ರೆಡ್ಡಿ ಮಾತು ಕೇಳಿ ನನ್ನ ಬಗ್ಗೆ ರಾಧಾಮೋಹನ್ ದಾಸ್ ಲಘುವಾಗಿ ಮಾತನಾಡಿದ್ದಾರೆ ಎಂದು ಮಾಜಿ ಸಚಿವ ಶ್ರೀರಾಮುಲು ಬೇಸರ ಹೊರ ಹಾಕಿದ್ದರು.












Click it and Unblock the Notifications